Ad imageAd image

ಹಾಸನಾಂಬಾ ಸನ್ನಿಧಾನದಲ್ಲಿ ಭರದ ಸಿದ್ಧತೆ: 9 ದಿನಗಳು ಮಾತ್ರ ಭಕ್ತರ ದರ್ಶನಕ್ಕೆ ಅವಕಾಶ

ratnakar
ಹಾಸನಾಂಬಾ ಸನ್ನಿಧಾನದಲ್ಲಿ ಭರದ ಸಿದ್ಧತೆ: 9 ದಿನಗಳು ಮಾತ್ರ ಭಕ್ತರ ದರ್ಶನಕ್ಕೆ ಅವಕಾಶ
WhatsApp Group Join Now
Telegram Group Join Now

ಹಾಸನ: ಈ ವರ್ಷದ ಹಾಸನಾಂಬ ದರ್ಶನಕ್ಕೆ ಕ್ಷಣಗಣನೆ ಆರಂಭವಾಗಿದ್ದು, ಇನ್ನೇನು ಕೆಲವೇ ಕ್ಷಣಗಳಲ್ಲಿ ದೇಗುಲದ ಗರ್ಭಗುಡಿ ಬಾಗಿಲು ತೆರೆಯಲಿದೆ. ಹಾಸನಾಂಬ ದರ್ಶನಕ್ಕೆ ಭರ್ಜರಿ ಸಿದ್ಧತೆ ನಡೆದಿದೆ. ಒಟ್ಟು 11 ದಿನ ದೇಗುಲದ ಬಾಗಿಲು ತೆರೆದಿರಲಿದೆ. ಆದರೆ 9 ದಿನಗಳು ಮಾತ್ರ ಭಕ್ತರ ದರ್ಶನಕ್ಕೆ ಅವಕಾಶ ಸಿಗಲಿದೆ.

ಇಂದಿನಿಂದ ಭಕ್ತರ ದರ್ಶನಕ್ಕೆ ಮುಕ್ತವಾಗುತ್ತಿದ್ದು, ನವೆಂಬರ್ 3ಕ್ಕೆ ಮದ್ಯಾಹ್ನ 12ಕ್ಕೆ ಗರ್ಭಗುಡಿ ಬಾಗಿಲನ್ನು ಮುಚ್ಚಲಾಗುತ್ತದೆ. ಅಲ್ಲಿವರೆಗೆ ಭಕ್ತರು ದೇವಿಯ ದರ್ಶನ ಪಡೆಬಹುದಾಗಿದೆ. ದಿನದ 24 ಗಂಟೆಗಳೂ ಕೂಡ ದೇವಿಯ ದರ್ಶನಕ್ಕೆ ಅವಕಾಶ ನೀಡಲಾಗಿದ್ದು, ಭಕ್ತರಿಗೆ ದರ್ಶನಕ್ಕೆ ಬೇಕಾದ ವಿಶೇಷ ವ್ಯವಸ್ಥೆ ಮಾಡಲಾಗಿದೆ. ಈ ಬಾರಿ ದಸರಾ ಮಾದರಿಯ ಲೈಟಿಂಗ್ಸ್,  ಲೈಟಿಂಗ್ ವೀಕ್ಷಣೆಗೆ ಡಬಲ್ ಡೆಕ್ಕರ್ ಬಸ್, ಭಕ್ತರಿಗೆ ವಿಶೇಷ ದರ್ಶನ ಅವಕಾಶ ಸೇರಿದಂತೆ ಹಲವು ಸಿದ್ಧತೆಗಳನ್ನು ಮಾಡಲಾಗಿದೆ.

WhatsApp Group Join Now
Telegram Group Join Now
Share This Article