ಬೆಳಗಾವಿ : ಬೆಳಗಾವಿಯ ಜಿಲ್ಲಾ ಕೌಶಲ್ಯಾಭಿವೃದ್ಧಿ ಕಛೇರಿಯ ವತಿಯಿಂದ ಎಸ್.ಎಸ್.ಎಲ್.ಸಿ, ಪಿಯುಸಿ, ಐ.ಟಿ.ಐ., ಡಿಪ್ಲೋಮಾ, ಬಿ.ಎಡ್., ಡಿ.ಎಡ್, ಯಾವುದೇ ಪದವಿ ಹಾಗೂ ಸ್ನಾತಕೋತ್ತರ ಪದವಿ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳಿಗಾಗಿ ನವಂಬರ್ 25 ರಂದು “ಉದ್ಯೋಗ ಮೇಳ”ವನ್ನು “ಶ್ರೀ ಸಿದ್ಧರಾಮೇಶ್ವರ ಟ್ರಸ್ಟ್ ನ ಕೈಗಾರಿಕಾ ತರಬೇತಿ ಕೇಂದ್ರ, ಶಿವಬಸವ ನಗರ, ಬೆಳಗಾವಿ” ಇಲ್ಲಿ ಆಯೋಜಿಸಲಾಗಿದೆ.
ಉದ್ಯೋಗ ಮೇಳ” ಬೆಳಿಗ್ಗೆ 10.30 ರಿಂದ ಸಂಜೆ 4.30 ಗಂಟೆಯವರೆಗೆ ನಡೆಯಲಿದ್ದು, ಆಸಕ್ತ ಅಭ್ಯರ್ಥಿಗಳು https://www.sites.google.com/view/dsdobelagavi ಈ ವೆಬ್‍ಸೈಟ್‍ನಲ್ಲಿ ಹೆಸರನ್ನು ನೋಂದಾಯಿಸಿಕೊಳ್ಳಬಹುದಾಗಿದೆ.
ಅಭ್ಯರ್ಥಿಗಳಿಗೆ ಉದ್ಯೋಗಾವಕಾಶವು ಉಚಿತವಾಗಿದ್ದು, ಇನ್ನುಳಿದ ಯಾವುದೇ ಸೌಲಭ್ಯಗಳು ಇರುವುದಿಲ್ಲ. ಸದರಿ ಸಂದರ್ಶನದಲ್ಲಿ ಪ್ರತಿಷ್ಠಿತ ಖಾಸಗಿ ಕಂಪನಿಗಳು ಭಾಗವಹಿಸಲಿದ್ದು, ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಳಿಗಾಗಿ ಮೇಲ್ಕಂಡ ವೈಬ್‍ಸೈಟಿಗೆ ಭೇಟಿ ನೀಡಬಹುದಾಗಿದೆ ಎಂದು ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ವಾವಿಸಂ: 59