spot_img
spot_img
spot_img
spot_img
spot_img
spot_img
spot_img
20.5 C
Belagavi
Sunday, December 10, 2023
spot_img

ಬೆಳಗಾವಿಯಲ್ಲಿ ಗಣೇಶ ವಿಸರ್ಜನೆಗೆ ಭಾರಿ ಸಿದ್ದತೆ

ಬೆಳಗಾವಿ: ಗಣೇಶನನ್ನು ಪ್ರತಿಷ್ಠಾಪಿಸಿ ಇಂದಿಗೆ 11 ದಿನ ಕಳೆದವು. ಉತ್ತರ ಕರ್ನಾಟಕದ ಬಹುತೇಕ ಸಾರ್ವಜನಿಕ ಗಣೇಶ ಮೂರ್ತಿಗಳನ್ನು ಇಂದು ವಿಸರ್ಜಿಸಲಾಗುತ್ತದೆ. ಹಾಗೆ ಕುಂದಾನಗರಿ ಬೆಳಗಾವಿಯಲ್ಲಿ ಇಂದು 11 ದಿನದ ಸಾರ್ವಜನಿಕ ಹಾಗೂ ಮನೆಯಲ್ಲಿ ಪ್ರತಿಷ್ಠಾಪಿಸಲಾಗಿದ್ದ ಗಣಪತಿ ಮೂರ್ತಿಗಳನ್ನು ವಿಸರ್ಜಿಸಲಾಗುತ್ತದೆ.

ಈ ಬಾರಿ ನಗರದಲ್ಲಿ 937 ಸಾರ್ವಜನಿಕ ವಿಘ್ನನಿವಾರಕನ ಮೂರ್ತಿಗಳನ್ನು ಪ್ರತಿಷ್ಠಾಪಿಸಲಾಗಿದೆ. ಮನೆ ಗಣಪ ಸೇರಿ ಇಡೀ ನಗರದಲ್ಲಿ ಐದು ಸಾವಿರಕ್ಕೂ ಅಧಿಕ ಗಣಪತಿಗಳನ್ನು ಶುಕ್ರವಾರ ವಿಸರ್ಜಿಸಲಾಗುತ್ತದೆ. ಈ ಹಿನ್ನೆಲೆಯಲ್ಲಿ ನಗರದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ. ನಗರದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡಲು ಪೊಲೀಸ್ ಆಯುಕ್ತ ಸಿದ್ದರಾಮಪ್ಪ ನೇತೃತ್ವದಲ್ಲಿ ಕಟ್ಟೆಚ್ಚರ ವಹಿಸಲಾಗಿದೆ.

ರಾಜ್ಯದ ವಿವಿಧ ಜಿಲ್ಲೆಗಳಿಂದ ಐದು ಜನ ಎಸ್‌ಪಿ, 20 ಜನ ಡಿಎಸ್‌ಪಿ, 72 ಜನ ಪಿಐ, 106 ಜನ ಪಿಎಸ್ಐ, 210 ಜನ ಎಎಸ್‌ಐ, 208 ಜನ ಪಿಸಿ, 405 ಜನ ಹೋಮ್ ಗಾರ್ಡ್, 10 ಮಂದಿ ಕೆಎಸ್‌ಆರ್‌ಪಿ ಪ್ರಹಾರ ದಳ ಆಗಮಿಸಿದ್ದಾರೆ. ಜತೆಗೆ ಸ್ಥಳೀಯ 3 ಜನ ಎಸ್‌ಪಿ ದರ್ಜೆಯ ಅಧಿಕಾರಿಗಳು,5 ಜನ ಡಿಎಸ್‌ಪಿ, 21 ಜನ ಪಿಐ, 36 ಜನ ‌ಪಿಎಸ್‌ಐ, 810 ಜನ ಪಿಸಿ, 8 ಜನ ಸಿಎಆರ್​ ಪ್ರಹಾರ ದಳವನ್ನು ನಿಯೋಜಿಸಲಾಗಿದೆ. ಅತೀ ಸೂಕ್ಷ್ಮ ಸ್ಥಳಗಳಲ್ಲಿ 487ಸಿಸಿಟಿವಿ ಕ್ಯಾಮರಾ ಅಳವಡಿಸಲಾಗಿದೆ. ಮಹಾನಗರ ಪಾಲಿಕೆ ಗಣಪತಿ ವಿಸರ್ಜನೆಗೆ ಆರು ಕಡೆಗಳಲ್ಲಿ ವ್ಯವಸ್ಥೆ ಮಾಡಿದೆ. ನಗರದಲ್ಲಿ ಅಕ್ಷರಶಃ ಪೊಲೀಸ್​ ಸರ್ಪಗಾವಲು ಇದೆ.

Related News

ಡಿ.15ರ ವರೆಗೆ ಬೆಳಗಾವಿ ಕೋಟೆ ಕೆರೆಯಲ್ಲಿ ಜಲ ಸಾಹಸ ಕ್ರೀಡಾ ಯೋಜನೆ

ಬೆಳಗಾವಿಯ ಕೋಟೆ ಕೆರೆಯಲ್ಲಿ ಯುವಜನ ಸಬಲೀಕರಣ ಮತ್ತು ‌ಕ್ರೀಡಾ ಇಲಾಖೆ ಹಾಗೂ ಜನರಲ್ ತಿಮ್ಮಯ್ಯ ರಾಷ್ಟ್ರೀಯ ಸಾಹಸ ಅಕಾಡೆಮಿಯ ವತಿಯಿಂದ ಜಲ ಸಾಹಸ ಕ್ರೀಡೆಗಳನ್ನು ಆಯೋಜಿಸಲಾಗಿದೆ. ವಿಧಾನಮಂಡಳ ಚಳಿಗಾಲ ಅಧಿವೇಶನ ಮುಕ್ತಾಯದವರೆಗೆ(ಡಿ.15 ವರೆಗೆ) ಶಾಲಾ...

ಜಾತ್ರೆ ಹಿನ್ನೆಲೆಯಲ್ಲಿ ಬೆನಕನಹಳ್ಳಿಯಲ್ಲಿ ಅಭಿವೃದ್ಧಿ ಕಾರ್ಯಗಳಿಗೆ ಚಾಲನೆ ನೀಡಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್

ಬೆಳಗಾವಿ: ಬೆಳಗಾವಿ ಗ್ರಾಮೀಣ ಕ್ಷೇತ್ರದ ಬೆನಕನಹಳ್ಳಿ ಗ್ರಾಮದ ಶ್ರೀ ಮಹಾಲಕ್ಷ್ಮಿ ದೇವಿಯ ಜಾತ್ರೆ ಹಿನ್ನೆಲೆಯಲ್ಲಿ ಗ್ರಾಮದಾದ್ಯಂತ ಅಭಿವೃದ್ಧಿ ಕೆಲಸಗಳಿಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಶನಿವಾರ ಭೂಮಿ ಪೂಜೆಯನ್ನು...

Latest News

- Advertisement -
- Advertisement -
- Advertisement -
- Advertisement -