ಹುಬ್ಬಳ್ಳಿ: ರಾಜ್ಯ ಹಾಗೂ ರಾಷ್ಟ್ರ ರಾಜಕೀಯದಲ್ಲಿ ಅಸ್ಥಿರತೆ ಉಂಟಾಗಲಿದೆ ಎಂದು ಹುಬ್ಬಳ್ಳಿಯಲ್ಲಿ ಕೋಡಿಮಠದ ಸ್ವಾಮೀಜಿ ಭವಿಷ್ಯ ನುಡಿದ್ದಾರೆ. ರಾಷ್ಟ್ರ ರಾಜಕಾರಣ, ರಾಜ್ಯ ರಾಜಕಾರಣದಲ್ಲೂ ಅಸ್ಥಿರತೆ ಉಂಟಾಗಲಿದ್ದು, ಯುಗಾದಿ ನಂತರ ಏನಾಗುತ್ತೇ ಎಂದು ಕಾದುನೋಡಿ ಎಂದು ಹೇಳಿದ್ದಾರೆ. ಈ ಹಿಂದೆಯು ಕೋಡಿಮಠದ ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ ಹೇಳಿರುವ ಭವಿಷ್ಯವಾಣಿಗಳು ನಿಜವಾಗಿದೆ ಎಂಬುದಕ್ಕೆ ಅನೇಕ ಘಟನೆಗಳೇ ಸಾಕ್ಷಿಯಾಗಿದೆ. ಇದೀಗ ರಾಷ್ಟ್ರ ಮತ್ತು ರಾಜ್ಯ ರಾಜಕೀಯದಲ್ಲಿ ಮಹತ್ವ ಬೆಳವಣಿಗಳು ಕಾಣಲಿದೆ ಎಂದು ಹೇಳಿದ್ದಾರೆ.
ಯುಗಾದಿವರೆಗೂ ಸಮಯ ಇದೆ. ನಂತರ ರಾಜಕೀಯ ಅಸ್ಥಿರತೆ ಉಂಟಾಗಿದೆ. ಇದರ ಜತೆಗೆ ರಾಜ್ಯದಲ್ಲಿ ಬರಗಾಲದ ಛಾಯೆ ವಿಚಾರದ ಬಗ್ಗೆಯು ತಿಳಿಸಿದ್ದು, ಮನುಷ್ಯ ಮಾಡಿದ ತಪ್ಪುಗಳನ್ನು ದೇವರು ಕ್ಷಮಿಸುತ್ತಾನೆ. ಆದರೆ ಮನುಷ್ಯ ಮಾಡಿದ ಪಾಪಕರ್ಮಗಳು ಮನುಷ್ಯನ್ನು ಕ್ಷಮಿಸುವುದಿಲ್ಲ ಎಂದು ಹೇಳಿದ್ದಾರೆ.
ಮನುಷ್ಯನ ಪಾಪಕರ್ಮಗಳೇ ಇಂತಹ ಪರಿಸ್ಥಿತಿಗೆ ಕಾರಣ. ಮನುಷ್ಯನಕರ್ಮ ಭಾದೆಗಳು ಹೆಚ್ಚಾದಾಗ ಇಂತಹ ದುಸ್ಥಿತಿಗಳನ್ನು ಸಾಮೂಹಿಕವಾಗಿ ಅನುಭವಿಸಬೇಕಾಗುತ್ತದೆ. ಶ್ರಾವಣ ಮಾಸದ ಮಧ್ಯಭಾಗದಲ್ಲಿ ಮಳೆಯಾಗಿದೆ. ಅಮಾವಾಸ್ಯೆ ಕಳೆದ ನಂತರ ಇನ್ನೂ ಮಳೆಯಾಗುವ ಸಾಧ್ಯತೆ ಇದೆ ಎಂದು ಹೇಳಿದ್ದಾರೆ.