spot_img
22.9 C
Belagavi
Sunday, December 4, 2022
spot_img

ಮುಖ್ಯಮಂತ್ರಿಗಳಿಗೆ ಧನ್ಯವಾದ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರ್

ಬೆಳಗಾವಿ : ಗಂಟುರೋಗದಿಂದ ದನಗಳು ಮೃತಪಟ್ಟರೆ ಪಟ್ಟರೆ 20 ಸಾವಿರ ರೂ.ಗಳ ಪರಿಹಾರ ಒದಗಿಸಲಾಗುವುದು ಹಾಗೂ ಗಂಟು ರೋಗಕ್ಕೆ ಚಿಕಿತ್ಸಾ ವೆಚ್ಚವನ್ನು ಸರ್ಕಾರವೇ ಭರಿಸಲಿದೆ ಎಂದು ಘೋಷಿಸಿರುವುದಕ್ಕೆ ಶಾಸಕಿ ಲಕ್ಷ್ಮೀ ಹೆಬ್ಬಾಳಕರ್ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಧನ್ಯವಾದಗಳನ್ನು ಸಲ್ಲಿಸಿದ್ದಾರೆ.

ಜಾನುವಾರುಗಳ ಗಂಟುರೋಗ ಸಮಸ್ಯೆ ಕುರಿತು ಶಾಸಕಿ ಲಕ್ಷ್ಮೀ ಹೆಬ್ಬಾಳಕರ್ ಬುಧವಾರ ಸರಕಾರದ ಗಮನ ಸೆಳೆದಿದ್ದರು. ಸಮಸ್ಯೆ ತೀರಾ ಗಂಭೀರವಾಗಿದ್ದು, ರಾಜ್ಯ ಸರಕಾರ ಮಧ್ಯ ಪ್ರವೇಶಿಸಬೇಕು. ಜಾನುವಾರುಗಳು ಮೃತಪಟ್ಟರೆ ಪರಿಹಾರ ಒದಗಿಸಬೇಕು ಎಂದು ಆಗ್ರಹಿಸಿದ್ದರು.

ಸಮಸ್ಯೆ ಗಂಭೀರತೆಯನ್ನು ಅವರು ತೆರೆದಿಟ್ಟಿದ್ದರು.
ಇದಕ್ಕೆ ತಕ್ಷಣ ಸ್ಪಂದಿಸಿ ಪರಿಹಾರ ಘೋಷಿಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಲಕ್ಷ್ಮೀ ಹೆಬ್ಬಾಳಕರ್ ರೈತರ ಪರವಾಗಿ ಧನ್ಯವಾದ ಸಲ್ಲಿಸಿದ್ದಾರೆ. ಚಿಕಿತ್ಸಾ ವೆಚ್ಚವನ್ನು ಸಂಪೂರ್ಣ ಭರಿಸುವ ಮತ್ತು ಇದಕ್ಕಾಗಿ ವಿಶೇಷ ತಂಡವನ್ನು ಕಳಿಸುವ ಭರವಸೆ ನೀಡಿದ್ದಕ್ಕಾಗಿ ಸಹ ಮುಖ್ಯಮಂತ್ರಿಗಳಿಗೆ ಅವರು ಕೃತಜ್ಞತೆ ಸಲ್ಲಿಸಿದ್ದಾರೆ

Related News

50 ಲಕ್ಷ ರೂ,ಗಳ ವೆಚ್ಚದಲ್ಲಿ ಮಂಡೋಳಿ ಗ್ರಾಮದ ರಸ್ತೆಗಳ ಅಭಿವೃದ್ಧಿ

ಬೆಳಗಾವಿ: ಬೆಳಗಾವಿ ಗ್ರಾಮೀಣ ಕ್ಷೇತ್ರದ ಮಂಡೋಳಿ ಗ್ರಾಮದ ರಸ್ತೆಗಳನ್ನು ಅಭಿವೃದ್ಧಿ ಪಡಿಸುವ ನಿಟ್ಟಿನಲ್ಲಿ ಜಿಲ್ಲಾ ಗಣಿ ನಿಧಿಯ ವತಿಯಿಂದ ಶಾಸಕಿ ಲಕ್ಷ್ಮೀ ಹೆಬ್ಬಾಳಕರ್ ಅವರು 50 ಲಕ್ಷ ರೂ,ಗಳನ್ನು ಮಂಜೂರು ಮಾಡಿಸಿದ್ದು, ಶನಿವಾರ...

ಬೆಳಗಾವಿ ಗ್ರಾಮೀಣ ಕ್ಷೇತ್ರದಲ್ಲಿ ಮುಂದುವರಿದ ಅಭಿವೃದ್ಧಿ ಯೋಜನೆಗಳ ಸರಣಿ

ಬೆಳಗಾವಿ : ಬೆಳಗಾವಿ ಗ್ರಾಮೀಣ ಕ್ಷೇತ್ರದ ಕಲ್ಲೆಹೋಳ ಗ್ರಾಮದ ರಸ್ತೆಗಳ ಅಭಿವೃದ್ಧಿಗಾಗಿ ಪಂಚಾಯತ ರಾಜ್ ಇಂಜಿನಿಯರಿಂಗ್ ಇಲಾಖೆಯ ವತಿಯಿಂದ 60 ಲಕ್ಷ ರೂ,ಗಳನ್ನು ಬಿಡುಗಡೆ ಮಾಡಿಸಿರುವ ಶಾಸಕಿ ಲಕ್ಷ್ಮೀ ಹೆಬ್ಬಾಳಕರ್, ಶನಿವಾರ ಕಾಂಕ್ರೀಟ್...

LEAVE A REPLY

Please enter your comment!
Please enter your name here

Latest News

- Advertisement -
- Advertisement -
- Advertisement -
- Advertisement -