ವರದಿ: ರತ್ನಾಕರ ಗೌಂಡಿ
ಬೆಳಗಾವಿ: ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕಾಗಿ ಬೆಳಗಾವಿ ಕೈ ಪಡೆಯಲ್ಲಿ ಬಿರುಸಿನ ರಾಜಕೀಯ ಚಟುವಟಿಕೆ ನಡಿಯುತ್ತಿದೆ .ಬೆಳಗಾವಿ ಜಿಲ್ಲೆಯ ಕೈ ಪಾಳ್ಯದಲ್ಲಿ ಎರಡು ಶಕ್ತಿಕೇಂದ್ರಗಳಲ್ಲಿ ಎರಡು ಹೆಸರುಗಳು ಪ್ರಚಲಿತದಲ್ಲಿವೆ. ಸಚಿವ ಸತೀಶ್ ಜಾರಕಿಹೊಳಿ ಗರಡಿಯಲ್ಲಿ ಗುರುತಿಸಿಕೊಂಡಿರುವ ಬಸವರಾಜ್ ಶೇಗಾವಿ ಮತ್ತು ಸಚಿವ ಲಕ್ಷ್ಮಿ ಹೆಬ್ಬಾಳ್ಕರ್ ಪುತ್ರ ಮೃಣಾಲ್ ಹೆಬ್ಬಾಳ್ಕರ್ ಇವರ ಮದ್ಯ ನೇರ ಪೈಪೋಟಿ ಬೆಳಗಾವಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಗದ್ದಿಗೆಗಾಗಿ ನಡಿಯುತ್ತಿರುವ ಗುದ್ದಾಟ ಇದು.
ಮೇಲ್ನೋಟಕ್ಕೆ ಇದೊಂದು ಸಾಧಾರಣ ಪೈಪೋಟಿ ಕಂಡರೂ ಇದರಲ್ಲಿ ರಾಜ್ಯದ ರಾಜಕಾರಣದ ದಿಕ್ಸೂಚಿ ಅಡಿಗಿದೆ. ಬೆಳಗಾವಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಯನ್ನು 11 ವರ್ಷಗಳಿಂದ ಹಾಲಿ ಅಧ್ಯಕ್ಷ ವಿನಯ್ ನವಲಗಟ್ಟಿ ನಿಭಾಯಿಸುತ್ತ ಬಂದಿದ್ದಾರೆ. ಪಕ್ಷದಲ್ಲಿ ಒಂದೇ ಹುದ್ದೆ ನಿಯಮದ ಅನುಸಾರವಾಗಿ ಸಹಜವಾಗಿ ಬದಲಾವಣೆ ಆಗಬೇಕು ಪಕ್ಷದ ನಿಷ್ಠಾವಂತ ಕಾರ್ಯಕರ್ತರಿಗೆ ಹುದ್ದೆಗಳು ಸಿಗಬೇಕು ಎಂಬುದು ಎಲ್ಲರೂ ಅಭಿಪ್ರಾಯವಾಗಿದೆ. ಆದರೆ ಕಳೆದ ಬಾರಿ ಲೋಕಸಭಾ ಚುನಾವಣೆಯಲ್ಲಿ ಪಕ್ಷ ಇಬ್ಬರು ಸಚಿವರುಗಳ ಮಕ್ಕಳಿಗೆ ಅವಕಾಶ ನೀಡಲಾಗಿತ್ತು ಅದರಲ್ಲಿ ಸಚಿವ ಸತೀಶ್ ಜಾರಕಿಹೊಳಿ ಚಿಕ್ಕೋಡಿ ಲೋಕಸಭಾ ಕ್ಷೇತ್ರವನ್ನು ಕೈ ತೆಕ್ಕೆಗೆ ತೆಗೆದುಕೊಳ್ಳುವಲ್ಲಿ ಯಶಸ್ವಿಯಾದರು, ಆದರೆ ಬೆಳಗಾವಿ ಲೋಕಸಭಾ ಕ್ಷೇತ್ರ ಸೋಲಿನಿಂದಾಗಿ
ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರಿಗೆ ರಾಜಕೀಯ ಹಿನ್ನಡೆ ಉಂಟಾಗಿತ್ತು,
ಈಗ ಮತ್ತೆ ತನ್ನ ರಾಜಕೀಯ ಶಕ್ತಿ ಪ್ರದರ್ಶನಕ್ಕೆ ಮುಂದಾಗಿರುವ ಸಚಿವ ಲಕ್ಷ್ಮಿ ಹೆಬ್ಬಾಳ್ಕರ್ ಹೇಗಾದರೂ ಮಾಡಿ ಬೆಳಗಾವಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ತನ್ನ ಮಗನಾದ ಮೃಣಾಲ್ ಹೆಬ್ಬಾಳ್ಕರ್ ಅವರಿಗೆ ದೊರಕಿಸುವ ಸಲುವಾಗಿ ಅವರ ಹೆಸರನ್ನು ಮುಂದೆ ಮಾಡಿದ್ದಾರೆ ಇದು ಬರೀ ಅಧ್ಯಕ್ಷರ ಸ್ಥಾನದ ಪೈಪೋಟಿ ಅಲ್ಲದೆ ರಾಜಕೀಯ ಶಕ್ತಿ ಪ್ರದರ್ಶನದ ಒಂದು ಭಾಗವಾಗಿದೆ.
ಬೆಳಗಾವಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸ್ಥಾನ ರಾಜ್ಯದ ಆಡಳಿತ ಪಕ್ಷದಲ್ಲಿ ಸಂಚಲನ ಮೂಡಿಸಿದೆ. ಬೆಳಗಾವಿ ಜಿಲ್ಲಾ ಕಾಂಗ್ರೆಸ್ ವತಿಯಿಂದ ಬೆಳಗಾವಿ ಜಿಲ್ಲಾಧ್ಯಕ್ಷ ಸ್ಥಾನಕ್ಕೆ ಬಸವರಾಜ್ ಶೇಗಾವಿ ಅವರ ಹೆಸರನ್ನು ಶಿಫಾರಸ್ಸು ಮಾಡಲಾಗಿದೆ ಎಂದು ಹೇಳಲಾಗುತ್ತಿದೆ.
ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಪುತ್ರರಾದ ಮೃಣಾಲ್ ಹೆಬ್ಬಾಳ್ಕರ್ ಅವರ ಹೆಸರನ್ನು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರಿಗೆ ಕಳಸಲಾಗಿದೆ ಎಂದು ಉನ್ನತ ಮೂಲಗಳಿಂದ ಮಾಹಿತಿ ಇದೆ ಸಚಿವ ಸತೀಶ್ ಜಾರಕಿಹೊಳಿ ಅವರು ಈ ಎಲ್ಲಾ ವಿಷಯಗಳಿಗೆ ತೆರೆ ಎಳೆದು ಬೆಳಗಾವಿ ಜಿಲ್ಲಾ ಅಧ್ಯಕ್ಷ ಸ್ಥಾನಕ್ಕೆ ಬೆಳಗಾವಿಯಿಂದ ಒಂದೇ ಹೆಸರನ್ನು ನಾವು ಕಳಿಸಿದ್ದೇವೆ ಇದು ಪಕ್ಷದ ಮಟ್ಟದಲ್ಲಿ ಚರ್ಚೆಯಾಗಲಿದ್ದು ಪಕ್ಷದಲ್ಲಿ ಹೊಸಬರಿಗೆ ಅವಕಾಶ ನೀಡಬೇಕು ಅಥವಾ ಇದ್ದವರನ್ನು ಮುಂದುವರಿಸಕೊಂಡು ಹೋಗಬೇಕು ಎಂಬುದು ಪಕ್ಷ ನಿರ್ಧಾರ ಮಾಡುತ್ತದೆ ಎಂದು ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಈ ಎಲ್ಲಾ ರಾಜಕೀಯ ಬೆಳವಣಿಗೆಗಳು ಮುಂದೆ ಬರುವ ಜಿಲ್ಲಾ ಪಂಚಾಯತ್ ಹಾಗೂ ತಾಲೂಕು ಪಂಚಾಯತ್ ಚುನಾವಣೆಗಳ ಮೇಲೆ ತಮ್ಮ ಪ್ರಭುತ್ವವನ್ನು ಸಾಧಿಸಲಿವೆ ಬರಿ ಬೆಳಗಾವಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸ್ಥಾನವಲ್ಲ ಚಿಕ್ಕೋಡಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸ್ಥಾನ ಕೂಡ ಬದಲಾವಣೆ ಆಗಲಿದೆ ಈ ಎಲ್ಲಾ ಬೆಳವಣಿಗೆಗಳನ್ನು ಕೈ ಕಾರ್ಯಕರ್ತರು ಬಹಳ ಕುತೂಹಲದಿಂದ ಗಮನಿಸುತ್ತಿದ್ದಾರೆ ಸಾಮಾನ್ಯ ಕಾರ್ಯಕರ್ತರಿಗೆ ಪಟ್ಟ ಒಲಿದು ಬರಲಿದೆಯೋ ಅಥವಾ…..?