ಬೆಂಗಳೂರು: ರಾಜಭವನದ ಗಾಜಿನಮನೆಯಲ್ಲಿ ನಡೆದ ಪ್ರಮಾಣವಚನ ಸಮಾರಂಭದಲ್ಲಿ ಸಚಿವರಾಗಿ ಲಕ್ಷ್ಮೀ ಹೆಬ್ಬಾಳ್ಕರ್ ಅವರು ಜಗಜ್ಯೋತಿ ಬಸವೇಶ್ವರ, ಛತ್ರಪತಿ ಶಿವಾಜಿ ಹಾಗೂ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಿದರು. ರಾಜ್ಯಪಾಲ ಥಾವರ್ಚಂದ್ ಗೆಹ್ಲೋಟ್ ಅವರು ಪ್ರತಿಜ್ಞಾವಿಧಿ ಬೋಧಿಸಿದರು.