spot_img
spot_img
spot_img
spot_img
spot_img
spot_img
spot_img
18.8 C
Belagavi
Tuesday, December 5, 2023
spot_img

ಇನ್ಫೋಸಿಸ್ ನಾರಾಯಣಮೂರ್ತಿ ಅಳಿಯ ಸುನಕ್ ಬ್ರಿಟನ್ ಪ್ರಧಾನಿ

ಲಂಡನ್‌: ರಿಶಿ ಸುನಕ್ ಅವರನ್ನು ಯುನೈಟೆಡ್ ಕಿಂಗ್ಡಮ್ನ ಪ್ರಧಾನಿಯಾಗಿ ಮತ್ತು ಕನ್ಸರ್ವೇಟಿವ್ ಪಕ್ಷದ ನಾಯಕರಾಗಿ ಆಯ್ಕೆ ಮಾಡಲಾಗಿದೆ. ಅವರ ಪ್ರತಿಸ್ಪರ್ಧಿ ಪೆನ್ನಿ ಮೊರ್ಡಾಂಟ್ ಅವರು 100 ಸಂಸದರ ಬೆಂಬಲವನ್ನು ಗಳಿಸಲು ವಿಫಲರಾಗಿದ್ದರಿಂದ ಅವರು 190 ಕ್ಕೂ ಹೆಚ್ಚು ಸಂಸದರಿಂದ ಚುನಾಯಿತರಾಗಿದ್ದಾರೆ.

ಪೆನ್ನಿ ಮೊರ್ಡೌಂಟ್ ಟ್ವೀಟನಲ್ಲಿ ತಾನು ರೇಸ್ನಿಂದ ಹೊರಗುಳಿಯುತ್ತಿದ್ದೇನೆ ಮತ್ತು ಯುಕೆ ಪ್ರಧಾನಿಯಾಗಿ ಸುನಕ್ ಅವರನ್ನು ಬೆಂಬಲಿಸುತ್ತಿದ್ದೇನೆ ಎಂದು ಘೋಷಿಸಿದರು. ಈ ಮೂಲಕ ಸುನಕ್ ಬ್ರಿಟನ್ 57 ನೇ ಪ್ರಧಾನ ಮಂತ್ರಿಯಾಗಿ ದೇಶವನ್ನು ಮುನ್ನಡೆಸಲಿದ್ದಾರೆ.

ಇನ್ನು ರಿಷಿ ಸುನಕ್ ಅವರ ಹಿನ್ನೆಲೆ ಗಮನಿಸುವುದ್ದಾರೇ ಪ್ರತಿಷ್ಠಿತ ವಿಂಚೆಸ್ಟರ್‌ ಕಾಲೇಜಿನಲ್ಲಿ ಅಧ್ಯಯನ ನಡೆಸಿರುವ ಸುನಕ್‌, ಆಕ್ಸ್‌ಫರ್ಡ್‌ ವಿವಿಯಲ್ಲಿ ರಾಜಕೀಯ, ಫಿಲಾಸಫಿ ಮತ್ತು ಅರ್ಥಶಾಸ್ತ್ರದಲ್ಲಿ ಉನ್ನತ ಶಿಕ್ಷಣ ಪಡೆದುಕೊಂಡಿದ್ದಾರೆ. ಅಮೆರಿಕಾ ಸ್ಟಾನ್‌ಫರ್ಡ್‌ ವಿವಿಯಿಂದ ಎಂಬಿಎ ಪದವಿಯನ್ನೂ ಪಡೆದುಕೊಂಡಿದ್ದಾರೆ.

ಸದ್ಯ ಹಣಕಾಸು ಸಚಿವ ಹುದ್ದೆಯಲ್ಲಿದ್ದು, 2015ರಲ್ಲಿ ರಿಷಿ ಬ್ರಿಟನ್ ಸಂಸತ್ತನ್ನ ಪ್ರವೇಶಿಸಿದರು. 2020ರಲ್ಲಿ ಬ್ರಿಟನ್ ಸಚಿವ ಸಂಪುಟದ ಪ್ರಮುಖ ಹುದ್ದೆಗಳಲ್ಲಿ ಒಂದಾದ ಹಣಕಾಸು ಸಚಿವರಾದ್ರು.

