Ad imageAd image

ನ.1 ರಂದು ಶಾಲೆ-ಕಾಲೇಜು, ಕಂಪನಿ, ಕಾರ್ಖಾನೆಗಳಲ್ಲಿ ಕಡ್ಡಾಯವಾಗಿ ಕನ್ನಡ ಬಾವುಟ ಹಾರಬೇಕು: ಡಿಕೆಶಿ

ratnakar
ನ.1 ರಂದು ಶಾಲೆ-ಕಾಲೇಜು, ಕಂಪನಿ, ಕಾರ್ಖಾನೆಗಳಲ್ಲಿ ಕಡ್ಡಾಯವಾಗಿ ಕನ್ನಡ ಬಾವುಟ ಹಾರಬೇಕು: ಡಿಕೆಶಿ
WhatsApp Group Join Now
Telegram Group Join Now

ಬೆಂಗಳೂರು: ನವೆಂಬರ್‌ 1ರ ಕನ್ನಡ ರಾಜ್ಯೋತ್ಸವದಂದು (Kannada Rajyotsava) ಶಾಲಾ-ಕಾಲೇಜು, ಕಂಪನಿ, ಕಾರ್ಖಾನೆಗಳಲ್ಲಿ ಕಡ್ಡಾಯವಾಗಿ ಕನ್ನಡ ಬಾವುಟ (Kannada Flag) ಹಾರಿಸಬೇಕು ಎಂದು ಡಿಸಿಎಂ ಡಿಕೆ ಶಿವಕುಮಾರ್‌ (DCM DK Shivakumar) ಹೇಳಿದ್ದಾರೆ.

ತನ್ನ ನಿವಾಸದಲ್ಲಿ ಆಯುಧ ಪೂಜೆಯ (Ayudha Pooja) ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ನವೆಂಬರ್ 1 ನಮಗೆ ರೋಮಾಂಚನ ದಿನ. ಈ ವರ್ಷ 50ನೇ ವರ್ಷದ ರಾಜೋತ್ಸವ ಆಚರಿಸುತ್ತಿದ್ದೇವೆ. ಸ್ವಾತಂತ್ರ‍್ಯ ದಿನದ ರೀತಿ ಸಂಭ್ರಮ ಮಾಡಬೇಕು ಎಂದು ಹೇಳಿದರು.

ಖಾಸಗಿ ಮತ್ತು ಸರ್ಕಾರಿ ಶಾಲೆಗಳಲ್ಲಿ ಕಡ್ಡಾಯಾಗಿ ಕನ್ನಡ ಬಾವುಟ ಹಾರಿಸಬೇಕು. ಜೊತೆಗೆ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಬೇಕು. ಆಚರಣೆ ಮಾಡಿ ನಿಮ್ಮ ಸಂಸ್ಥೆಯಲ್ಲಿ ಏನು ಮಾಡಿದ್ದೀರಿ ಎನ್ನುವುದಕ್ಕೆ ನಾವು ನೀಡುವ ನಂಬರ್‌ಗೆ ಪೋಸ್ಟ್ ಮಾಡಬೇಕು. ಕನ್ನಡ ಭೂಮಿಯಲ್ಲಿ ಕನ್ನಡ ಕಲಿಯಬೇಕಾಗಿರೋದು ಎಲ್ಲರಿಗೂ ಕಡ್ಡಾಯ ಎಂದರು.

ಕನ್ನಡ ಬಾವುಟ ಕಡ್ಡಾಯ ಮಾಡಿದ್ದನ್ನು ಕನ್ನಡ ಸಂಘಟನೆಗಳು ದುರುಪಯೋಗ ಮಾಡಿಕೊಳ್ಳಬಾರದು. ಕಾರ್ಖಾನೆ, ಕಂಪನಿಗಳಿಗೆ ಒತ್ತಡ, ಕಿರುಕುಳ ನೀಡಬಾರದು. ಕನ್ನಡ ಸಂಘಟನೆಗಳು ರಿಗೂ ಹೆದರಿಸಬಾರದು. ಹಾಗೆ ಏನಾದರೂ ಒತ್ತಡ ಹೇರಿದರೆ ಅಂತಹ ಸಂಘಟನೆಗಳ ವಿರುದ್ಧ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು.

WhatsApp Group Join Now
Telegram Group Join Now
Share This Article