spot_img
spot_img
spot_img
21.1 C
Belagavi
Friday, September 30, 2022
spot_img

ಬಿಜೆಪಿಯ ಯಾವುದೇ ತಂತ್ರ ಫಲಕಾರಿಯಾಗುವುದಿಲ್ಲ : ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ 

spot_img

ಬೆಳಗಾವಿ : ಪದವೀಧರ ಮತಕ್ಷೇತ್ರ ಹಾಗೂ ವಾಯವ್ಯ ಶಿಕ್ಷಕರ ಮತಕ್ಷೇತ್ರದ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿ ಪ್ರಕಾಶ್ ಹುಕ್ಕೇರಿ ಹಾಗೂ ಸುರೇಶ್ ಸಂಕ ನಾಮಪತ್ರ ಸಲ್ಲಿಸಿದರು.

ಬಳಿಕ ಮಾತನಾಡಿದ ಕೆಪಿಸಿಸಿ ಅಧ್ಯಕ್ಷರಾದ ಡಿಕೆ ಶಿವಕುಮಾರ್, ಶಿಕ್ಷಕರ ಕ್ಷೇತ್ರದಲ್ಲಿ ಅನೇಕ ಸಮಸ್ಯೆಗಳಿವೆ ಅವುಗಳನ್ನು ಪ್ರಕಾಶ್ ಹುಕ್ಕೇರಿ ಅವರು ದೀರ್ಘಕಾಲದ ರಾಜಕೀಯ ಅನುಭವ ಹಾಗೂ ಕಾರ್ಯನಿಷ್ಠೆಯಿಂದ ಶಿಕ್ಷಕರ ಸಮಸ್ಯೆಗಳನ್ನು ಪರಿಹರಿಸಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಪ್ರಕಾಶ್ ಹುಕ್ಕೇರಿ ಅವರನ್ನು ಪಕ್ಷ ಪ್ರಾಮುಖ್ಯತೆ ನೀಡಿ ಕಣಕ್ಕೆ ಇಳಿಸಿದೆ. ನಾವೆಲ್ಲರೂ ಒಗ್ಗಟ್ಟಿನಿಂದ ಚುನಾವಣೆಯನ್ನು ಎದುರಿಸಲಿದ್ದೇವೆ. ವಿರೋಧಪಕ್ಷಗಳ ಏನೇ ಆರೋಪ ಮಾಡಿದರು ಅವು ಆರೋಪಗಳಿಗೆ ಮಾತ್ರ ಸೀಮಿತವಾಗಿರುತ್ತವೆ.

ನಾವು ಈಗಾಗಲೇ ಈ ರೀತಿಯ ಆರೋಪಗಳನ್ನು ಬಹಳ ಕೇಳಿದ್ದೇವೆ ಈ ಸಾರಿ ಬಿಜೆಪಿಯ ಯಾವುದೇ ತಂತ್ರ ಫಲಕಾರಿಯಾಗುವುದಿಲ್ಲ ಎಂದರು.

ಮಹಿಳೆಯರಿಗೆ ವಿಧಾನ ಪರಿಷತ್ ಚುನಾವಣೆಯಲ್ಲಿ ಪ್ರಾಮುಖ್ಯತೆ ನೀಡಿಲ್ಲ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು ಈಗಾಗಲೇ ಕಾಂಗ್ರೆಸ್ ಪಕ್ಷ ಮಹಿಳಾ ಶಾಸಕರು ಮತ್ತು ವಿಧಾನಪರಿಷತ್ ಸದಸ್ಯರುಗಳನ್ನು ಮಾಡಿದೆ. ಪಕ್ಷದಿಂದ ಪ್ರಭಾವಿ ಮಹಿಳಾ ಶಾಸಕರುಗಳು ಮಂತ್ರಿಗಳು ಮತ್ತು ನಾಯಕರಗಳಾಗಿ ಪಕ್ಷದಲ್ಲಿ ಇದ್ದಾರೆ ಎಂದರು.