ವಿಶೇಷವೆಂದ್ರೆ, ಕೋವಿಡ್ 19 ಸಾಂಕ್ರಾಮಿಕದಿಂದ ಬ್ರಿಟನ್ ತತ್ತರಿಸುತ್ತಿದ್ದ ವೇಳೆ ಆರ್ಥಿಕತೆಯನ್ನ ನಿಭಾಯಿಸುವಲ್ಲಿ ರಿಷಿ ಯಶಸ್ವಿಯಾಗಿದ್ದು, ಕೊರೊನಾ ವೇಳೆ ನಷ್ಟದಿಂದ ತತ್ತರಿಸಿದ್ದ ಉದ್ಯಮಗಳಿಗೆ ಅನುಕೂಲಕರವಾದ ಯೋಜನೆಗಳನ್ನ ಜಾರಿಗೆ ತಂದಿದ್ದರು.

ಇನ್ನು ಸುನಕ್‌ ತಂದೆ ವೈದ್ಯರಾಗಿದ್ದು, ತಾಯಿ ರಾಸಾಯನಿಕ ವಸ್ತುಗಳ ಅಂಗಡಿ ನಡೆಸುತ್ತಿದ್ದರು. ಇನ್ನು ರಿಷಿ ನಾರಾಯಣ ಮೂರ್ತಿ ಮತ್ತು ಸುಧಾಮೂರ್ತಿ ದಂಪತಿ ಮಗಳು ಅಕ್ಷತಾರನ್ನ ವಿವಾಹವಾಗಿ ಬ್ರಿಟನ್‌ನಲ್ಲಿ ನೆಲೆಸಿದ್ದಾರೆ. ಇವರಿಗೆ ಕೃಷ್ಣ ಮತ್ತು ಅನುಷ್ಕಾ ಎಂಬ ಇಬ್ಬರು ಮಕ್ಕಳಿದ್ದಾರೆ.

Related News

2030 ರೊಳಗೆ ಅಪೌಷ್ಠಿಕತೆ ಗಣನೀಯ ಪ್ರಮಾಣದಲ್ಲಿ ನಿಯಂತ್ರಣ-ಸಚಿವ ದಿನೇಶ್ ಗುಂಡೂರಾವ್

ಸುವರ್ಣ ಸೌಧ ಬೆಳಗಾವಿ: ಮಹಿಳೆಯರು ಮತ್ತು ಮಕ್ಕಳಲ್ಲಿರುವ ರಕ್ತಹೀನತೆ(ಅನೀಮಿಯಾ)ವನ್ನು 2030 ರೊಳಗೆ ಸಂಪೂರ್ಣವಾಗಿ ನಿವಾರಿಸಲಾಗುವುದು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ಹೇಳಿದರು. ವಿಧಾನಪರಿಷತ್ತಿನ ಶೂನ್ಯ ವೇಳೆಯಲ್ಲಿ ಸದಸ್ಯ ನಾಗರಾಜ್...

ಆನೆ ಹಾವಳಿ ನಿಯಂತ್ರಣ ಸಿಬ್ಬಂದಿಗೆ ಹೆಚ್ಚಿನ ತರಬೇತಿ-ಸಚಿವ ಈಶ್ವರ ಖಂಡ್ರೆ

ಸುವರ್ಣ ಸೌಧ ಬೆಳಗಾವಿ: ರಾಜ್ಯದಲ್ಲಿ ಈಗಾಗಲೇ ಏಳು ಆನೆ ಕಾರ್ಯಪಡೆ ತಂಡಗಳನ್ನು ರಚಿಸಲಾಗಿದ್ದು, ಆನೆ ಹಿಡಿಯಲು ನಿಯೋಜಿಸಿರುವ ಸಿಬ್ಬಂದಿಗಳಿಗೆ ಹೆಚ್ಚಿನ ತರಬೇತಿ ನೀಡಲಾಗುವುದ ಎಂದು ಅರಣ್ಯ ,ಜೈವಿಕ ಮತ್ತು ಪರಿಸರ ಸಚಿವ ಈಶ್ವರ...

Latest News

- Advertisement -
- Advertisement -
- Advertisement -
- Advertisement -