spot_img
spot_img
spot_img
21.1 C
Belagavi
Friday, September 30, 2022
spot_img

ಕರ್ನಾಟಕ ವಿಧಾನಸಭೆ ಸಚಿವಾಲಯದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ

spot_img

ಬೆಂಗಳೂರು : ರಾಜ್ಯ ವಿಧಾನಸಭೆ ಸಚಿವಾಲಯದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಿದೆ. ವರದಿಗಾರು, ಕಂಪ್ಯೂಟರ್​ ಆಪರೇಟರ್​ ಸೇರಿದಂತೆ ಒಟ್ಟು 43 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ್ದು ಮೇ 27 ಅರ್ಜಿ ಸಲ್ಲಿಕೆಗೆ ಕಡೆಯ ದಿನಾಂಕ ಆಗಿದೆ.

ಹುದ್ದೆಗಳು ಹುದ್ದೆ ಸಂಖ್ಯೆ ವೇತನ

ವರದಿಗಾರರು – 02 – 37900- 70850 ರೂ

ಕಂಪ್ಯೂಟರ್​ ಆಪರೇಟರ್​​ – 0 4- 30350- 58250 ರೂ

ಕಿರಿಯ ಸಹಾಯಕರು – 10 – 21400-42000 ರೂ

ಬೆರಳಚ್ಚುಗಾರರು – 01- 21400-42000 ರೂ

ದಲಾಯತ್​ -26- 17000- 28950 ರೂಪಾಯಿ ನಿಗದಿ ಮಾಡಲಾಗಿದೆ.

ವಿದ್ಯಾರ್ಹತೆ

ವರದಿಗಾರರು : ಪದವಿ ಪಡೆದಿರಬೇಕು ಜೊತೆಗೆ ಕರ್ನಾಟಕ ಫ್ರೌಡ ಶಿಕ್ಷಣ ಪರೀಕ್ಷಾ ಮಂಡಳಿ ನಡೆಸುವ ಕನ್ನಡ ಶೀಘ್ರಲಿಪಿ ಹಾಗೂ ಬೆರಳಚ್ಚು ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು.

ಕಂಪ್ಯೂಟರ್​ ಆಪರೇಟರ್ ​: ಬಿಸಿಎ ಅಥವಾ ಬಿಎಸ್ಸಿ ಕಂಪ್ಯೂಟರ್​ ಸೈನ್ಸ್​ ಅಥವಾ ಎಲೆಕ್ಟ್ರಾನಿಕ್ಸ್​ ಪದವಿ ಪಡೆದಿರಬೇಕು.

ಕಿರಿಯ ಸಹಾಯಕರು : ವಿಶ್ವ ವಿದ್ಯಾಲಯದಿಂದ ಪದವಿ ಪಡೆದಿದ್ದು, ಗಣಕ ಯಂತ್ರದ ಜ್ಞಾನ ಹೊಂದಿರಬೇಕು.

ಬೆರಳಚ್ಚುಗಾರರು: ಅಂಗೀಕೃತ ವಿವಿಯಿಂದ ಪದವಿ ಹೊಂದಿರಬೇಕು. ಗಣಕ ಯಂತ್ರದ ಕನಿಷ್ಠ 1 ವರ್ಷದ ತರಬೇತಿ ಹೊಂದಿದವರಿಗೆ ಆದ್ಯತೆ ನೀಡಲಾಗುವುದು.

ದಲಾಯತ್: ಏಳನೇ ತರಗತಿ ಉತ್ತೀರ್ಣರಾಗಿರಬೇಕು.

ವಯೋಮಿತಿ:

ಸಾಮಾನ್ಯ ವರ್ಗ: 35 ವರ್ಷ

ಪ್ರವರ್ಗ 2 ಎ, 2ಬಿ, 3ಎ ಮತ್ತು 3 ಬಿ : 38 ವರ್ಷ

ಪ. ಜಾ. ಪ. ಪಂ ಹಾಗೂ ಪ್ರವರ್ಗ-1: 40 ವರ್ಷ

ಅರ್ಜಿ ಸಲ್ಲಿಸಬೇಕಾದ ವಿಳಾಸ

ಕಾರ್ಯದರ್ಶಿ, ಕರ್ನಾಟಕ ವಿಧಾನಸಭೆ ಸಚಿವಾಲಯ, ಅಂಚೆ ಪೆಟ್ಟಿಗೆ ಸಂಖ್ಯೆ : 5074, ಮೊದಲನೆ ಮಹಡಿ, ವಿಧಾನಸೌಧ, ಬೆಂಗಳೂರು- 560001

