ಬೆಂಗಳೂರು: ಕರ್ನಾಟಕದ ಚನ್ನಪಟ್ಟಣ, ಸಂಡೂರು, ಶಿಗ್ಗಾಂವಿ ಉಪ ಚುನಾವಣೆ ಕದನ ಕಣ ರಂಗೇರಿದೆ. ಮೂರು ಕ್ಷೇತ್ರಗಳಲ್ಲಿ ಬಹಿರಂಗ ಪ್ರಚಾರಕ್ಕೆ ತೆರೆಬಿದ್ದಿದೆ. ಮತದಾನಕ್ಕೆ ಕ್ಷಣಗಣನೆ ಶುರುವಾಗಿದೆ. ಇವತ್ತು ಮನೆ ಮನೆ ಪ್ರಚಾರಕ್ಕೆ ಅವಕಾಶ ನೀಡಲಾಗಿದೆ.
ಬುಧವಾರ ಬೆಳಗ್ಗೆ 7 ಗಂಟೆಯಿಂದ ಸಂಜೆ 6ಗಂಟೆ ವರೆಗೂ ವೋಟಿಂಗ್ ನಡೆಯಲಿದೆ. ಇದಕ್ಕಾಗಿ ಚುನಾವಣಾ ಆಯೋಗ ಸಕಲ ಸಿದ್ಧತೆ ಮಾಡಿಕೊಂಡಿದೆ. 3ಕ್ಷೇತ್ರಗಳ ಗಡಿಯಲ್ಲಿ ಆಯೋಗ ನಿಗಾವಹಿಸಿದ್ದು, ಕ್ಷೇತ್ರದ ಸುತ್ತ 5 ಕಿ.ಮೀ ಮದ್ಯ ಮಾರಾಟ ಸಂಪೂರ್ಣ ಬಂದ್ ಮಾಡಲಾಗಿದೆ. ಸೋಮವಾರ ಸಂಜೆ 6 ಗಂಟೆಯಿಂದ ಗುರುವಾರ ಬೆಳಗ್ಗೆ 6 ಗಂಟೆವರೆಗೂ ಮದ್ಯ ಮಾರಾಟ ನಿಷೇಧಿಸಲಾಗಿದೆ.
ಶಿಗ್ಗಾಂವಿ ಕ್ಷೇತ್ರದಲ್ಲಿ ಒಟ್ಟು 241 ಮತಗಟ್ಟೆಗಳ ಸ್ಥಾಪಿಸಲಾಗಿದೆ. ಈಪೈಕಿ 92 ಸೂಕ್ಷ್ಮ ಮತಗಟ್ಟೆ ಎಂದು ಗುರುತಿಸಲಾಗಿದೆ. ಸೂಕ್ಷ್ಮ ಮತಗಟ್ಟೆಗಳಿಗೆ 10 ಮಂದಿ ವೀಕ್ಷಕರನ್ನು ನೇಮಿಸಲಾಗಿದೆ. 121 ಮತಗಟ್ಟೆಗಳಿಗೂ ವೆಬ್ ಕಾಸ್ಟಿಂಗ್ ಸೌಲಭ್ಯ ಮಾಡಲಾಗಿದೆ. ಕ್ಷೇತ್ರದಲ್ಲಿ 20 ವಿಡಿಯೋ ಗ್ರಾಫರ್ಗಳನ್ನು ನಿಯೋಜಿಸಲಾಗಿದೆ. ಒಟ್ಟು 1,060 ಅಧಿಕಾರಿಗಳು, ಸಿಬ್ಬಂದಿ ನಿಯೋಜನೆ ಮಾಡಲಾಗಿದೆ. ಭದ್ರತೆಗೆ ಪೊಲೀಸ್, ಸಿಆರ್ಪಿಎಫ್, ಸಿಎಪಿಎಫ್ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಮತಗಟ್ಟೆಗಳಲ್ಲಿ ರ್ಯಾಂಪ್, ಕುಡಿಯುವ ನೀರು, ವ್ಹೀಲ್ಚೇರ್ ಸೌಲಭ್ಯ ವ್ಯವಸ್ಥೆ ಮಾಡಲಾಗಿದ್ದು, ಹಿರಿಯ ನಾಗರಿಕರ ಮತದಾನಕ್ಕೆ ಆದ್ಯತೆ ಮೇರೆಗೆ ಅನುಕೂಲ ನೀಡಲಾಗಿದೆ. ಶಿಗ್ಗಾಂವಿ ಕ್ಷೇತ್ರದಲ್ಲಿ 2,37,525 ಮತದಾರರಿದ್ದಾರೆ. ಇದರಲ್ಲಿ 1.21,443 ಪುರುಷರು ಹಾಗೂ 1,16, 076 ಮಹಿಳೆಯರು ಇದ್ದಾರೆ. ಇತರೆ 6 ಇದೆ.
ಸಂಡೂರು ಕ್ಷೇತ್ರದಲ್ಲಿ ಒಟ್ಟು 2,36,100 ಮತದಾರರಿದ್ದಾರೆ. ಇದ್ರಲ್ಲಿ 1,18,282 ಮಹಿಳೆಯರಿದ್ದರೆ, 1,17,789 ಪುರುಷರಿದ್ದಾರೆ. ಇನ್ನೂ ಇತರೆ ಮತದಾರರು 29 ಮಂದಿ ಇದ್ದಾರೆ. ಸಂಡೂರು ಕ್ಷೇತ್ರದ ವ್ಯಾಪ್ತಿಯಲ್ಲಿ 253 ಮತಗಟ್ಟೆ ಸ್ಥಾಪಿಸಲಾಗಿದೆ. 253 ಪೈಕಿ 55 ಮತಗಟ್ಟೆಗಳು ಸೂಕ್ಷ್ಮ ಎಂದು ಗುರುತಿಸಲಾಗಿದೆ. 608 ಮತಗಟ್ಟೆ ಅಧಿಕಾರಿಗಳು ಸೇರಿ 1,215 ಸಿಬ್ಬಂದಿ ನಿಯೋಜಿಸಲಾಗಿದೆ. ಮತದಾನ ಕರ್ತವ್ಯಕ್ಕಾಗಿ 304 ಪಿಆರ್ಒ, 304 ಎಪಿಆರ್ಒ ನಿಯೋಜಿಸಲಾಗಿದೆ. ಭದ್ರತೆಗಾಗಿ 344 ಪೊಲೀಸ್ ಸಿಬ್ಬಂದಿ ನಿಯೋಜನೆ ಮಾಡಲಾಗಿದೆ. ಇದರ ಜೊತೆಗೆ ಕ್ಷೇತ್ರದಲ್ಲಿ 2 ಅಂತಾರಾಜ್ಯ ಸೇರಿದಂತೆ ಒಟ್ಟು 8 ಚೆಕ್ಪೋಸ್ಟ್ ಸ್ಥಾಪಿಸಲಾಗಿದೆ.
ಚನ್ನಪಟ್ಟಣ ಕ್ಷೇತ್ರದಲ್ಲಿ 2,32,836 ಮತದಾರಿದ್ದಾರೆ. 1,12,271 ಪುರುಷರಿದ್ದಾರೆ. 1,20,557 ಮಹಿಳಾ ಮತದಾರರಿದ್ದಾರೆ. ಜೊತೆಗೆ ಇತರೆ 8 ಮತದಾರರು ಇದ್ದಾರೆ.