spot_img
spot_img
spot_img
spot_img
spot_img
spot_img
spot_img
19.1 C
Belagavi
Sunday, December 10, 2023
spot_img

ಚಂದ್ರಯಾನ-3 ಮೇಲೆ ಇಸ್ರೋ ಕಣ್ಣು ಇಂದು ಎಚ್ಚೆತ್ತುಕ್ಕೊಳ್ಳುತ್ತಾ ಲ್ಯಾಂಡರ್ ಮತ್ತು ರೋವರ್

ಬೆಂಗಳೂರು: ಚಂದ್ರಯಾನ-3 ಅಭೂತಪೂರ್ವ ಯಶಸ್ಸಿನ ಬಳಿಕ ಭಾರತದ ಹೆಮ್ಮೆಯ ಬಾಹ್ಯಾಕಾಶ ಸಂಸ್ಥೆ ಇಸ್ರೋ ಇಂದು ಮತ್ತೊಂದು ಸಾಹಸಕ್ಕೆ ಮುಂದಾಗಿದ್ದು 15 ದಿನಗಳ ಹಿಂದೆ ಚಂದ್ರನಲ್ಲಿ ರಾತ್ರಿಯಾದ ಕಾರಣ ನಿದ್ರೆಗೆ ಜಾರಿಸಿದ್ದ ವಿಕ್ರಮ್ ಲ್ಯಾಂಡರ್ ಮತ್ತು ಪ್ರಗ್ಯಾನ್ ರೋವರ್ ಗಳನ್ನು ಎಬ್ಬಿಸುವ ಸಾಹಸಕ್ಕೆ ಇಸ್ರೋ ಮುಂದಾಗಿದೆ.

ವಿಕ್ರಮ್ ಲ್ಯಾಂಡರ್ ಮತ್ತು ಪ್ರಗ್ಯಾನ್ ರೋವರ್ ಅನ್ನು ಚಂದ್ರನ ಮೇಲೆ ಯಶಸ್ವಿಯಾಗಿ ಇಳಿಸಿದ್ದ ಇಸ್ರೋ ಅದು 14 ದಿನ ಕೆಲಸ ಮಾಡಬಹುದು ಎಂದು ಹೇಳಿತ್ತು. ಅದರಂತೆ 14 ದಿನಗಳ ಕಾಲ ರೋವರ್ ಮತ್ತು ಲ್ಯಾಂಡರ್ ಅಭೂತಪೂರ್ವವಾಗಿ ಕಾರ್ಯ ನಿರ್ವಹಿಸಿದ್ದವು. ಬಳಿಕ 15ನೇ ದಿನ ಉಭಯ ನೌಕೆಗಳನ್ನು ನಿದ್ರೆಗೆ ಜಾರಿಸಲಾಗಿತ್ತು. ಇದೀಗ ಮತ್ತೆ ಚಂದ್ರನಲ್ಲಿ ಮುಂಜಾನೆಯಾಗುತ್ತಿದ್ದು ಇದೇ ಕಾರಣಕ್ಕೆ ಇಸ್ರೋ ವಿಜ್ಞಾನಿಗಳು ನಿದ್ರೆಗೆ ಜಾರಿರುವ ಪ್ರಗ್ಯಾನ್ ರೋವರ್ ಮತ್ತು ವಿಕ್ರಮ್ ಲ್ಯಾಂಡರ್ ಗಳನ್ನು ಎಬ್ಬಿಸಲು ಹಗಲು ರಾತ್ರಿ ನಿರಂತರವಾಗಿ ಶ್ರಮಿಸುತ್ತಿದ್ದಾರೆ.

ಒಂದು ವೇಳೆ ಈ ಸಾಹಸದಲ್ಲಿ ಇಸ್ರೋ ವಿಜ್ಞಾನಿಗಳು ಸಫಲವಾದರೆ ಲ್ಯಾಂಡರ್ ಮತ್ತು ರೋವರ್ ಪುನಃ ಎಚ್ಚರಗೊಂಡರೆ ಮುಂದಿನ 14 ದಿನಗಳವರೆಗೆ ಕೆಲಸ ಮಾಡಬಹುದು. ಸೌರಶಕ್ತಿ ಚಾಲಿತ ಚಂದ್ರಯಾನ-3 ಮಾಡ್ಯೂಲ್ ಮಿಷನ್‌ನ ವ್ಯಾಲಿಡಿಟಿ ಕೇವಲ ಒಂದು ಚಂದ್ರನ ದಿನವಾಗಿತ್ತು, ಅಂದರೆ ಭೂಮಿಯ ಮೇಲೆ ಸುಮಾರು 14 ದಿನಗಳಾಗಿತ್ತು.

Related News

ಡಿ.15ರ ವರೆಗೆ ಬೆಳಗಾವಿ ಕೋಟೆ ಕೆರೆಯಲ್ಲಿ ಜಲ ಸಾಹಸ ಕ್ರೀಡಾ ಯೋಜನೆ

ಬೆಳಗಾವಿಯ ಕೋಟೆ ಕೆರೆಯಲ್ಲಿ ಯುವಜನ ಸಬಲೀಕರಣ ಮತ್ತು ‌ಕ್ರೀಡಾ ಇಲಾಖೆ ಹಾಗೂ ಜನರಲ್ ತಿಮ್ಮಯ್ಯ ರಾಷ್ಟ್ರೀಯ ಸಾಹಸ ಅಕಾಡೆಮಿಯ ವತಿಯಿಂದ ಜಲ ಸಾಹಸ ಕ್ರೀಡೆಗಳನ್ನು ಆಯೋಜಿಸಲಾಗಿದೆ. ವಿಧಾನಮಂಡಳ ಚಳಿಗಾಲ ಅಧಿವೇಶನ ಮುಕ್ತಾಯದವರೆಗೆ(ಡಿ.15 ವರೆಗೆ) ಶಾಲಾ...

ಜಾತ್ರೆ ಹಿನ್ನೆಲೆಯಲ್ಲಿ ಬೆನಕನಹಳ್ಳಿಯಲ್ಲಿ ಅಭಿವೃದ್ಧಿ ಕಾರ್ಯಗಳಿಗೆ ಚಾಲನೆ ನೀಡಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್

ಬೆಳಗಾವಿ: ಬೆಳಗಾವಿ ಗ್ರಾಮೀಣ ಕ್ಷೇತ್ರದ ಬೆನಕನಹಳ್ಳಿ ಗ್ರಾಮದ ಶ್ರೀ ಮಹಾಲಕ್ಷ್ಮಿ ದೇವಿಯ ಜಾತ್ರೆ ಹಿನ್ನೆಲೆಯಲ್ಲಿ ಗ್ರಾಮದಾದ್ಯಂತ ಅಭಿವೃದ್ಧಿ ಕೆಲಸಗಳಿಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಶನಿವಾರ ಭೂಮಿ ಪೂಜೆಯನ್ನು...

Latest News

- Advertisement -
- Advertisement -
- Advertisement -
- Advertisement -