ಚಿಕ್ಕಬಳ್ಳಾಪುರ ಜಿಲ್ಲೆಯ ಗುಡಿಬಂಡೆ ತಾಲ್ಲೂಕು ಕಚೇರಿಯಲ್ಲಿ ಇಂದು ಮಾನ್ಯ ಕಂದಾಯ ಸಚಿವರಾದ ಕೃಷ್ಣ ಬೈರೇಗೌಡ ಅವರು ರಾಜ್ಯದ್ಯಂತ ಭೂ- ಸುರಕ್ಷಾ ಯೋಜನೆಯಡಿಯಲ್ಲಿ ಕಂದಾಯ ದಾಖಲೆಗಳನ್ನು ತಾಲ್ಲೂಕು ಕಚೇರಿಗಳಲ್ಲಿ ಗಣಕೀಕರಣಗೊಳಿಸುವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.
ಈ ಸಂದರ್ಭದಲ್ಲಿ ಉನ್ನತ ಶಿಕ್ಷಣ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಎಂ.ಸಿ. ಸುಧಾಕರ್, ಬಾಗೇಪಲ್ಲಿ ಶಾಸಕರಾದ ಎಸ್.ಎನ್.ಸುಬ್ಬಾರೆಡ್ಡಿ, ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕುಶಲ್ ಚೌಕ್ಸೆ ಸೇರಿದಂತೆ ಕಂದಾಯ ಇಲಾಖೆಯ ಅಧಿಕಾರಿಗಳು, ಸಿಬ್ಬಂದಿ ಮುಂತಾದವರು ಉಪಸ್ಥಿತರಿದ್ದರು.