ಬೆಳಗಾವಿ: ಸುವರ್ಣ ಸೌಧದಲ್ಲಿ ಸಾವರ್ಕರ್ ಭಾವಚಿತ್ರ ಅಳವಡಿಸಿರುವುದನ್ನು ವಿರೋಧಿಸಿ ಕಾಂಗ್ರೆಸ್ ನಾಯಕರು ಪ್ರತಿಭಟನೆ ನಡೆಸಿದ್ದಾರೆ.
ಅಧಿವೇಶನ ಆರಂಭಕ್ಕೂ ಮುನ್ನ ಸಾರ್ವಕರ್, ಅಂಬೇಡ್ಕರ್ ಸೇರಿದಂತೆ ಹಲವು ಮಹನಿಯರ ಭಾವಚಿತ್ರವನ್ನು ವಿಧಾನಸೌಧದ ಒಳಗೆ ಅನಾವರಣ ಮಾಡಲು ಬಿಜೆಪಿ ಸರ್ಕಾರ ಸಿದ್ಧತೆ ನಡೆಸಿದೆ.
ಸಾವರ್ಕರ್ ಭಾವಚಿತ್ರವನ್ನು ವಿಧಾನಸೌಧದ ಒಳಗೆ ಅನಾವರಣ ಮಾಡುತ್ತಿರುವ ಬಿಜೆಪಿ ಕ್ರಮ ಖಂಡಿಸಿ ವಿಪಕ್ಷ ಕಾಂಗ್ರೆಸ್ ಪ್ರತಿಭಟನೆ ನಡೆಸುತ್ತಿದೆ.
ಸುವರ್ಣಸೌಧದ ಮುಖ್ಯದ್ವಾರದಲ್ಲಿ ಮೆಟ್ಟಿಲುಗಳ ಮೇಲೆ ಕುಳಿತು ಸಿದ್ದರಾಮಯ್ಯ ನೇತೃತ್ವದಲ್ಲಿ ಕಾಂಗ್ರೆಸ್ ನಾಯಕರು ಪ್ರತಿಭಟನೆ ನಡೆಸಿದ್ದರು. ಈ ವೇಳೆ ಮಾತನಾಡಿದ ಸಿದ್ದರಾಮಯ್ಯ, ಸಾವರ್ಕರ್ ಫೋಟೋ ಯಾಕೆ ಹಾಕಿದ್ದು ಎಂದು ಪ್ರಶ್ನಿಸಬೇಡಿ. ನಾವು ಸೂಚಿಸಿದ್ದ ದಾರ್ಶನಿಕರ ಫೋಟೋ ಯಾಕೆ ಹಾಕಿಲ್ಲ ಎಂದು ಪ್ರಶ್ನಿಸಿ ಎಂದು ಕಾಂಗ್ರೆಸ್ ನಾಯಕರಿಗೆ ಸಿದ್ದರಾಮಯ್ಯ ಸೂಚಿಸಿದ್ದಾರೆ.