spot_img
spot_img
spot_img
18.7 C
Belagavi
Monday, September 26, 2022
spot_img

ಸಮಗ್ರ ಅಭಿವೃದ್ಧಿಗೆ ಪೂರಕ ಬಜೆಟ್: ಬಿಜೆಪಿ ರಾಜ್ಯಾಧ್ಯಕ್ಷ ಕಟೀಲ್

spot_img
spot_img

For Breaking News Download App

ಬೆಂಗಳೂರು: ಕೋವಿಡ್ ಸಾಂಕ್ರಾಮಿಕದ ಬಳಿಕ ಚೇತರಿಸಿಕೊಂಡ ಕರ್ನಾಟಕದ ಸಮಗ್ರ ಅಭಿವೃದ್ಧಿಗೆ ಪೂರಕವಾದ ಬಜೆಟ್ ಅನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಮಂಡಿಸಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷರು ಮತ್ತು ಸಂಸದರೂ ಆದ ನಳಿನ್‍ಕುಮಾರ್ ಕಟೀಲ್ ಅವರು ತಿಳಿಸಿದ್ದಾರೆ.

ಕಳೆದ ಸಾಲಿನ ಬಜೆಟ್‍ಗಿಂತ ಶೇ 7.7ರಷ್ಟು ಹೆಚ್ಚು ಪ್ರಮಾಣದ ಬಜೆಟ್ ಇದಾಗಿದ್ದು, ಶಿಕ್ಷಣ- ಉದ್ಯೋಗ- ಸಬಲೀಕರಣಕ್ಕೆ ಆದ್ಯತೆ ನೀಡಲಿದೆ. ರೈತರ ಆದಾಯ ದ್ವಿಗುಣಗೊಳಿಸಲು ಆದ್ಯತೆ ಮತ್ತು ವಿಶೇóಷ ಉಪಕ್ರಮಗಳಿರುವ ಆಯವ್ಯಯ ಪತ್ರ. ಇದಾಗಿದ್ದು, ರೈತ ಶಕ್ತಿ ಹೊಸ ಯೋಜನೆ ಪ್ರಕಟಿಸಲಾಗಿದೆ ಎಂದು ಮೆಚ್ಚುಗೆ ಸೂಚಿಸಿದ್ದಾರೆ.

ನವಭಾರತಕ್ಕೆ ಪೂರಕವಾಗಿರುವ ನೂತನ ಕರ್ನಾಟಕದ ನಿರ್ಮಾಣಕ್ಕೆ ಮುಖ್ಯಮಂತ್ರಿಗಳು ಮುಂದಾಗಿದ್ದಾರೆ. ದೂರದೃಷ್ಟಿ ಇರುವ ಮತ್ತು ಸರ್ವಸ್ಪರ್ಶಿ ಯೋಜನೆಗಳಿರುವ ಬಜೆಟ್ ಇದಾಗಿದೆ. ಇದನ್ನು ಸ್ವಾಗತಿಸುವುದಾಗಿ ನಳಿನ್ ಕುಮಾರ್ ಕಟೀಲ್ ಅವರು ತಿಳಿಸಿದ್ದಾರೆ.ಮೇಕೆದಾಟು ಯೋಜನೆ ಅನುಷ್ಠಾನಕ್ಕೆ 1 ಸಾವಿರ ಕೋಟಿ ಅನುದಾನ ನೀಡಲಾಗಿದೆ.

ಮಹಿಳಾ ಸಬಲೀಕರಣ, ಮಕ್ಕಳ ಕಲ್ಯಾಣ ಸೇರಿದಂತೆ ಎಲ್ಲ ವಲಯಗಳ ಅಭಿವೃದ್ಧಿಯ ಅಂಶಗಳನ್ನು ಈ ಬಜೆಟ್ ಒಳಗೊಂಡಿದೆ ಎಂದು ಅವರು ತಿಳಿಸಿದ್ದಾರೆ. ಗ್ರಾಮೀಣ ಪ್ರದೇಶಗಳು, ಹಿಂದುಳಿದ ಪ್ರದೇಶಗಳ ಅಭಿವೃದ್ಧಿ ಜೊತೆಗೆ ಬೆಂಗಳೂರಿನ ಸಮಗ್ರ ಪ್ರಗತಿಗೆ ಯೋಜನೆಗಳನ್ನು ಮತ್ತು ಅನುದಾನವನ್ನು ಮುಖ್ಯಮಂತ್ರಿಗಳು ನೀಡಿದ್ದು ಸ್ವಾಗತಾರ್ಹ ಎಂದು ಅವರು ತಿಳಿಸಿದ್ದಾರೆ.

