ಇವತ್ತಿನ ದಿನದಲ್ಲಿ ರಾಜಕಾರಣದ ಬಗ್ಗೆ ಮಾತನಾಡದಿರುವುದೇ ಒಳ್ಳೇದು ಎಂದು ಹುಬ್ಬಳ್ಳಿಯಲ್ಲಿ ವಿಧಾನಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಬೇಸರ ವ್ಯಕ್ತಪಡಿಸಿದ್ದಾರೆ.
ಇವತ್ತಿನ ದಿನಮಾನದಲ್ಲಿ ರಾಜಕೀಯ ಬಗ್ಗೆ ಕಡಿಮೆ ಮಾತಾಡಿದ್ರೆ ಒಳ್ಳೇದು. ಬರ, ಅತಿವೃಷ್ಟಿ ಇದ್ದಾಗ ರಾಜ್ಯದ ಅಭಿವೃದ್ಧಿ ಬಗ್ಗೆ ಯೋಚನೆ ಮಾಡಬೇಕು. ದಿನೇದಿನೆ ಅವರನ್ನು ಬೈಯ್ಯೋದು, ಇವರನ್ನು ಬೈಯ್ಯೋದೇ ಆಗಿದೆ. ನಾವು ಕಠಿಣ ಸಂದರ್ಭದಲ್ಲಿ ಇದ್ದೇವೆ, ರಾಜಕೀಯ ಕಲುಷಿತವಾಗಿದೆ. ಚುನಾವಣೆಯಲ್ಲಿ ಗೆದ್ದ ಮೇಲೆ ಎಲ್ಲರ ಯೋಗಕ್ಷೇಮ ನೋಡಬೇಕು. ಬೆಳಗಾವಿಯಲ್ಲಿ ಅಧಿವೇಶನ ಮಾಡಲು ನಾನು ಪತ್ರ ಬರೆದಿದ್ದೇನೆ ಎಂದರು.
ತೆಲಂಗಾಣದಲ್ಲಿ ನಾವೆಲ್ಲರೂ ಒಗ್ಗೂಡಿ ಪಕ್ಷವನ್ನು ಗೆಲ್ಲಿಸಿದ್ದೇವೆ. ತೆಲಂಗಾಣದಲ್ಲಿ ಕಾಂಗ್ರೆಸ್ಗೆ ಜನರು ಆಶೀರ್ವಾದ ಮಾಡಿದ್ದಾರೆ ಎಂದು ಸಚಿವ ಜಮೀರ್ ಅಹ್ಮದ್ ಖಾನ್ ತಿಳಿಸಿದ್ದಾರೆ.
70ಕ್ಕಿಂತ ಹೆಚ್ಚು ಸ್ಥಾನಗಳನ್ನು ಗೆಲ್ಲುತ್ತೇವೆ. ಸಿದ್ದರಾಮಯ್ಯ, ಡಿಕೆ & ನಾನು ಟೀಂ...
ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಮತದಾರರ ತೀರ್ಪನ್ನು ಒಪ್ಪಲೇಬೇಕು. ಗ್ಯಾರಂಟಿಗೆ ವಿರೋಧ ಮಾಡಿದವರು ಗ್ಯಾರಂಟಿ ಘೋಷಣೆ ಮಾಡಿದರು ಎಂದು ವಿಜಯಪುರದಲ್ಲಿ ಬೃಹತ್ ಕೈಗಾರಿಕೆ ಸಚಿವ ಎಂ.ಬಿ.ಪಾಟೀಲ್ ಹೇಳಿದರು. ಲೋಕಸಭೆ ಚುನಾವಣೆಯಲ್ಲಿ ನಾವು ಗೆಲ್ಲುವ ವಿಶ್ವಾಸ ಇದೆ....