ಸಿಕ್ಕಿಂ : ಉತ್ತರ ಸಿಕ್ಕಿಂನ ಝೆಮಾದಲ್ಲಿ ಭಾರತೀಯ ಸೇನಾ ಟ್ರಕ್ ಅಪಘಾತಕ್ಕೀಡಾಗಿದ್ದು, 16 ಸೈನಿಕರು ಹುತಾತ್ಮರಾಗಿದ್ದಾರೆ. ನಾಲ್ವರ ಸ್ಥಿತಿ ಗಂಭೀರವಾಗಿದ್ದು, ಉತ್ತರ ಬಂಗಾಳದ ಸೇನಾ ಆಸ್ಪತ್ರೆಗೆ ರವಾನಿಸಲಾಗಿದೆ.
ಭಾರತ-ಚೀನಾ ಗಡಿ ಸಮೀಪದ ಚೆಕ್ ಪೋಸ್ಟ್ಗಳತ್ತ 20 ಸೈನಿಕರನ್ನು ಕರೆದೊಯ್ಯುತ್ತಿದ್ದ ಸೇನಾ ವಾಹನವು ಝೆಮಾದಲ್ಲಿ ತಿರುವಿನಲ್ಲಿ ನೂರಾರು ಅಡಿ ಆಳದ ಪ್ರಪಾತಕ್ಕೆ ಬಿದ್ದಿದೆ.
ಈ ದುರ್ಘಟನೆಯಲ್ಲಿ 16 ಸೇನಾ ಸಿಬ್ಬಂದಿ ಸ್ಥಳದಲ್ಲೇ ಅಸುನೀಗಿದ್ದಾರೆ. ಅಪಘಾತದಲ್ಲಿ ಮೃತಪಟ್ಟ ಯೋಧರಿಗೆ ಭಾರತೀಯ ಸೇನೆ ಸಂತಾಪ ಸೂಚಿಸಿದೆ.