spot_img
spot_img
spot_img
21.3 C
Belagavi
Sunday, October 1, 2023
spot_img

ರಾಜ್ಯದ ಜವಾಬ್ದಾರಿ ಇದ್ದರೂ ಗ್ರಾಮೀಣ ಕ್ಷೇತ್ರವನ್ನು ಕಡೆಗಣಿಸಲಾರೆ – ಲಕ್ಷ್ಮೀ ಹೆಬ್ಬಾಳಕರ್

ಬೆಳಗಾವಿ: ರಾಜ್ಯದಲ್ಲಿ ಮಂತ್ರಿಯಾಗಿ ಇಡೀ ರಾಜ್ಯದ ಜವಾಬ್ದಾರಿ ಇದ್ದರೂ ನನ್ನನ್ನು ಈ ಸ್ಥಾನಕ್ಕೆ ಏರಿಸಿದ ಬೆಳಗಾವಿ ಗ್ರಾಮೀಣ ವಿಧಾನ ಸಭಾ ಕ್ಷೇತ್ರವನ್ನು ಕಡೆಗಣಿಸುವಪ್ರಶ್ನೆಯೇ ಇಲ್ಲ ಎಂದು ರಾಜ್ಯ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಹಾಗೂ ಹಿರಿಯನಾಗರಿಕರು ಮತ್ತು ವಿಕಲಚೇತನರ ಸಬಲೀಕರಣ ಇಲಾಖೆಯ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ತಿಳಿಸಿದ್ದಾರೆ.

ಬೆಳಗಾವಿ ಗ್ರಾಮೀಣ ಕ್ಷೇತ್ರದ ಕುಟ್ಟಲವಾಡಿ ಗ್ರಾಮದಲ್ಲಿ ನೂತನವಾಗಿ ನಿರ್ಮಾಣಗೊಂಡ ಶ್ರೀ ಮಾರುತಿ ಮಂದಿರದ ಕಟ್ಟಡವನ್ನು ಸೋಮವಾರ ಉದ್ಘಾಟಿಸಿ, ಮಹಾಪ್ರಸಾದದ ಕಾರ್ಯಕ್ರಮಕ್ಕೆ ಚಾಲನೆಯನ್ನು ನೀಡಿ ಅವರು ಮಾತನಾಡಿದರು. ಗ್ರಾಮೀಣ ಕ್ಷೇತ್ರದ ಸಮಸ್ಯೆಗಳು ಮತ್ತು ಆಗಬೇಕಿರುವ ಅಭಿವೃದ್ಧಿ ಕಾಮಗಾರಿಗಳ ಪಟ್ಟಿಯನ್ನು ಜನರ ಸಹಕಾರದೊಂದಿಗೆ ಅತೀ ಶೀಘ್ರದಲ್ಲಿ ಸಿದ್ಧಪಡಿಸಲಾಗುವುದು.

ಯಾವುದೇ ಮೂಲೆಯನ್ನೂ ಬಿಡದೆ ಅಭಿವೃದ್ಧಿಪಡಿಸಲಾಗುವುದು. ಕ್ಷೇತ್ರಕ್ಕೆ ಹೆಚ್ಚಿನ ಅನುದಾನ ತರುವ ಮೂಲಕ ನನ್ನ ಕನಸಿನ ಮಾದರಿ ಕ್ಷೇತ್ರ ಮಾಡುತ್ತೇನೆ. ಮುಂದಿನ ದಿನಗಳಲ್ಲಿ ವಾರದಲ್ಲಿ 4 ದಿನ ಇಡೀ ರಾಜ್ಯವನ್ನು ಸುತ್ತಿದರೂ ವಾರದ ಕೊನೆಯ ಮೂರು ದಿನ ಬೆಳಗಾವಿ ಗ್ರಾಮೀಣ ಕ್ಷೇತ್ರದಲ್ಲೇ ಇರುತ್ತೇನೆ ಎಂದು ಅವರು ಭರವಸೆ ನೀಡಿದರು.

