spot_img
spot_img
spot_img
21.1 C
Belagavi
Friday, September 30, 2022
spot_img

ಜೂಟ್ ಬ್ಯಾಗ್ ತಯಾರಿಕೆಗೆ ಉಚಿತ ತರಬೇತಿಗೆ ಅರ್ಜಿ ಆಹ್ವಾನ

spot_img

ಬೆಳಗಾವಿ: ಕೆನರಾ ಬ್ಯಾಂಕ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆ ಜಿಲ್ಲೆಯ ಗ್ರಾಮೀಣ ಮಹಿಳೆಯರಿಗೆ, ನಿರುದ್ಯೋಗಿಗಳಿಗೆ ಮಾರ್ಚ್ 23ರಿಂದ ಏಪ್ರಿಲ್ 04ರವರೆಗೆ 13 ದಿನಗಳ ಕಾಲ ಜೂಟ್ ಉತ್ನನ್ನ(ಜೂಟ್ ಬ್ಯಾಗ್) ತಯಾರಿಕೆ ಕುರಿತು ಉಚಿತ ತರಬೇತಿಯನ್ನು ಹಮ್ಮಿಕೊಂಡಿದೆ.

18 ರಿಂದ 45 ವರ್ಷದ ನಿರುದ್ಯೋಗಿಗಳಿಗೆ ಈ ತರಬೇತಿ ನಡೆಸಲಾಗುತ್ತಿದ್ದು, ತರಬೇತಿ ಪಡೆದ ನಂತರ ಸ್ವ ಉದ್ಯೋಗ ಕೈಗೊಳ್ಳಲು ಸಿದ್ಧರಿರಬೇಕು. ಇನ್ನು ತರಬೇತಿ ಅವಧಿಯಲ್ಲಿ ಉಚಿತ ಊಟ ಮತ್ತು ವಸತಿ ಸೌಲಭ್ಯವಿದ್ದು, ತರಬೇತಿ ಪಡೆಯಲಿಚ್ಚಿಸುವ ಅಭ್ಯರ್ಥಿಗಳು, ಬಿಳಿ ಹಾಳೆಯ ಮೇಲೆ ಅಥವಾ ನಮ್ಮ ಸಂಸ್ಥೆಯಲ್ಲಿ ದೊರೆಯುವ ಅರ್ಜಿ ನಮೂನೆಯಲ್ಲಿ ತಮ್ಮ ಹೆಸರು, ವಿಳಾಸ, ವಿದ್ಯಾಭ್ಯಾಸ, ಅನುಭವ ಮುಂತಾದ ಮಾಹಿತಿಗಳನ್ನು ಬರೆದು ಅರ್ಜಿಯ ಜೋತೆಗೆ ಬಿಪಿಎಲ್ ರೇಶನ್ ಕಾರ್ಡ್, ಆಧಾರ ಕಾರ್ಡ್, ಬ್ಯಾಂಕ್ ಪಾಸಬುಕ್ಗಳ ಝೆರಾಕ್ಸ್ ಪ್ರತಿಗಳನ್ನು ಲಗತ್ತಿಸಿ ಮಾರ್ಚ್ 21ರೊಳಗಾಗಿ ಸಂಸ್ಥೆಗೆ ತಲುಪುವಂತೆ ಕಳುಹಿಸಲು ಸೂಚಿಸಲಾಗಿದೆ.

ಹೆಚ್ಚಿನ ಮಾಹಿತಿಗಾಗಿ ನಿರ್ದೇಶಕರು, ಕೆನರಾ ಬ್ಯಾಂಕ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆ (ಸಿಬಿ ಆರ್ಸೆಟಿ), ಪ್ಲಾಟ ನಂ. ಸಿ ಎ -03 (ಪಾರ್ಟ) ಕಣಬರ್ಗಿ ಇಂಡಸ್ಟ್ರೀಯಲ್ ಎರಿಯಾ, ಆಟೋ ನಗರ. ಬೆಳಗಾವಿ. ಇವರನ್ನು ಸಂಪರ್ಕಿಸಬಹುದು. ಅಥವ ದೂರವಾಣಿ ಸಂಖ್ಯೆ 0831-2440644, 9845750043, 8296792166, 8660038694, 8867388906 ನ್ನು ಸಂಪರ್ಕಿಸಬಹುದು ಎಂದು ಸಂಸ್ಥೆಯ ನಿರ್ದೇಶಕರು ತಿಳಿಸಿದ್ದಾರೆ.

spot_img

Related News

ಇಂದು ರಾಜ್ಯಕ್ಕೆ ಭಾರತ್ ಜೋಡೋ ಯಾತ್ರೆ

ಚಾಮರಾಜನಗರ : ರಾಹುಲ್ ಗಾಂಧಿ ನೇತೃತ್ವದಲ್ಲಿ ದೇಶಾದ್ಯಂತ ನಡೆಸುತ್ತಿರುವ ಭಾರತ್ ಜೋಡೋ ಯಾತ್ರೆ ಇಂದು ರಾಜ್ಯಕ್ಕೆ ಆಗಮಿಸಲಿದ್ದು, ಬರಮಾಡಿಕೊಳ್ಳಲು ಕಾಂಗ್ರೆಸ್ ತಯಾರಿ ಜೋರಾಗಿದೆ. ನಾಯಕರನ್ನು ಸ್ವಾಗತಿಸಲು ರಾಜ್ಯ ಕಾಂಗ್ರೆಸ್‌ ನಾಯಕರು ಸರ್ವ ರೀತಿಯಲ್ಲೂ...

ಪ್ರತಿ ಇನ್ಸಸ್ಟಾಗ್ರಾಂ ಪೋಸ್ಟ್ ಗೆ 8 ಕೋಟಿ ರೂ. ಪಡೆಯುವ ವಿರಾಟ್ ಕೊಹ್ಲಿ

ನವದೆಹಲಿ: ವಿರಾಟ್​ ಕೊಹ್ಲಿ ಸಾಮಾಜಿಕ ಜಾಲತಾಣ ಇನ್​ಸ್ಟಾಗ್ರಾಂನಲ್ಲೂ ಹೊಸ ದಾಖಲೆ ಬರೆದಿದ್ದಾರೆ. ಇನ್​ಸ್ಟಾಗ್ರಾಂನಲ್ಲಿ ಅವರು ಪ್ರತಿ ಪ್ರಾಯೋಜಿತ ಪೋಸ್ಟ್​ಗೆ ಬರೋಬ್ಬರಿ 8 ಕೋಟಿ ರೂಪಾಯಿ ಚಾರ್ಜ್​ ಮಾಡುತ್ತಿದ್ದಾರೆ. ಈ ಮೂಲಕ ಇನ್​ಸ್ಟಾಗ್ರಾಂನಲ್ಲಿ ಗರಿಷ್ಠ ಹಣ...

LEAVE A REPLY

Please enter your comment!
Please enter your name here

Latest News

- Advertisement -
- Advertisement -
- Advertisement -
- Advertisement -