spot_img
spot_img
spot_img
spot_img
spot_img
spot_img
spot_img
spot_img
spot_img
21 C
Belagavi
Wednesday, September 27, 2023
spot_img

ಕಡಲ ಕೊರೆತ ತಡೆಗೆ ಶಾಶ್ವತ ಪರಿಹಾರ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಜಿಲ್ಲೆಯಲ್ಲಿ ಪ್ರತಿವರ್ಷ ಸಂಭವಿಸುವ ಕಡಲ ಕೊರೆತ ತಡೆಗೆ ತಮ್ಮ ಅವಧಿಯಲ್ಲಿ ಶಾಶ್ವತ ಪರಿಹಾರವನ್ನು ಕೈಗೊಳ್ಳಲು ಆದ್ಯತೆ ನೀಡಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ತಿಳಿಸಿದರು

ಅವರು ಇಂದು ಪಡುಬಿದ್ರೆಯ ಕಾಡಿ ಪಟ್ಣದಲ್ಲಿ , ಸಮುದ್ರ ಕೊರೆತ ಪ್ರದೇಶ ವೀಕ್ಷಿಸಿ ಮಾತನಾಡಿದರು .ಜಿಲ್ಲೆಯಲ್ಲಿ ಹಲವು ವರ್ಷಗಳಿಂದ ಮಳೆಗಾಲದಲ್ಲಿ ಸಮುದ್ರ ಕೊರೆತ ಸಂಭವಿಸುತ್ತಿರುವುದು ಸಾಮಾನ್ಯವಾಗಿದ್ದು ಈ ಬಗ್ಗೆ ರಾಜ್ಯ ಸರ್ಕಾರ ಮತ್ತು ಕೇಂದ್ರ ಸರ್ಕಾರದ ಸಹಭಾಗಿತ್ವದಲ್ಲಿ ಶಾಶ್ವತ ಕಾಮಗಾರಿಯನ್ನು ಕೈಗೊಳ್ಳಲಾಗುವುದು ಎಂದರು.

ಜಿಲ್ಲೆಯಲ್ಲಿ ಈ ಬಾರಿ ತಡವಾಗಿ ಮಳೆ ಆರಂಭಗೊಂಡಿದ್ದರು ಸಹ ಪ್ರಾಕೃತಿಕ ವಿಕೋಪದಿಂದ ಇದುವರೆಗೆ ಏಳು ಮಂದಿ ಮೃತಪಟ್ಟಿದ್ದು ಇವರ ಕುಟುಂಬದವರಿಗೆ ತಲಾ ರೂ. ಐದು ಲಕ್ಷಗಳ ಪರಿಹಾರವನ್ನು ವಿತರಿಸಲಾಗಿದೆ ಜಿಲ್ಲೆಯಲ್ಲಿ ಮಳೆಯಿಂದ ಜೀವ ಹಾನಿ ಸಂಭವಿಸದಂತೆ ಸಾಕಷ್ಟು ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವಂತೆ ಜಿಲ್ಲೆಯ ಎಲ್ಲಾ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದರು.

ಮಳೆಯಿಂದ ಮಾನವ ಜೀವ ಹಾನಿ,ಮನೆ ಹಾನಿ, ಜಾನುವಾರು ಹಾನಿಗೆ ಸಂಬಂಧಿಸಿದಂತೆ ತಕ್ಷಣವೇ ಸೂಕ್ತ ಪರಿಹಾರ ವಿತರಿಸುವಂತೆ ಅಧಿಕಾರಿಗಳಿಗೆ ಸೂಚಿಸಿದ ಸಚಿವರು ಜಿಲ್ಲೆಯಲ್ಲಿ ಕಾಲು ಸಂಕ ಗಳ ನಿರ್ಮಾಣ ಮತ್ತು ಕಿಂಡಿ ಅಣೆಕಟ್ಟು ನಿರ್ಮಾಣದ ಬಗ್ಗೆ ಮಾಹಿತಿ ಪಡೆದು ಅಗತ್ಯ ಕ್ರಮ ವಹಿಸಲಾಗುವುದು ಎಂದರು.

ಕಾಪು ಶಾಸಕ ಸುರೇಶ್ ಶೆಟ್ಟಿ ಗುರ್ಮೆ, ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ, ಜಿ.ಪಂ. ಸಿಇಓ ಪ್ರಸನ್ನ ಹೆಚ್, ಪೊಲೀಸ್ ವರಿಷ್ಠಾಧಿಕಾರಿ ಅಕ್ಷಯ್ ಎಂ ಹಾಕೆ, ತಹಸೀಲ್ದಾರ್ ಶ್ರೀನಿವಾಸ ಕುಲಕರ್ಣಿ ಮತ್ತಿತರರು ಉಪಸ್ಥಿತರಿದ್ದರು.

Related News

ಕೆಳಮಟ್ಟದಲ್ಲಿ ನೋಡುತ್ತಿದ್ದ ಖಾತೆಯನ್ನು ಈಗ ವಿಶ್ವವೇ ನೋಡುವಂತಾಗಿದೆ – ಲಕ್ಷ್ಮೀ ಹೆಬ್ಬಾಳಕರ್

ಬೆಳಗಾವಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಣ್ಣ ಖಾತೆಯಲ್ಲ. ಈ ಮೊದಲು ಇದನ್ನು ಕೆಳಮಟ್ಟದಲ್ಲಿ ನೋಡಲಾಗುತ್ತಿತ್ತು. ಈಗ ವಿಶ್ವವೇ ನೋಡುವಂತಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಹಿರಿಯ ನಾಗರಿಕರು...

ಜಲಜೀವನ್ ಮಿಷನ್ ಯೋಜನೆಗೆ ಚನ್ನರಾಜ ಹಟ್ಟಿಹೊಳಿ ಚಾಲನೆ

ಬೆಳಗಾವಿ: ಬೆಳಗಾವಿ ಗ್ರಾಮೀಣ ಕ್ಷೇತ್ರದ ಬಸ್ತವಾಡ ಗ್ರಾಮಕ್ಕೆ ಕುಡಿಯುವ ನೀರು ಪೂರೈಕೆ ಮಾಡುವ ನಿಟ್ಟಿನಲ್ಲಿ ಇವತ್ತು ಜಲಜೀವನ್ ಮಿಷನ್ ಯೋಜನೆಯಡಿ ಕುಡಿಯುವ ನೀರಿನ ಕಾಮಗಾರಿಗಳಿಗೆ ವಿಧಾನಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಚಾಲನೆಯನ್ನು‌ ನೀಡಿದರು. ತಂದನಂತರ...

LEAVE A REPLY

Please enter your comment!
Please enter your name here

Latest News

- Advertisement -
- Advertisement -
- Advertisement -
- Advertisement -