ಶಿಕ್ಷಣದ ಮೂಲಕ ಅಭಿವೃದ್ಧಿ ಸಾಧ್ಯ ಎಂಬ ಪ್ರಮುಖ ಚಿಂತನೆಯನ್ನು ಈ ಆಯವ್ಯಯ ಪತ್ರದಲ್ಲಿ ಕಾಣಬಹುದು. ಶಿಕ್ಷಣ, ಉದ್ಯೋಗ, ಆರೋಗ್ಯ ಕ್ಷೇತ್ರಗಳ ಸಬಲೀಕರಣ, ಕೃಷಿಗೆ ಆದ್ಯತೆ ನೀಡುವ ಬಜೆಟ್ ಇದಾಗಿದೆ ಎಂದು ಅವರು ಶ್ಲಾಘಿಸಿದ್ದಾರೆ.

ಶಿಕ್ಷಣ 31,980 ಕೋಟಿ, ಒಳನಾಡು ಸಾರಿಗೆ 11,222 ಕೋಟಿ, ಗ್ರಾಮೀಣಾಭಿವೃದ್ಧಿಗೆ 17,325 ಕೋಟಿ, ಗಂಗಾ ಕಲ್ಯಾಣ 1,115 ಕೋಟಿ, ಆರೋಗ್ಯ ಇಲಾಖೆ 13,982 ಕೋಟಿ, ಸಾರಿಗೆ ಇಲಾಖೆ 11,222 ಕೋಟಿ, ಕಲ್ಯಾಣ ಕರ್ನಾಟಕ 3,000 ಕೋಟಿ, ಕಂದಾಯ 16,388 ಕೋಟಿ, ಜಲಸಂಪನ್ಮೂಲ 20,601 ಕೋಟಿ, ಸಮಾಜ ಕಲ್ಯಾಣ 9389 ಕೋಟಿ, ಇಂಧನ ಇಲಾಖೆ 12655 ಕೋಟಿ, ಕೃಷಿ ಇಲಾಖೆ 8457 ಕೋಟಿ, ನಗರಾಭಿವೃದ್ಧಿ 16076 ಕೋಟಿ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ 4713 ಕೋಟಿ, ಬೆಂಗಳೂರು ಮೂಲಭೂತ ಸೌಕರ್ಯ 6,000 ಕೋಟಿ ರೂಪಾಯಿ ಅನುದಾನ ನೀಡಿದ್ದು, ಇದು ಸರ್ವತೋಮುಖ ಅಭಿವೃದ್ಧಿಗೆ ಸಹಾಯಕ ಎಂದು ಅವರು ವಿಶ್ಲೇಷಿಸಿದ್ದಾರೆ. ರಾಜ್ಯದ ಎಲ್ಲ ವರ್ಗಗಳ ಅಭಿವೃದ್ಧಿಗೆ ಪೂರಕ ಯೋಜನೆಗಳನ್ನ ಈ ಬಜೆಟ್ ಒಳಗೊಂಡಿದೆ ಎಂದು ತಿಳಿಸಿದ್ದಾರೆ.

For Breaking News Download App

Related News

ನನಗೆ ಭಾಷೆ – ಜಾತಿ ಇಲ್ಲ, ಜನರ ಪ್ರೀತಿ ಒಂದೇ : ಶಾಸಕಿ ಅಂಜಲಿ ನಿಂಬಾಳ್ಕರ್ 

ವರದಿ : ರತ್ನಾಕರ ಗೌಂಡಿ  ಬೆಳಗಾವಿ : ಖಾನಾಪುರ್ ಪಟ್ಟಣದಲ್ಲಿ ಅಂಜಲಿ ನಿಂಬಾಳ್ಕರ್ ನೇತೃತ್ವದಲ್ಲಿ ಬಿಜೆಪಿ ಮತ್ತು ಜೆಡಿಎಸ್ ಹಾಗೂ ಮಹಾರಾಷ್ಟ್ರ ಏಕೀಕರಣ ಸಮಿತಿಯ ನೂರಾರು ಕಾರ್ಯಕರ್ತರು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು. ಈ ಸಂದರ್ಭದಲ್ಲಿ 60...

ಬೆಳಗಾವಿ : ಭೀಕರ ಅಪಘಾತದಲ್ಲಿ ಎಎಸ್​ಐ ಪತ್ನಿ ಸೇರಿದಂತೆ ನಾಲ್ವರು ಸಾವು 

ಬೆಳಗಾವಿ: ಕಾರು ಮತ್ತು ಬೈಕ್​ಗೆ, ಲಾರಿ ಡಿಕ್ಕಿ ಹೊಡೆದ ಪರಿಣಾಮ ಎಎಸ್​ಐ ಪತ್ನಿ ಸೇರಿದಂತೆ ನಾಲ್ವರು ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಸವದತ್ತಿ ತಾಲೂಕಿನ ಬೂದಿಗೊಪ್ಪ ಕ್ರಾಸ್​ನಲ್ಲಿ ನಡೆದಿದೆ. ರುಕ್ಮಿಣಿ ಹಳಕಿ(48) ಅಕ್ಷತಾ ಹಳಕಿ(22), ಕಾರು...

LEAVE A REPLY

Please enter your comment!
Please enter your name here

Latest News

- Advertisement -
- Advertisement -
- Advertisement -
- Advertisement -