spot_img
spot_img
spot_img
18.7 C
Belagavi
Monday, September 26, 2022
spot_img

ಕೆಪಿಟಿಸಿಎಲ್ ಕಿರಿಯ ಸಹಾಯಕ ಹುದ್ದೆ ಪರೀಕ್ಷೆ ಪತ್ರಿಕೆ ಲೀಕ್ ಮಾಡಿದ ತಂದೆ – ಮಗ..?! 

spot_img
spot_img

For Breaking News Download App

ಗದಗ: ಈಗ ರಾಜ್ಯದಲ್ಲಿ ಮತ್ತೊಂದು ಭಾರೀ ಪರೀಕ್ಷಾ ಅಕ್ರಮ ಬಯಲಾಗಿದೆ. ಕೆಪಿಟಿಸಿಎಲ್ ಕಿರಿಯ ಸಹಾಯಕ ಹುದ್ದೆಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ನೇತೃತ್ವದಲ್ಲಿ ನಡೆದಿದ್ದ ಪರೀಕ್ಷೆ ಪತ್ರಿಕೆ ಲೀಕ್ ಆಗಿದೆ.

ಗದಗದ ಮುನ್ಸಿಪಲ್ ಕಾಲೇಜ್ ನಲ್ಲಿ ಕೆಪಿಟಿಸಿಎಲ್ ಕಿರಿಯ ಸಹಾಯಕ ಹುದ್ದೆಗಾಗಿ ಪರೀಕ್ಷೆ ನಡೆದಿತ್ತು. ಆದ್ರೆ ಗದಗದಲ್ಲಿಯೇ ಈ ಪರೀಕ್ಷಾ ಪತ್ರಿಕೆ ಲೀಕ್ ಆಗಿದೆ. ತಂದೆ-ಮಗನ ಸೇರಿಕೊಂಡು ಪ್ರಶ್ನೆ ಪತ್ರಿಕೆ ಲೀಕ್ ಮಾಡಿದ್ದಾರೆ ಎನ್ನಲಾಗುತ್ತಿದೆ. ಮುನಿಸಿಪಲ್ ಕಾಲೇಜಿನ ಉಪ ಪ್ರಾಚಾರ್ಯ ಮಾರುತಿ ಸೋನಾವನೆ ಮತ್ತು ಅವರ ಮಗ ಸಮೀತ ಕುಮಾರ್ ಪ್ರಶ್ನೆ ಪತ್ರಿಕೆ ಲೀಕ್ ಮಾಡಿದ್ದಾರೆ ಎನ್ನಲಾಗಿದೆ.

ಮಗ ಸಮೀತಕುಮಾರ್ ಪತ್ರಕರ್ತನ ಸೋಗಿನಲ್ಲಿ ಪರೀಕ್ಷಾ ಕೇಂದ್ರಕ್ಕೆ ಎಂಟ್ರಿ ಕೊಟ್ಟು ಮೊಬೈಲ್ ಮೂಲಕ ಪ್ರಶ್ನೆ ಪತ್ರಿಕೆ ಸೆರೆ ಹಿಡಿದಿದ್ದಾನೆ. ರಾಜ್ಯದ ಬೇರೆ ಬೇರೆ ಕಡೆ ಪ್ರಶ್ನೆ ಪತ್ರಿಕೆ ಕಳಿಸಿದ್ದಾನೆ ಎಂಬ ಶಂಕೆ ವ್ಯಕ್ತವಾಗಿದೆ. ಸದ್ಯ ಬೆಳಗಾವಿ ಸೈಬರ್ ಕ್ರೈಮ್ ಪೊಲೀಸರು ಮೊಬೈಲ್ ಗಾಗಿ ತೀವ್ರ ಶೋಧ ನಡೆಸುತ್ತಿದ್ದಾರೆ. ತಂದೆ-ಮಗನನ್ನು ಬಂಧಿಸಿ, ತೀವ್ರ ವಿಚಾರಣೆ ನಡೆಸಲಾಗುತ್ತಿದೆ.

ಸೈಬರ್ ಪೊಲೀಸರು, ಕಾಲೇಜ್ ಪ್ರಾಚಾರ್ಯ ಕುಲಕರ್ಣಿ ಅವರನ್ನು ವಿಚಾರಣೆ ನಡೆಸಿದ್ದು ವಿಚಾರಣೆ ವೇಳೆ ಪ್ರಾಚಾರ್ಯರ ಕಣ್ಣೀರಿಟ್ಟಿದ್ದಾರೆ. ಪ್ರಶ್ನೆ ಪತ್ರಿಕೆ ಲಿಂಕ್ ಆಗಿರುವ ಜಾಡು ಹಿಡಿದುಕೊಂಡು ಬಂದ ಬೆಳಗಾವಿ ಪೊಲೀಸರು ಭಾರಿ ಶೋಧ ನಡೆಸುತ್ತಿದ್ದಾರೆ.

For Breaking News Download App

Related News

ನನಗೆ ಭಾಷೆ – ಜಾತಿ ಇಲ್ಲ, ಜನರ ಪ್ರೀತಿ ಒಂದೇ : ಶಾಸಕಿ ಅಂಜಲಿ ನಿಂಬಾಳ್ಕರ್ 

ವರದಿ : ರತ್ನಾಕರ ಗೌಂಡಿ  ಬೆಳಗಾವಿ : ಖಾನಾಪುರ್ ಪಟ್ಟಣದಲ್ಲಿ ಅಂಜಲಿ ನಿಂಬಾಳ್ಕರ್ ನೇತೃತ್ವದಲ್ಲಿ ಬಿಜೆಪಿ ಮತ್ತು ಜೆಡಿಎಸ್ ಹಾಗೂ ಮಹಾರಾಷ್ಟ್ರ ಏಕೀಕರಣ ಸಮಿತಿಯ ನೂರಾರು ಕಾರ್ಯಕರ್ತರು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು. ಈ ಸಂದರ್ಭದಲ್ಲಿ 60...

ಬೆಳಗಾವಿ : ಭೀಕರ ಅಪಘಾತದಲ್ಲಿ ಎಎಸ್​ಐ ಪತ್ನಿ ಸೇರಿದಂತೆ ನಾಲ್ವರು ಸಾವು 

ಬೆಳಗಾವಿ: ಕಾರು ಮತ್ತು ಬೈಕ್​ಗೆ, ಲಾರಿ ಡಿಕ್ಕಿ ಹೊಡೆದ ಪರಿಣಾಮ ಎಎಸ್​ಐ ಪತ್ನಿ ಸೇರಿದಂತೆ ನಾಲ್ವರು ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಸವದತ್ತಿ ತಾಲೂಕಿನ ಬೂದಿಗೊಪ್ಪ ಕ್ರಾಸ್​ನಲ್ಲಿ ನಡೆದಿದೆ. ರುಕ್ಮಿಣಿ ಹಳಕಿ(48) ಅಕ್ಷತಾ ಹಳಕಿ(22), ಕಾರು...

LEAVE A REPLY

Please enter your comment!
Please enter your name here

Latest News

- Advertisement -
- Advertisement -
- Advertisement -
- Advertisement -