Ad imageAd image

700 ಕೋಟಿ ರೂ. ಮೌಲ್ಯದ ಅರಣ್ಯ ಭೂಮಿ ಒತ್ತುವರಿ ತೆರವಿಗೆ ಈಶ್ವರ ಖಂಡ್ರೆ ಆದೇಶ

ratnakar
700 ಕೋಟಿ ರೂ. ಮೌಲ್ಯದ ಅರಣ್ಯ ಭೂಮಿ ಒತ್ತುವರಿ ತೆರವಿಗೆ ಈಶ್ವರ ಖಂಡ್ರೆ ಆದೇಶ
WhatsApp Group Join Now
Telegram Group Join Now

ಬೆಂಗಳೂರು: ಬೆಂಗಳೂರು (Bengaluru) ಪೂರ್ವ ತಾಲೂಕು ಕೆ.ಆರ್.ಪುರ (KR Pura) ಹೋಬಳಿ ಕೊತ್ತನೂರಿನ ಸರ್ವೆ ನಂ.48ರಲ್ಲಿ ಸುಮಾರು 700 ಕೋಟಿ ರೂ. ಮೌಲ್ಯದ 9 ಎಕರೆ ಅರಣ್ಯ ಭೂಮಿ (Forest Land) ಒತ್ತುವರಿಯನ್ನು ತೆರವುಗೊಳಿಸುವಂತೆ ಅರಣ್ಯ ಸಚಿವ ಈಶ್ವರ ಖಂಡ್ರೆ (Eshwar Khandre) ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಬೆಂಗಳೂರು ನಗರದಲ್ಲಿ ಹಸಿರು ಹೊದಿಕೆ ಹೆಚ್ಚಿಸಲು 1999-2000 ಸಾಲಿನಲ್ಲಿ ಕೊತ್ತನೂರು ಸರ್ವೆ ನಂ.48ರಲ್ಲಿ 22.08 ಎಕರೆ ಜಮೀನಿನಲ್ಲಿ ನೆಡುತೋಪು ಅಭಿವೃದ್ಧಿಪಡಿಸುವ ಸಲುವಾಗಿ ಈ ಭೂಮಿಯನ್ನು ಅರಣ್ಯ ಇಲಾಖೆಗೆ ನೀಡಲಾಗಿದೆ.

ಆದರೆ ಈ ಜಮೀನು ವಶಕ್ಕೆ ಪಡೆದು ಅರಣ್ಯ ಬೆಳೆಸುವಲ್ಲಿ ಹಿಂದಿನ ಅಧಿಕಾರಿಗಳ ವಿಫಲರಾಗಿದ್ದರು. 22.08 ಎಕರೆ ಭೂಮಿಯ ಪೈಕಿ 13 ಎಕರೆ ಜಮೀನನ್ನು ಅರಣ್ಯ ಇಲಾಖೆಗೆ ವಹಿಸಲಾಗಿದೆ ಎಂದು ಅಂದಿನ ಬೆಂಗಳೂರು ನಗರ ಜಿಲ್ಲಾಧಿಕಾರಿಗಳು ಆರ್​ಹೆಚ್​ಎಸ್​ (2) 44/82-83 ಡಿಟಿ​ 25.01.2000ರ ಆದೇಶದಂತೆ ಪಹಣಿ (RTC) ಯಲ್ಲಿ ನಮೂದಾಗಿದೆ.

ಈ ಜಮೀನಿನ ನಕ್ಷೆ ಪಡೆದು ಉಳಿದ 9 ಎಕರೆಯ ದಾಖಲೆಗಳನ್ನೂ ಮಾಡಿಸಿ, ಸುಮಾರು 700 ಕೋಟಿ ರೂ. ಬೆಲೆ ಬಾಳುವ ಜಮೀನು ಒತ್ತುವರಿಯಾಗಿದ್ದರೆ ಕ್ರಮವಹಿಸಿ. ಜಮೀನನ್ನ ಅರಣ್ಯ ಇಲಾಖೆಯ ವಶಕ್ಕೆ ಪಡೆಯಲು 64(ಎ) ಪ್ರಕ್ರಿಯೆ ಆರಂಭಿಸಲು ಅಧಿಕಾರಿಗಳಿಗೆ ಖಂಡ್ರೆ ಸೂಚನೆ ನೀಡಿದ್ದಾರೆ.

WhatsApp Group Join Now
Telegram Group Join Now
Share This Article