ಬೆಳಗಾವಿ: ಜಿಲ್ಲಾ ಪ್ರವಾಸಕ್ಕೆಂದು ಆಗಮಿಸಿದ ಡಿಸಿಎಂ ಡಿಕೆ ಶಿವಕುಮಾರ್ ಅವರನ್ನು ಸ್ವಾಗತಿಸಲು ಜಿಲ್ಲೆಯ ಯಾವೊಬ್ಬ ಕಾಂಗ್ರೆಸ್ ಶಾಸಕನೂ ಆಗಮಿಸಿಲ್ಲ.
ಈ ಬಗ್ಗೆ ಮಾತನಾಡಿದ ಸಚಿವ ಸತೀಶ್ ಜಾರಕಿಹೊಳಿ, ಶಿವಕುಮಾರ್ ಅವರದ್ದು ಖಾಸಗಿ ಕಾರ್ಯಕ್ರಮವಾಗಿತ್ತು. ನಾನು ಜಿಲ್ಲೆಯಲ್ಲಿ ಇರುವುದಿಲ್ಲ ಎಂದು ಮೊದಲೇ ಹೇಳಿದ್ದೆ. ಬಹಳ ಮಂದಿ ಪ್ರವಾಸಕ್ಕೆ ಹೋಗಿದ್ದರು. ಜಿಲ್ಲಾಧ್ಯಕ್ಷರು ಕೂಡ ಪ್ರವಾಸ ಹೋಗಿದ್ದರು. ಹೀಗಾಗಿ ಅದಕ್ಕೆ ವಿಶೇಷ ಕಲ್ಪನೆ ಅರ್ಥ ಕೊಡುವ ಅಗತ್ಯವಿಲ್ಲ ಎಂದರು.