spot_img
spot_img
spot_img
28.1 C
Belagavi
Thursday, September 29, 2022
spot_img

ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದ ಧನಸಹಾಯ ಬಿಡುಗಡೆ ಮಾಡಿಸಿದ ಶಾಸಕಿ ಹೆಬ್ಬಾಳಕರ್

spot_img

ಬೆಳಗಾವಿ : ಶಾಸಕಿ ಲಕ್ಷ್ಮೀ ಹೆಬ್ಬಾಳಕರ್ ಅವರು ಬೆಳಗಾವಿ ಗ್ರಾಮೀಣ ಕ್ಷೇತ್ರದ 7 ಜನರಿಗೆ ಅನಾರೋಗ್ಯದ ಹಿನ್ನೆಲೆಯಲ್ಲಿ ಆಸ್ಪತ್ರೆಯ ಚಿಕಿತ್ಸಾ ವೆಚ್ಚವಾಗಿ ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದ 4 ಲಕ್ಷ ರೂ. ಗಳನ್ನು ಬಿಡುಗಡೆ ಮಾಡಿಸಿದ್ದಾರೆ.

ಹೊನಗಾದ ಗಜಾನನ ಬಾವುಕಣ್ಣಾ ಹುಂದ್ರೆ, ಸಂತಿಬಸ್ತವಾಡದ ಕಲಿಮುಲ್ಲಾ ಖಾನ್ ಮಣಿಯಾರ್, ಕುದ್ರೆಮನೆಯ ಅನಿತಾ ಶಂಕರ ಪಾವುಸ್ಕರ್, ಕುದ್ರೆಮನೆಯ ರಘುನಾಥ ಬುಜಂಗ್, ಹಿರೇಬಾಗೇವಾಡಿಯ ಶಂಕರಗೌಡ ಪಾಟೀಲ, ತುಮ್ಮರಗುದ್ದಿಯ ಕಲ್ಮೇಶ ಹೊಸೂರಿ, ಅಂಬೆವಾಡಿಯ ಬೊಮ್ಮಣ್ಣ ಬಾತಖಾಂಡೆ ಧನ ಸಹಾಯ ಪಡೆದವರು.

ಗುರುವಾರ ಈ ಕುರಿತು ಸಂಬಂಧಿಸಿದವರಿಗೆ ಮಾಹಿತಿ ಪತ್ರ ನೀಡಿದ ಲಕ್ಷ್ಮೀ ಹೆಬ್ಬಾಳಕರ್, ಆರೋಗ್ಯ ಎಲ್ಲಕ್ಕಿಂತ ಮುಖ್ಯ. ಆರೋಗ್ಯ ಕಾಪಾಡಿಕೊಳ್ಳಲು ಆದ್ಯತೆ ನೀಡಬೇಕು. ಹಾಗಂತ ಆರೋಗ್ಯ ಕೈಕೊಟ್ಟಾಗ ಧೃತಿಗೆಡಬೇಕಾಗಿಲ್ಲ. ನಿಮ್ಮ ಜೊತೆಗೆ ನಾನಿದ್ದೇನೆ ಎಂದು ಭರವಸೆ ನೀಡಿದರು.

ಈವರೆಗೂ ಕ್ಷೇತ್ರದ ಸಾವಿರಾರು ಜನರಿಗೆ ವಿವಿಧ ರೀತಿಯ ಚಿಕಿತ್ಸೆಗಾಗಿ ಕೊಟ್ಯಂತರ ರೂ.ಗಳ ನೆರವನ್ನು ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದ, ವಯಕ್ತಿಕವಾಗಿ ಮತ್ತು ಲಕ್ಷ್ಮೀ ತಾಯಿ ಫೌಂಡೇಶನ್ ನಿಂದ ಒದಗಿಸಲಾಗಿದೆ ಎಂದು ಅವರು ತಿಳಿಸಿದರು.

spot_img

Related News

ಮೋದಿ ಅವರ ನೇತೃತ್ವದಲ್ಲಿ 150 ಸ್ಥಾನಗಳ ಗೆಲುವ ಪಣ : ಯಡಿಯೂರಪ್ಪ 

ಶಿವಮೊಗ್ಗ: ಪ್ರಧಾನಿ ಮೋದಿ ಅವರ ಮಾರ್ಗದರ್ಶನದಲ್ಲಿ ಮುಂಬರುವ ಚುನಾವಣೆಯಲ್ಲಿ ರಾಜ್ಯದಲ್ಲಿ 150 ಸ್ಥಾನಗಳನ್ನು ಗೆಲ್ಲುವ ಪಣ ಹೊಂದಿದ್ದೇವೆ ಎಂದು ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೋದಿಯವರ ನೇತೃತ್ವದಲ್ಲಿ ದೇಶ...

ತಾಳ್ಮೆ ಕಳೆದುಕೊಂಡು ಸಿದ್ದರಾಮಯ್ಯ ಮಾತನಾಡುತ್ತಿದ್ದಾರೆ : ಮಾಜಿ ಸಿಎಂ ಯಡಿಯೂರಪ್ಪ 

ಶಿವಮೊಗ್ಗ: ಇತ್ತೀಚೆಗೆ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ತಾಳ್ಮೆ ಕಳೆದುಕೊಂಡು ಹುಚ್ಚುಚ್ಚರಾಗಿ ಮಾತನಾಡುತ್ತಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರು ವಾಗ್ದಾಳಿ ನಡೆಸಿದ್ದಾರೆ. ನಗರದ ತಮ್ಮ ನಿವಾಸದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯಗೆ ತಲೆಕೆಟ್ಟಿದೆ....

LEAVE A REPLY

Please enter your comment!
Please enter your name here

Latest News

- Advertisement -
- Advertisement -
- Advertisement -
- Advertisement -