ಕಿತ್ತೂರು ಉತ್ಸವಕ್ಕೆ ಹಾಗೂ ಬೆಳಗಾವಿ ಕನ್ನಡ ರಾಜ್ಯೋತ್ಸವಕ್ಕೆ ಹೆಚ್ಚಿನ ಅನುದಾನ ನೀಡಬೇಕೆಂದು ಕರ್ನಾಟಕ ರಕ್ಷಣಾ ವೇದಿಕೆ ಬೃಹತ ಪಾದಯಾತ್ರೆಯನ್ನು ಕಿತ್ತೂರಿನಿಂದ ಬೆಳಗಾವಿವರೆಗೆ ಮಾಡಲಾಯಿತು.
ವೀರರಾಣಿ ಕಿತ್ತೂರು ಚೆನ್ನಮ್ಮ ಗತ ವೈಭವ ಸಾರುವ ಕಿತ್ತೂರು ಉತ್ಸವಕ್ಕೆ 5 ಕೋಟಿ ಅನುದಾನ ನೀಡಬೇಕು. ಕರ್ನಾಟಕದಲ್ಲಿ ಬೆಳಗಾವಿ ಯಲ್ಲಿಅದ್ದೂರಿಯಾಗಿ ಆಚರಣೆಗೊಳ್ಳುವ ಕನ್ನಡ ರಾಜ್ಯೋತ್ಸವಕ್ಕೆ ಎರಡು ಕೋಟಿ ಅನುಧಾನ ರಾಜ್ಯ ಸರ್ಕಾರ ಬಿಡುಗಡೆ ಮಾಡಬೇಕೆಂದು ಕರ್ನಾಟಕ ರಕ್ಷಣಾ ವೇದಿಕೆ ಕಿತ್ತೂರು ಕೋಟೆಯಿಂದ ಬೆಳಗಾವಿ ಜಿಲ್ಲಾಧಿಕಾರಿ ಕಚೇರಿಗೆ ಜಿಲ್ಲಾ ಕರವೇ ಅಧ್ಯಕ್ಷ ದೀಪಕ್ ಗುಡುಗ್ನಟ್ಟಿ ಅವರ ನೇತೃತ್ವದಲ್ಲಿ ಪಾದಯಾತ್ರೆ ಹಮ್ಮಿಕೊಂಡಿದ್ದರು.
ಇಂದು ಬೆಳಗಾವಿ ಜಿಲ್ಲಾಧಿಕಾರಿ ಕಚೇರಿಗೆ ಪಾದಯಾತ್ರೆಯ ಮೂಲಕ ತಲುಪಿ ಜಿಲ್ಲಾ ಅಧಿಕಾರಿಗಳಿಗೆ ಕಿತ್ತೂರು ಉತ್ಸವ ಹಾಗೂ ಬೆಳಗಾವಿಯಲ್ಲಿ ನಡೆಯುವ ಕನ್ನಡ ರಾಜ್ಯೋತ್ಸವಕ್ಕೆ ಅನುದಾನ ಬಿಡುಗಡೆ ಮಾಡಬೇಕೆಂದು ಒತ್ತಾಯಿಸಿ, ಮನವಿ ಸಲ್ಲಿಸಿದರು.
ಈ ಸಂದರ್ಭದಲ್ಲಿ ಕನ್ನಡ ರಕ್ಷಣಾ ವೇದಿಕೆಯ ಪದಾಧಿಕಾರಿಗಳು ,ತಾಲೂಕ ಹಾಗೂ ಜಿಲ್ಲಾ ಘಟಕಗಳ ಪದಾಧಿಕಾರಿಗಳು ಉಪಸ್ಥಿತರಿದ್ದರು,