spot_img
spot_img
spot_img
18 C
Belagavi
Thursday, September 29, 2022
spot_img

ಗರ್ಭಿಣಿ ಪತ್ನಿ ಮೇಲೆ ಡೀಸೆಲ್ ಸುರಿದು ಬೆಂಕಿ ಹಚ್ಚಿದ ಕೀಚಕ ಗಂಡ

spot_img

ಬೆಂಗಳೂರು : ರಾಜ್ಯದಲ್ಲಿ ವಿಕೃತ ಮನಸ್ಸಿನವರ ಸಂಖ್ಯೆ ಹೆಚ್ಚಾಗುತ್ತಿದೆ. ಸಪ್ತಪದಿ ತುಳಿದ ಮೂರು ತಿಂಗಳ ಗರ್ಭಿಣಿ ಹೆಂಡತಿಯನ್ನ ಡೀಸೆಲ್ ಸುರಿದು ಬೆಂಕಿ ಹಚ್ಚಿ ಕೊಲಲ್ಲು ಯತ್ನಿಸಿರುವ ಘಟನೆ ಕಾಕ್ಸ್ಟೌನ್ ದೊಡ್ಡಗುಂಟೆಯಲ್ಲಿ ನಡೆದಿದೆ. ಮೀನಾಗೆ (23) ಸಾವು ಬದುಕಿನ ನಡುವೆ ಹೋರಾಟ ನಡೆಸಿದ್ದಾಳೆ.

7 ವರ್ಷಗಳ ಹಿಂದೆ ವಿಜಯ್ ಕಾಂತ್ ಎಂಬಾತನೊಂದಿಗೆ ವಿವಾಹವಾಗಿದ್ದರು ಮೀನಾ. ಮೂರು ವರ್ಷಗಳ ಹಿಂದೆ ಮೊದಲ ಗಂಡ ವಿಜಯ್ ಕಾಂತ್ ನಿಧನರಾಗಿದ್ದರು. ವಿಜಯಕಾಂತ್ ನಿಧನದ ಬಳಿಕ ಒಂಟಿಯಾಗಿದ್ದ ಮೀನಾವರು ಪಕ್ಕದ ನಿವಾಸಿಯಾಗಿದ್ದ ಬಾಬು ಎಂಬಾತನೊಂದಿಗೆ ಏಳು ತಿಂಗಳ ಹಿಂದೆ ಮೀನಾ ಮದುವೆಯಾಗಿದ್ದರು, ದಂಪತಿ ಬೈಯಪ್ಪನಹಳ್ಳಿಯ ಬಾಡಿಗೆ ಮನೆಯೊಂದರಲ್ಲಿ ವಾಸವಾಗಿದ್ದರು.

ಬಾಬು ಕೂಲಿ ಕೆಲಸ ಮಾಡುತ್ತಿದ್ದರೆ, ಮೀನಾ ಬೇರೆಯವರ ಮನೆ ಕೆಲಸ ಮಾಡುತ್ತಿದ್ದಳು. ಕ್ರಮೇಣ ಕುಡಿತಕ್ಕೆ ದಾಸನಾದ ಬಾಬು, ನಿತ್ಯ ಕುಡಿದು ಮೀನಾಳೊಂದಿಗೆ ಜಗಳವಾಡುತ್ತಿದ್ದ. ಕುಡಿಯಲು ಹಣ ನೀಡುವಂತೆ ಪೀಡಿಸುತ್ತಿದ್ದ. ಇದರಿಂದ ರೋಸಿ ಹೋಗಿದ್ದ ಮೀನಾ, ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಗಂಡನಿಗೆ ಬೆದರಿಸಿದ್ದಳು.

ಇದರಿಂದ ಅಕ್ರೋಶಗೊಂಡ ಬಾಬು, ನೀನ್ಯಾಕೆ ಸಾಯುತ್ತೀಯ?, ನಾನೇ ಕೊಲ್ಲುವೆ ಎಂದು ಡೀಸೆಲ್ ಸುರಿದು ಬೆಂಕಿ ಹಚ್ಚಿ ಪರಾರಿ ಆಗಿದ್ದಾನೆ. ಬೆಂಕಿಯಲ್ಲಿ ಬೆಂದ ಮೀನಾಳನ್ನ ಸ್ಥಳೀಯರು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಿದ್ದು, ಚಿಕಿತ್ಸೆ ನೀಡಲಾಗುತ್ತಿದೆ. ಸದ್ಯಕ್ಕೆ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಆರೋಪಿಗಾಗಿ ಶೋಧ ನಡೆಸುತ್ತಿದ್ದಾರೆ.

spot_img

Related News

ಡಿ.ಕೆ.ಶಿವಕುಮಾರ್ ಮನೆ, ಕಚೇರಿ ಮೇಲೆ ಸಿಬಿಐ ದಾಳಿ

ಬೆಂಗಳೂರು: ಇಡಿ ಅಧಿಕಾರಿಗಳ ದಾಳಿಯ ಬಳಿಕ ವಿಚಾರಣೆ ಎದುರಿಸುತ್ತಿರುವ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ನಿವಾಸದ ಮೇಲೆ ಸಿಬಿಐ ಅಧಿಕಾರಿಗಳು ಇಂದು ದಾಳಿ ನಡೆಸಿದ್ದಾರೆ. ಕೇಂದ್ರ ತನಿಖಾ ದಳದ ಅಧಿಕಾರಿಗಳು ಡಿ ಕೆ ಶಿವಕುಮಾರ್...

ಮೂರು ಪಡೆಗಳ ಮುಖ್ಯಸ್ಥರಾಗಿ ಅನಿಲ್ ಚವ್ಹಾಣ್ ನೇಮಕ

ನವದೆಹಲಿ: ನಿವೃತ್ತ ಲೆಫ್ಟಿನೆಂಟ್ ಜನರಲ್ ಅನಿಲ್ ಚವ್ಹಾಣ್ ಅವರನ್ನು ನೂತನ ಸಿಡಿಎಸ್ ಆಗಿ ನೇಮಕ ಮಾಡಲಾಗಿದೆ. ಎರಡನೇ ಸಿಡಿಎಸ್ ಅನಿಲ್ ಚವ್ಹಾಣ್ ಅವರನ್ನು ಕೇಂದ್ರ ಸರ್ಕಾರ ನೇಮಕ ಮಾಡಿದೆ. ಹೆಲಿಕಾಪ್ಟರ್ ದುರಂತದಲ್ಲಿ ಬಿಪಿನ್ ರಾವತ್...

LEAVE A REPLY

Please enter your comment!
Please enter your name here

Latest News

- Advertisement -
- Advertisement -
- Advertisement -
- Advertisement -