ಈ ಸಂದರ್ಭದಲ್ಲಿ ಪಕ್ಷದ ಪ್ರಚಾರ ಸಮಿತಿ ಅಧ್ಯಕ್ಷರು ಮಾಜಿ ಸಚಿವರಾದ ಎಂ .ಬಿ .ಪಾಟೀಲ್, ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ, ಬೆಳಗಾವಿ ಗ್ರಾಮೀಣ ಕ್ಷೇತ್ರದ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್, ಶಾಸಕ, ಮಹಾಂತೇಶ್ ಕೌಜಲಗಿ, ಚಿಕ್ಕೋಡಿ- ಸದಲಗಾ ಮತಕ್ಷೇತ್ರದ ಶಾಸಕರಾದ ಗಣೇಶ್ ಹುಕ್ಕೇರಿ, ವಿಧಾನಪರಿಷ ಸದಸ್ಯ ಚೆನ್ನರಾಜ್ ಹಟ್ಟಿಹೊಳಿ, ಬೆಳಗಾವಿ ಗ್ರಾಮೀಣ ಘಟಕದ ಅಧ್ಯಕ್ಷರಾದ ವಿನಯ್ ನವಲ್ಗಟ್ಟಿ, ಚಿಕ್ಕೋಡಿ ಜಿಲ್ಲಾ ಘಟಕದ ಅಧ್ಯಕ್ಷರಾದ ಲಕ್ಷ್ಮಣರಾವ್ ಚಿಂಗಳೆ, ಮಾಜಿ ಶಾಸಕರುಗಳು, ಹಲವು ಮುಖಂಡರುಗಳು ಘಟನೆಗಳ ಉಪಸ್ಥಿತರಿದ್ದರು.

ವರದಿ : ರತ್ನಾಕರ್ ಗೌಂಡಿ, ಬೆಳಗಾವಿ

spot_img

Related News

ಇಂದು ರಾಜ್ಯಕ್ಕೆ ಭಾರತ್ ಜೋಡೋ ಯಾತ್ರೆ

ಚಾಮರಾಜನಗರ : ರಾಹುಲ್ ಗಾಂಧಿ ನೇತೃತ್ವದಲ್ಲಿ ದೇಶಾದ್ಯಂತ ನಡೆಸುತ್ತಿರುವ ಭಾರತ್ ಜೋಡೋ ಯಾತ್ರೆ ಇಂದು ರಾಜ್ಯಕ್ಕೆ ಆಗಮಿಸಲಿದ್ದು, ಬರಮಾಡಿಕೊಳ್ಳಲು ಕಾಂಗ್ರೆಸ್ ತಯಾರಿ ಜೋರಾಗಿದೆ. ನಾಯಕರನ್ನು ಸ್ವಾಗತಿಸಲು ರಾಜ್ಯ ಕಾಂಗ್ರೆಸ್‌ ನಾಯಕರು ಸರ್ವ ರೀತಿಯಲ್ಲೂ...

ಪ್ರತಿ ಇನ್ಸಸ್ಟಾಗ್ರಾಂ ಪೋಸ್ಟ್ ಗೆ 8 ಕೋಟಿ ರೂ. ಪಡೆಯುವ ವಿರಾಟ್ ಕೊಹ್ಲಿ

ನವದೆಹಲಿ: ವಿರಾಟ್​ ಕೊಹ್ಲಿ ಸಾಮಾಜಿಕ ಜಾಲತಾಣ ಇನ್​ಸ್ಟಾಗ್ರಾಂನಲ್ಲೂ ಹೊಸ ದಾಖಲೆ ಬರೆದಿದ್ದಾರೆ. ಇನ್​ಸ್ಟಾಗ್ರಾಂನಲ್ಲಿ ಅವರು ಪ್ರತಿ ಪ್ರಾಯೋಜಿತ ಪೋಸ್ಟ್​ಗೆ ಬರೋಬ್ಬರಿ 8 ಕೋಟಿ ರೂಪಾಯಿ ಚಾರ್ಜ್​ ಮಾಡುತ್ತಿದ್ದಾರೆ. ಈ ಮೂಲಕ ಇನ್​ಸ್ಟಾಗ್ರಾಂನಲ್ಲಿ ಗರಿಷ್ಠ ಹಣ...

LEAVE A REPLY

Please enter your comment!
Please enter your name here

Latest News

- Advertisement -
- Advertisement -
- Advertisement -
- Advertisement -