ಬೆಂಗಳೂರು : ಕೆಪಿಟಿಸಿಎಲ್ ನಲ್ಲಿ ಕಿರಿಯ ಸಹಾಯಕರ ಹುದ್ದೆಗಳ ಪರೀಕ್ಷೆಯ ವೇಳೆ ನಡೆದ ಅವ್ಯವಹಾರಕ್ಕೆ ಸಂಬಂಧಿಸಿದಂತೆ ಪೊಲೀಸರು ಮತ್ತೆ ಮೂವರನ್ನು ವಶಕ್ಕೆ ತೆಗೆದುಕೊಂಡಿದ್ದಾರೆ.
ಈಗಾಗಲೇ ಪೊಲೀಸರು ಒಂಬತ್ತು ಜನರನ್ನು ಬಂಧಿಸಿದ್ದಾರೆ. ಸದ್ಯ ಬಂಧಿತ ಮೂವರು ಶಂಕಿತರು ಬೆಳಗಾವಿಯ ನಿವಾಸಿಗಳಾಗಿದ್ದು, ಸ್ಥಳೀಯ ಕೇಂದ್ರದಲ್ಲಿ ಪರೀಕ್ಷೆಗೆ ಹಾಜರಾಗಿದ್ದರು.
ಈಗಾಗಲೇ ಗೋಕಾಕ ತಾಲೂಕಿನ ನಾಗನೂರ ಗ್ರಾಮದ ಸಿದ್ದಪ್ಪ ಮದಿಹಳ್ಳಿ, ಬೆನಚಿನಮರಡಿ ಗ್ರಾಮದ ಸಿದ್ದಪ್ಪ ಕೊತ್ತಲ, ಮಾಲದಿನ್ನಿ ಗ್ರಾಮದ ರೇಣುಕಾ ಜವಾರಿ, ಸುನೀಲ ಭಂಗಿ, ಸಂತೋಷ ವೀರನಗಡ್ಡಿ, ಬಸವಣ್ಣಿ ಡೊಣವಾಡ, ಗದಗ ಮೂಲದ ಮಾರುತಿ ಸೋನವಣಿ, ಸಮೀತ್ ಕುಮಾರ್ ಸೋನವಣಿ ಹಾಗೂ ಅಮರೇಶ ರಾಜೂರ ಎಂಬುವವರನ್ನು ಬಂಧಿಸಲಾಗಿದೆ.