ಬೆಳಗಾವಿ : ಇಂದು ಪಂಚಮಸಾಲಿ ಸಮುದಾಯಕ್ಕೆ 2 ಎ ಮೀಸಲಾತಿ ಆಗ್ರಹಿಸಿ ಪಂಚಮಸಾಲಿ ಸಮುದಾಯ ಮತ್ತೆ ಹೋರಾಟ ಆರಂಭಿಸಿದೆ.
ಮೀಸಲಾತಿ ಘೋಷಿಸಿದ್ದರೆ ಸುವರ್ಣಸೌಧಕ್ಕೆ ಮುತ್ತಿಗೆ ಹಾಕುವುದಾಗಿ ಬಸವಜಯ ಮೃತ್ಯುಂಜಯ ಸ್ವಾಮೀಜಿ ಎಚ್ಚರಿಕೆ ನೀಡಿದ್ದಾರೆ.
ಸುವರ್ಣಸೌಧಕ್ಕೆ ಪಂಚಮಸಾಲಿ ಸಮಾಜ ಮುತ್ತಿಗೆ ಹಿನ್ನೆಲೆ ಪೊಲೀಸ್ ಬಂದೋಬಸ್ತ್ ಮಾಡಲಾಗಿದ್ದು, 6 ಸುವರ್ಣಸೌಧದ ಬಳಿ ಸಾವಿರಕ್ಕೂ ಹೆಚ್ಚು ಪೊಲೀಸರ ನಿಯೋಜನೆ ಮಾಡಲಾಗಿದೆ.
ಮುನ್ನೆಚ್ಚರಿಕೆ ಕ್ರಮವಾಗಿ ಹೆಚ್ಚುವರಿ ಪೊಲೀಸರ ನಿಯೋಜನೆ ಮಾಡಲಾಗಿದೆ. ಹೀರೇಬಾಗೇಬಾಡಿ-ಬೆಳಗಾವಿ ರಾಷ್ಟ್ರೀಯ ಹೆದ್ದಾರಿ ಬಂದ್ ಆಗುವ ಸಾಧ್ಯತೆ ಇದೆ, ಆದ್ದರಿಂದ ಎಲ್ಲೆಡೆ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ. ಈಗಾಗಲೇ ಹೋರಾಟ ಆರಂಭವಾಗಿದೆ.