spot_img
spot_img
spot_img
spot_img
spot_img
spot_img
spot_img
spot_img
21.5 C
Belagavi
Friday, September 29, 2023
spot_img

ಜಾರಕಿಹೊಳಿ- ಹೆಬ್ಬಾಳಕರ್ ಸಮನ್ವಯದಿಂದ ಕೆಲಸ – ಚನ್ನರಾಜ ಹಟ್ಟಿಹೊಳಿ

ಬೆಳಗಾವಿ: ಸಚಿವರಾದ ಲಕ್ಷ್ಮೀ ಹೆಬ್ಬಾಳ್ಕರ್ ಹಾಗೂ ಸತೀಶ ಜಾರಕಿಹೊಳಿ ಅವರ ನಡುವೆ ಯಾವುದೇ ಕೋಲ್ಡ್ ವಾರ್ ಇಲ್ಲ. ಇದೊಂದು ಊಹಾಪೋಹ ಎಂದು ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಹೇಳಿದರು.

ಶನಿವಾರ ನಗರದ ಕುಮಾರ ಗಂಧರ್ವ ರಂಗ ಮಂದಿರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದರು. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರು ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಿದ್ದಾರೆ. ಹಾಗೂ ಲೋಕೋಪಯೋಗಿ ಇಲಾಖೆಯ ಸಚಿವರಾದ ಸತೀಶ ಜಾರಕಿಹೊಳಿ ಅವರು ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವರಾಗಿದ್ದಾರೆ.

ಯಾವುದೇ ರೀತಿ ಯಾವುದೇ ಸಂದರ್ಭದಲ್ಲಿ ಅವರಿಬ್ಬರ ನಡುವೆ ಕೋಲ್ಡ್ ವಾರ್ ನಡೆದಿಲ್ಲ. ಸಮನ್ವಯದಲ್ಲಿ ಎಲ್ಲ ಕೆಲಸ, ಕಾರ್ಯಗಳು ನಡೆದಿವೆ. ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಅವರವರ ಜಿಲ್ಲೆಯ ಉಸ್ತುವಾರಿಯನ್ನು ಸಮರ್ಥವಾಗಿ ನಿಭಾಯಿಸುತ್ತಿದ್ದಾರೆ. ಅಲ್ಲದೆ ಬೆಳಗಾವಿ ಜಿಲ್ಲೆ ದೊಡ್ಡ ಜಿಲ್ಲೆ ಸಚಿವ ಸತೀಶ ಜಾರಕಿಹೊಳಿ ಅವರು ಎಲ್ಲರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಕೆಲಸ ಮಾಡುತ್ತಿರುವುದು ತೃಪ್ತಿ ಇದೆ. ಮುಂಬರುವ ದಿನಗಗಳಲ್ಲಿ ಬೆಳಗಾವಿ ಜಿಲ್ಲೆಗೆ ಹೆಚ್ಚಿನ ಯೋಜನೆ ತರುವ ಮೂಲಕ ಜಿಲ್ಲೆಯನ್ನು ರಾಜ್ಯದಲ್ಲಿ ಎತ್ತಿ ಹಿಡಿಯುವ ಪ್ರಯತ್ನ ಮಾಡಲಾಗುವುದು ಎಂದು ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದರು.

ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಚನ್ನರಾಜ ಹಟ್ಟಿಹೊಳಿ ಸ್ಪರ್ಧಿಸುತ್ತಾರೆಯೇ ಎನ್ನುವ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಅವರು, ಪಕ್ಷದ ತೀರ್ಮಾನಕ್ಕೆ ಬದ್ಧರಾಗಿ ಎಲ್ಲರು ಕೆಲಸ ಮಾಡಬೇಕಿದೆ. ಪಕ್ಷ ಯಾರನ್ನು ಅಭ್ಯರ್ಥಿಯನ್ನಾಗಿ ಮಾಡುತ್ತದೆಯೋ ಅವರ ಪರವಾಗಿ ಕೆಲಸ ಮಾಡುವುದು ಎಲ್ಲರ ಜವಾಬ್ದಾರಿ ಎಂದರು‌.

ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ರಚನೆಯಾಗಿ ಮೂರು ತಿಂಗಳಲ್ಲಿ ಜನರಿಗೆ ನೀಡಿದ ಭರವಸೆಯನ್ನು ಈಡೇರಿಸುತ್ತಿದ್ದೇವೆ. ಬೆಲೆ ಏರಿಕೆಯಿಂದ ಜನರು ತತ್ತರಿಸಿ ಹೋಗಿದ್ದರು. ಆದ್ದರಿಂದ ಸರಕಾರ ಶಕ್ತಿ ಯೋಜನೆ, ಅನ್ನಭಾಗ್ಯ ಹಾಗೂ ಈಗ ಗೃಹ ಜ್ಯೋತಿಯನ್ನು ರಾಜ್ಯದ ಜನರಿಗೆ ನೀಡುತ್ತಿದ್ದೇವೆ. ಅದರಂತೆ ಗೃಹ ಲಕ್ಷ್ಮೀ ಯೋಜನೆಯನ್ನು ಬೆಳಗಾವಿಯಿಂದಲೇ ಚಾಲನೆ ನೀಡಲು ನಿರ್ಧರಿಸಲಾಗಿದೆ.

ತಾತ್ಕಾಲಿಕ ಪ್ಲ್ಯಾನ್ ಮಾಡಲಾಗಿದೆ. ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಅವರೊಂದಿಗೆ ಚರ್ಚೆ ಮಾಡಿ ಇಲಾಖಾವಾರು ಹಾಗೂ ಶಾಸಕರ ಜೊತೆಗೆ ಸಭೆ ನಡೆಸಿ ಸಿಪಿಎಡ್ ಆವರಣದಲ್ಲಿ ಸುಮಾರು 2 ಲಕ್ಷ ಮಹಿಳೆಯರು ಸೇರುವ ಸಂಭವ ಇದೆ. ಈ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ನಿರ್ಧಾರ ತೆಗೆದುಕೊಳ್ಳಲಿದ್ದಾರೆ ಎಂದರು.

Related News

ಬೆಳಗಾವಿಯಲ್ಲಿ ಅದ್ದೂರಿ ಗಣೇಶ ವಿಸರ್ಜನೆ

ಬೆಳಗಾವಿ: 10 ದಿನಗಳ ಗಣಪತಿ ಭಕ್ತರ ಆತಿತ್ಯವನ್ನು ಸ್ವೀಕರಿಸಿ ಇಂದು ನಿರ್ಗಮನ ವಾಗುತ್ತಿದ್ದಾನೆ. ಗಣಪತಿ ಭಕ್ತರು ಹತ್ತು ದಿನಗಳವರೆಗೆ ವಿವಿಧ ಸೇವೆ ಸಲ್ಲಿಸಿ ಗಣಪತಿಯ ಅನುಗ್ರಹಕ್ಕೆ ಪಾತ್ರರಾಗಿರುತ್ತಾರೆ. ಬೆಳಗಾವಿ ನಗರಕ್ಕೆ ಗಣಪತಿ ಆಗಮನ...

ಹಾಕಿ ಆಸ್ಟ್ರೋಟರ್ಫ್ ಮೈದಾನಕ್ಕೆ ಬೇಡಿಕೆ ಜನತಾ ದರ್ಶನದಲ್ಲಿ ಹೇಳಿಕೆ: ಭರವಸೆ

ಬೆಳಗಾವಿ: ಭಾರತಕ್ಕೆ ನಾಲ್ವರು ಒಲಂಪಿಕ್ ಹಾಕಿ ಆಟಗಾರರನ್ನು ನೀಡಿದ್ದು, ಕರ್ನಾಟಕ ಸರಕಾರ ಬೆಳಗಾವಿಗೆ ಅಂತರಾಷ್ಟ್ರೀಯ ಗುಣಮಟ್ಟದ ಹಾಕಿ ಮೈದಾನವನ್ನು ಇನ್ನೂ ನೀಡಿಲ್ಲ, ಅದಕ್ಕಾಗಿ ಜಿಲ್ಲಾಡಳಿತ ಕೂಡಲೇ ಬೆಳಗಾವಿ ಹಾಕಿ ಸಂಸ್ಥೆಯ ಆಸ್ಟ್ರೋಟರ್ಫ್ ಮೈದಾನದ...

LEAVE A REPLY

Please enter your comment!
Please enter your name here

Latest News

- Advertisement -
- Advertisement -
- Advertisement -
- Advertisement -