spot_img
23.5 C
Belagavi
Sunday, December 4, 2022
spot_img

ಹೈಕಮಾಂಡ್ ಸಮ್ಮತಿಸಿದರೆ ಶೀಘ್ರದಲ್ಲೇ ಸಂಪುಟ ವಿಸ್ತರಣೆ : ಬೊಮ್ಮಾಯಿ 

ಚಿತ್ರದುರ್ಗ : ಹೈಕಮಾಂಡ್ ಸಮ್ಮತಿಸಿದರೆ ಶೀಘ್ರದಲ್ಲೇ ಸಚಿವ ಸಂಪುಟ ವಿಸ್ತರಣೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದೆಹಲಿಗೆ ಹೋಗಿ ಹೈಕಮಾಂಡ್ ನಾಯಕರನ್ನು ಭೇಟಿಯಾಗಿ ಬಂದ ಬಳಿಕ ಸಚಿವ ಸಂಪುಟ ವಿಸ್ತರಣೆ ಕುರಿತು ಚರ್ಚೆ ಮಾಡಲಾಗುವುದು ಎಂದು ತಿಳಿಸಿದ್ದಾರೆ.

ಸಚಿವ ಸಂಪುಟ ವಿಸ್ತರಣೆ ಬಗ್ಗೆ ಪಕ್ಷದ ವರಿಷ್ಠರ ಗಮನಕ್ಕೆ ತರಲಾಗಿದೆ. ಅವರು ಆದಷ್ಟೂ ಬೇಗನೇ ಸಚಿವ ಸಂಪುಟ ವಿಸ್ತರಣೆ ಮಾಡೋಣ ಎಂಬ ಭರವಸೆ ನೀಡಿದ್ದಾರೆ. ವರಿಷ್ಠರು ನನ್ನನ್ನು ಕರೆಸಿ ಮಾತನಾಡಿದರೆ ಆದಷ್ಟು ಬೇಗನೇ ಪ್ರಕ್ರಿಯೆ ಪ್ರಾರಂಭ ಮಾಡಲಾಗುವುದು ಎಂದು ಹೇಳಿದ್ದಾರೆ.

ಸದ್ಯ ಸಂಪುಟದಲ್ಲಿ ಖಾಲಿ ಇರುವ 6 ಸ್ಥಾನಗಳ ಭರ್ತಿ ಮಾಡುವ ಸಾಧ್ಯತೆ ಇದೆ. ಕೆ.ಎಸ್. ಈಶ್ವರಪ್ಪ, ರಮೇಶ್ ಜಾರಕಿಹೊಳಿ ಸಂಪುಟಕ್ಕೆ ಮರು ಸೇರ್ಪಡೆಯಾಗುವ ಸಾಧ್ಯತೆ ಇದೆ ಎನ್ನಲಾಗಿದೆ.

 

 

 

Related News

50 ಲಕ್ಷ ರೂ,ಗಳ ವೆಚ್ಚದಲ್ಲಿ ಮಂಡೋಳಿ ಗ್ರಾಮದ ರಸ್ತೆಗಳ ಅಭಿವೃದ್ಧಿ

ಬೆಳಗಾವಿ: ಬೆಳಗಾವಿ ಗ್ರಾಮೀಣ ಕ್ಷೇತ್ರದ ಮಂಡೋಳಿ ಗ್ರಾಮದ ರಸ್ತೆಗಳನ್ನು ಅಭಿವೃದ್ಧಿ ಪಡಿಸುವ ನಿಟ್ಟಿನಲ್ಲಿ ಜಿಲ್ಲಾ ಗಣಿ ನಿಧಿಯ ವತಿಯಿಂದ ಶಾಸಕಿ ಲಕ್ಷ್ಮೀ ಹೆಬ್ಬಾಳಕರ್ ಅವರು 50 ಲಕ್ಷ ರೂ,ಗಳನ್ನು ಮಂಜೂರು ಮಾಡಿಸಿದ್ದು, ಶನಿವಾರ...

ಬೆಳಗಾವಿ ಗ್ರಾಮೀಣ ಕ್ಷೇತ್ರದಲ್ಲಿ ಮುಂದುವರಿದ ಅಭಿವೃದ್ಧಿ ಯೋಜನೆಗಳ ಸರಣಿ

ಬೆಳಗಾವಿ : ಬೆಳಗಾವಿ ಗ್ರಾಮೀಣ ಕ್ಷೇತ್ರದ ಕಲ್ಲೆಹೋಳ ಗ್ರಾಮದ ರಸ್ತೆಗಳ ಅಭಿವೃದ್ಧಿಗಾಗಿ ಪಂಚಾಯತ ರಾಜ್ ಇಂಜಿನಿಯರಿಂಗ್ ಇಲಾಖೆಯ ವತಿಯಿಂದ 60 ಲಕ್ಷ ರೂ,ಗಳನ್ನು ಬಿಡುಗಡೆ ಮಾಡಿಸಿರುವ ಶಾಸಕಿ ಲಕ್ಷ್ಮೀ ಹೆಬ್ಬಾಳಕರ್, ಶನಿವಾರ ಕಾಂಕ್ರೀಟ್...

LEAVE A REPLY

Please enter your comment!
Please enter your name here

Latest News

- Advertisement -
- Advertisement -
- Advertisement -
- Advertisement -