ಬೆಂಗಳೂರು: ಚಂದ್ರನಲ್ಲಿ ವಿಕ್ರಮ್ ಲ್ಯಾಂಡರ್ ಲ್ಯಾಂಡಿಂಗ್ ಯಶಸ್ವಿಯಾಗುತ್ತಿದ್ದಂತೆಯೇ, ಇದೀಗ ಲ್ಯಾಂಡರ್‌ನಿಂದ ಹೊರಬರುವ ರೋವರ್‌ನ ಮೊದಲ ಫೋಟೋವನ್ನು ಇಸ್ರೋ ಬಿಡುಗಡೆ ಮಾಡಿದೆ.
ಈ ಕುರಿತು ಟ್ವೀಟ್ ಮಾಡಿರುವ ಇಸ್ರೋ, ರೋವರ್ ಲ್ಯಾಂಡರ್‌ನಿಂದ ಕೆಳಕ್ಕೆ ಇಳಿದಿದ್ದು, ಭಾರತವು ಚಂದ್ರನ ಮೇಲೆ ನಡೆದಾಡಿತು. ಶೀಘ್ರದಲ್ಲೇ ಹೆಚ್ಚಿನ ವಿವರ ಹಂಚಿಕೊಳ್ಳುವುದಾಗಿ ಹೇಳಿದೆ.