ಗ್ರಾಮೀಣ ವಿಧಾನ ಸಭಾ ಕ್ಷೇತ್ರದಲ್ಲಿ ಕಳೆದ 5 ವರ್ಷದಲ್ಲಿ 103 ದೇವಸ್ಥಾನಗಳನ್ನು ಅಭಿವೃದ್ಧಿಪಡಿಸಲಾಗಿದೆ. ದೇವರ ಆಶಿರ್ವಾದ ಮತ್ತು ಕ್ಷೇತ್ರದ ಜನರ ಬೆಂಬಲದಿಂದ ನಾನು ಅತ್ಯಧಿಕ ಬಹುಮತದಿಂದ ಆಯ್ಕೆಯಾಗಿದ್ದಲ್ಲದೆ ರಾಜ್ಯದಲ್ಲಿ ಮಂತ್ರಿಯೂ ಆಗಿದ್ದೇನೆ. ದೊಡ್ಡ ಸ್ಥಾನಕ್ಕೆ ನನ್ನನ್ನು ಕಳಿಸಿದ ನಿಮ್ಮ ಋಣವನ್ನು ತೀರಿಸಲು ಸಾಧ್ಯವಿಲ್ಲ. ನಾನಿಲ್ಲದಿದ್ದರೂ ಮಗ ಮೃಣಾಲ ಸಂಪೂರ್ಣ 24 ಗಂಟೆಯೂ ನಿಮ್ಮ ಸೇವೆಯಲ್ಲಿ ತೊಡಗಿಕೊಂಡಿರುತ್ತಾನೆ ಎಂದು ಹೆಬ್ಬಾಳಕರ್ ತಿಳಿಸಿದರು. ಇದೇ ವೇಳೆ ದೇವಸ್ಥಾನ ಸಮಿತಿಯಿಂದ ಲಕ್ಷ್ಮೀ ಹೆಬ್ಬಾಳಕರ್ ಅವರನ್ನು ಸನ್ಮಾನಿಸಲಾಯಿತು.

ಈ ಸಮಯದಲ್ಲಿ ಗ್ರಾಮದ ಹಿರಿಯರು, ಲಕ್ಷ್ಮಣ ಕಣಬರ್ಕರ್, ಮಾರುತಿ ದೊಡ್ಡಲಕ್ಕಪ್ಪಗೋಳ, ಭರಮಾ ಕಣಬರ್ಕರ್, ಸುಧೀರ್ ದೇಸಾಯಿ, ಸಂತೋಷ ದೇಸಾಯಿ, ಗುಂಡು ದೇಸಾಯಿ, ಯುವರಾಜ ಕದಂ, ಶಂಕರಗೌಡ ಪಾಟೀಲ, ಯುವ ಕಾಂಗ್ರೆಸ್ ಮುಖಂಡ ಮೃಣಾಲ ಹೆಬ್ಬಾಳಕರ್, ಮನೋಹರ್ ಬೆಳಗಾಂವ್ಕರ್, ಮಹೇಶ ಸುಗ್ನೆಣ್ಣವರ, ಯಲ್ಲಪ್ಪ ಡೇಕೋಳ್ಕರ್, ಪರಶುರಾಮ ಪಾಟೀಲ ಮುಂತಾದವರು ಉಪಸ್ಥಿತರಿದ್ದರು.

Related News

ಸರಕಾರದ ಜೊತೆ ಎಲ್ಲ ಸಮಾಜದವರೂ ಇದ್ದಾರೆ – ಲಕ್ಷ್ಮೀ ಹೆಬ್ಬಾಳಕರ್

ಬೆಂಗಳೂರು: ಕಾಂಗ್ರೆಸ್ ಪಕ್ಷಕ್ಕೆ ಎಲ್ಲಾ ಸಮುದಾಯದ ಬೆಂಬಲ ಸಿಕ್ಕಿದೆ. ಕೇವಲ ಒಂದು ಸಮುದಾಯದ ಬೆಂಬಲದಿಂದ ಅಧಿಕಾರಕ್ಕೇರಿಲ್ಲ. ಎಲ್ಲಾ ಸಮಾಜದವರೂ ಸರಕಾರದೊಂದಿಗಿದ್ದಾರೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವರಾದ ಲಕ್ಷ್ಮಿ ಹೆಬ್ಬಾಳ್ಕರ್...

ನಿಮ್ಮ ಆಸ್ತಿಗಳ ಮೌಲ್ಯಗಳನ್ನು ಅಪಮೌಲ್ಯ ಮಾಡಬೇಡಿ ನೈಜ್ಯ ಬೆಲೆಗೆ ವ್ಯವಹಾರ ಮಾಡಿ

ಬೆಳಗಾವಿ: ಕರ್ನಾಟಕ ರಾಜ್ಯ ಸರ್ಕಾರ ಸ್ಥಿರ ಆಸ್ತಿಗಳು ಮಾರ್ಗಸೂಚಿ ಬೆಲೆ ಪರಿಷ್ಕರಣೆ ಅಕ್ಟೋಬರ್ ಒಂದರಿಂದ ಶೆ. 10%ರಿಂದ 30%ವರೆಗೆ ಹೆಚ್ಚಳ ಮಾಡುವುದಾಗಿ ಆದೇಶ ಹೊರಡಿಸಿದೆ. ಅದರ ಅಂಗವಾಗಿ ಬೆಳಗಾವಿ ನೋಂದಣಿ ಮತ್ತು ಮುದ್ರಾಂಕ ಇಲಾಖೆ...

LEAVE A REPLY

Please enter your comment!
Please enter your name here

Latest News

- Advertisement -
- Advertisement -
- Advertisement -
- Advertisement -