ಹುಬ್ಬಳ್ಳಿ : ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಜೆಡಿಎಸ್ ಪಕ್ಷ ಅಧಿಕಾರಕ್ಕೆ ಬಂದರೆ ಕುಮಾರಸ್ವಾಮಿಯೇ ಮುಖ್ಯಮಂತ್ರಿ ಆಗಲಿದ್ದಾರೆ ಎಂದು ಜೆಡಿಎಸ್ ರಾಜ್ಯ ಅಧ್ಯಕ್ಷ ಸಿ.ಎಂ.ಇಬ್ರಾಹಿಂ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜೆಡಿಎಸ್ ಪಕ್ಷವು ಅಧಿಕಾರಕ್ಕೆ ಬಂದರೆ ಕುಮಾರಸ್ವಾಮಿ ಮುಖ್ಯಮಂತ್ರಿಯಾಗಲಿದ್ದು, ಉಪ ಮುಖ್ಯಮಂತ್ರಿ ಹುದ್ದೆಗಳನ್ನು ಸೃಷ್ಟಿಸಿದರೆ ಮುಸ್ಲಿಂ, ದಲಿತ, ಮಹಿಳೆ, ಒಬಿಸಿ, ಲಿಂಗಾಯತ ಅಥವಾ ಇತರ ಸಮುದಾಯದ ನಾಯಕರಿಗೆ ಅವಕಾಶ ನೀಡಲಾಗುವುದು ಎಂದು ಅವರು ಹೇಳಿದರು.
ಕುಮಾರಸ್ವಾಮಿ ಅವರು ಮುಸ್ಲಿಂ ಅಥವಾ ದಲಿತ ಸಿಎಂ ಆಗಬೇಕು ಎಂಬ ಆಸೆ ವ್ಯಕ್ತಪಡಿಸಿದ್ದಾರೆ, ಅದರಲ್ಲಿ ತಪ್ಪೇನಿದೆ.. ಇಲ್ಲಿ ಪಕ್ಷದ ಅಧ್ಯಕ್ಷನಾಗಿ, ಕುಮಾರಸ್ವಾಮಿ ಅವರೇ ಸಿಎಂ ಆಗುತ್ತಾರೆ ಎಂದು ನಾನು ಹೇಳುತ್ತೇನೆ.
ಆದರೆ, 2024 ರ ಲೋಕಸಭಾ ಚುನಾವಣೆಯಲ್ಲಿ ಅವರು ರಾಷ್ಟ್ರ ರಾಜಕಾರಣವನ್ನು ಪ್ರವೇಶಿಸುವ ಸಾಧ್ಯತೆಯಿದೆ ಆಗ ಇತರರು ಇಲ್ಲಿ ಮುಖ್ಯಮಂತ್ರಿಯಾಗುತ್ತಾರೆ ಎಂದು ಹೇಳಿದರು.