ಬೆಂಗಳೂರು : ರಾಷ್ಟ್ರೀಯ ಸಹಕಾರ ಹೈನು ಮಹಾಮಂಡಳ ನಿಯಮಿತದ ಆಡಳಿತ ಮಂಡಳಿ ನಿರ್ದೇಶಕರಾಗಿ ಕೆಎಂಎಫ್ ಅಧ್ಯಕ್ಷ, ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಆಡಳಿತ ಮಂಡಳಿ ನಿರ್ದೇಶಕ ಸ್ಥಾನಕ್ಕೆ ಗುಜರಾತ್ ರಾಜ್ಯದ ಆನಂದ್ ನಗರದಲ್ಲಿ ನಡೆದ ಆಡಳಿತ ಮಂಡಳಿ ಚುನಾವಣೆಯಲ್ಲಿ ಗುಜರಾತ್ ಸಹಕಾರ ಹಾಲು ಮಾರಾಟ ಮಹಾಮಂಡಳದ ಶಾಮಲ್ ಬಾಯ್ ಪಟೇಲ, ಕರ್ನಾಟಕ ಸಹಕಾರ ಎಣ್ಣೆ ಬೀಜ ಬೆಳೆಗಾರರ ಮಹಾಮಂಡಳದಿಂದ ವೆಂಕಟರಾವ್ ನಾಡಗೌಡ, ಹರಿಯಾಣ ಸಹಕಾರ ಹೈನು ಅಭಿವೃದ್ಧಿ ಮಹಾಮಂಡಳದಿಂದ ರಣೀರ್ ಸಿಂಗ್ ಮತ್ತು ಕೇರಳ ರಾಜ್ಯ ಸಹಕಾರ ಹಾಲು ಮಾರಾಟ ಮಹಾಮಂಡಳದಿಂದ ಕೆ.ಎಸ್. ಮಣಿ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಚುನಾವಣಾಕಾರಿಯಾಗಿದ್ದ ಸಜ್ಜಲ್ ಬಿಸ್ವಾಸ್ ಅವರು ಪ್ರಕಟಿಸಿದ್ದಾರೆ.