ಅರ್ಜಿಯೊಂದಿಗೆ ಲಗತ್ತಿಸಬೇಕಾದ ಪ್ರತಿಗಳು

ಆಧಾರದ ದಾಖಲೆ ಪ್ರತಿ

ಶಾಲಾ ಅಂಕಪಟ್ಟಿ ಮತ್ತು ಇತರೆ ವಿದ್ಯಾರ್ಹತೆ ಪ್ರಮಾಣ ಪತ್ರದ ನಕಲು ಪ್ರತಿ

ನಡತೆ ಪ್ರಮಾಣಪತ್ರ

ಜಾತಿ ಪ್ರಮಾಣದ ನಕಲು ಪ್ರತಿ

ಮೀಸಲಾತಿ ಪ್ರಮಾಣ ಪ್ರತಿ

ಆಯ್ಕೆ ವಿಧಾನ

ಲಿಖಿತ ಅಥವಾ ಮೌಖಿಕ ಅಥವಾ ಎರಡೂ ವಿಧಾನಗಳನ್ನು ಅನುಸರಿಸಿ ಆಯ್ಕೆ ಮಾಡಲಾಗುವುದು.

ಅರ್ಜಿ ನಮೂನೆ

ಮೇಲ್ಕಂಡ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ದ್ವಿಪ್ರತಿಯಲ್ಲಿ ಅರ್ಜಿಗಳನ್ನು ಸರ್ಕಾರಿ ಪುಸ್ತಕ ಮಳಿಗೆಯಿಂದ ಪಡೆದು ವಿಧಾನ ಸಭೆ ಸಚಿವಾಲಯಕ್ಕೆ ಕೊನೆಯ ದಿನಾಂಕದೊಳಗೆ ಸಲ್ಲಿಸಬೇಕು.

spot_img

Related News

ಇಂದು ರಾಜ್ಯಕ್ಕೆ ಭಾರತ್ ಜೋಡೋ ಯಾತ್ರೆ

ಚಾಮರಾಜನಗರ : ರಾಹುಲ್ ಗಾಂಧಿ ನೇತೃತ್ವದಲ್ಲಿ ದೇಶಾದ್ಯಂತ ನಡೆಸುತ್ತಿರುವ ಭಾರತ್ ಜೋಡೋ ಯಾತ್ರೆ ಇಂದು ರಾಜ್ಯಕ್ಕೆ ಆಗಮಿಸಲಿದ್ದು, ಬರಮಾಡಿಕೊಳ್ಳಲು ಕಾಂಗ್ರೆಸ್ ತಯಾರಿ ಜೋರಾಗಿದೆ. ನಾಯಕರನ್ನು ಸ್ವಾಗತಿಸಲು ರಾಜ್ಯ ಕಾಂಗ್ರೆಸ್‌ ನಾಯಕರು ಸರ್ವ ರೀತಿಯಲ್ಲೂ...

ಪ್ರತಿ ಇನ್ಸಸ್ಟಾಗ್ರಾಂ ಪೋಸ್ಟ್ ಗೆ 8 ಕೋಟಿ ರೂ. ಪಡೆಯುವ ವಿರಾಟ್ ಕೊಹ್ಲಿ

ನವದೆಹಲಿ: ವಿರಾಟ್​ ಕೊಹ್ಲಿ ಸಾಮಾಜಿಕ ಜಾಲತಾಣ ಇನ್​ಸ್ಟಾಗ್ರಾಂನಲ್ಲೂ ಹೊಸ ದಾಖಲೆ ಬರೆದಿದ್ದಾರೆ. ಇನ್​ಸ್ಟಾಗ್ರಾಂನಲ್ಲಿ ಅವರು ಪ್ರತಿ ಪ್ರಾಯೋಜಿತ ಪೋಸ್ಟ್​ಗೆ ಬರೋಬ್ಬರಿ 8 ಕೋಟಿ ರೂಪಾಯಿ ಚಾರ್ಜ್​ ಮಾಡುತ್ತಿದ್ದಾರೆ. ಈ ಮೂಲಕ ಇನ್​ಸ್ಟಾಗ್ರಾಂನಲ್ಲಿ ಗರಿಷ್ಠ ಹಣ...

LEAVE A REPLY

Please enter your comment!
Please enter your name here

Latest News

- Advertisement -
- Advertisement -
- Advertisement -
- Advertisement -