spot_img
spot_img
spot_img
28.1 C
Belagavi
Thursday, September 29, 2022
spot_img

ಕೆಪಿಟಿಸಿಎಲ್ ಪ್ರಶ್ನೆಪತ್ರಿಕೆ ಸೋರಿಕೆ : 9 ಆರೋಪಿಗಳು ಅರೆಸ್ಟ್ 

spot_img

ಬೆಳಗಾವಿ: ಕೆಪಿಟಿಸಿಎಲ್ ಕಿರಿಯ ಸಹಾಯಕ ಪರೀಕ್ಷೆಯಲ್ಲಿ ನಕಲು ಪ್ರಕರಣಕ್ಕೆ ಸಂಬಂಧಿಸಿದಂತೆ ಗೋಕಾಕ್ ನಗರ ಪೊಲೀಸರು 9 ಜನ ಆರೋಪಿಗಳನ್ನು ಬಂಧಿಸಿದ್ದಾರೆ.

ಪ್ರಕರಣ ಸಂಬಂಧ ಬೆಳಗಾವಿ ಎಸ್‌ಪಿ‌ ಡಾ.ಸಂಜೀವ್ ಪಾಟೀಲ್ ಮಾತನಾಡಿ ಗೋಕಾಕ್‌, ಗದಗದಲ್ಲಿ ಪ್ರಶ್ನೆಪತ್ರಿಕೆ ಸೋರಿಕೆ ಮಾಡಿದ್ದರು. ಆ.7ರಂದು ನಡೆದಿದ್ದ ಕೆಪಿಟಿಸಿಎಲ್ ಕಿರಿಯ ಸಹಾಯಕ ಪರೀಕ್ಷೆಯಲ್ಲಿ ಗೋಕಾಕ್‌ನಲ್ಲಿ ಸ್ಮಾರ್ಟ್​ವಾಚ್ ಬಳಸಿ ಪರೀಕ್ಷೆಯಲ್ಲಿ ಅಕ್ರಮ ಎಸಗಿದ್ದರು.

ಈ ಸಂಬಂಧ ಗೋಕಾಕ್ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಹೀಗಾಗಿ ಪರೀಕ್ಷಾರ್ಥಿ ಸಿದ್ದಪ್ಪ ಮದೀಹಳ್ಳಿ ಎಂಬುವರನ್ನು ಪೊಲೀಸರು ಬಂಧಿಸಿದ್ದರು. ಸಿದ್ದಪ್ಪ ನೀಡಿದ ಮಾಹಿತಿ ಆಧರಿಸಿ ಉಳಿದ ಆರೋಪಿಗಳ ಬಂಧನ ಮಾಡಲಾಗಿದೆ ಎಂದು ಎಸ್‌ಪಿ‌ ಡಾ.ಸಂಜೀವ್ ಪಾಟೀಲ್ ಹೇಳಿದ್ದಾರೆ. ಮೂವರು ಕಿಂಗ್‌ಪಿನ್‌ಗಳಿಗಾಗಿ ಶೋಧ ಕಾರ್ಯ ಮುಂದುವರೆದಿದೆ.

spot_img

Related News

ಗಂಟುರೋಗದಿಂದ ದನಗಳು ಮೃತಪಟ್ಟರೆ 20 ಸಾವಿರ ರೂ.ಗಳ ಪರಿಹಾರ : ಸಿಎಂ ಬೊಮ್ಮಾಯಿ 

ಹಾವೇರಿ : ಗಂಟುರೋಗದಿಂದ ದನಗಳು ಮೃತಪಟ್ಟರೆ 20 ಸಾವಿರ ರೂಪಾಯಿಗಳ ಪರಿಹಾರ ಒದಗಿಸಲಾಗುವುದು ಹಾಗೂ ಗಂಟು ರೋಗದ ಚಿಕಿತ್ಸಾ ವೆಚ್ಚವನ್ನು ಸರ್ಕಾರವೇ ಭರಿಸಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಿಸಿದರು ಹಾವೇರಿಯ ಗುರುಭವನದಲ್ಲಿ ಹಾವೇರಿ...

ಮೋದಿ ಅವರ ನೇತೃತ್ವದಲ್ಲಿ 150 ಸ್ಥಾನಗಳ ಗೆಲುವ ಪಣ : ಯಡಿಯೂರಪ್ಪ 

ಶಿವಮೊಗ್ಗ: ಪ್ರಧಾನಿ ಮೋದಿ ಅವರ ಮಾರ್ಗದರ್ಶನದಲ್ಲಿ ಮುಂಬರುವ ಚುನಾವಣೆಯಲ್ಲಿ ರಾಜ್ಯದಲ್ಲಿ 150 ಸ್ಥಾನಗಳನ್ನು ಗೆಲ್ಲುವ ಪಣ ಹೊಂದಿದ್ದೇವೆ ಎಂದು ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೋದಿಯವರ ನೇತೃತ್ವದಲ್ಲಿ ದೇಶ...

LEAVE A REPLY

Please enter your comment!
Please enter your name here

Latest News

- Advertisement -
- Advertisement -
- Advertisement -
- Advertisement -