ಮಲಪ್ರಭಾ ಯೋಜನೆಯ ನೀರಾವರಿ ಸಲಹಾ ಸಮಿತಿಯ ಅಧ್ಯಕ್ಷರೂ ಆಗಿರುವ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರು ಶನಿವಾರ ಸಮಿತಿಯ 2 ನೇ ಸಭೆ ನಡೆಸಿದರು.
ಶಾಸಕರಾದ ಮಹಾಂತೇಶ ಕೌಜಲಗಿ, ವಿಶ್ವಾಸ್ ವೈದ್ಯ, ಎನ್.ಎಚ್.ಕೋನರಡ್ಡಿ, ಪ್ರಾದೇಶಿಕ ಆಯುಕ್ತ ಸಂಜಯ ಶೆಟ್ಟಣ್ಣವರ್, ಜಿಲ್ಲಾಧಿಕಾರಿ ನಿತೇಶ್ ಪಾಟೀಲ, ನೀರಾವರಿ ಇಲಾಖೆಯ ಅಧಿಕಾರಿಗಳು, ಮಲಪ್ರಭಾ ಸಲಹಾ ಸಮಿತಿಯ ಸದಸ್ಯರು ಉಪಸ್ಥಿತರಿದ್ದರು.