spot_img
spot_img
spot_img
18.7 C
Belagavi
Monday, September 26, 2022
spot_img

ಅಭಿವೃದ್ಧಿ ಯೋಜನೆ ತರಲು ಜನರ ಸಹಕಾರವೇ ಕಾರಣ : ಶಾಸಕಿ ಹೆಬ್ಬಾಳಕರ್

spot_img
spot_img

For Breaking News Download App

ಬೆಳಗಾವಿ :  ಬೆಳಗಾವಿ ಗ್ರಾಮೀಣ ಕ್ಷೇತ್ರದಲ್ಲಿ ಶನಿವಾರ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕಿ ಲಕ್ಷ್ಮಿ ಹೆಬ್ಬಾಳಕರ್ ಚಾಲನೆ ನೀಡಿದರು.ಈ ವೇಳೆ ಮಾತನಾಡಿದ ಅವರು, ಜನರ ಅವಶ್ಯಕತೆ ಮತ್ತು ಕ್ಷೇತ್ರದ ಭವಿಷ್ಯವನ್ನು ದೃಷ್ಟಿಯಲ್ಲಿಟ್ಟುಕೊಂಡು ಕೆಲಸ ಮಾಡುತ್ತಿದ್ದೇನೆ. ಜನರ ಅಭಿಪ್ರಾಯಕ್ಕೆ ಮನ್ನಣೆ ನೀಡದೆ ಯಾವುದೇ ಕೆಲಸವನ್ನು ಕೈಗೆತ್ತಿಕೊಳ್ಳುವುದಿಲ್ಲ. ಇಡೀ ಕ್ಷೇತ್ರದಲ್ಲಿ ಆಗಬೇಕಿರುವ ಬಾಕಿ ಕೆಲಸಗಳ ಕುರಿತು ಮುಂದಿನ ದಿನಗಳಲ್ಲಿ ಯೋಜನೆ ರೂಪಿಸಿ ಸ್ಪಷ್ಟವಾದ ಪ್ರಸ್ತಾವನೆ ಸಿದ್ಧಪಡಿಸಲಾಗುವುದು. ತನ್ಮೂಲಕ ಕ್ಷೇತ್ರಕ್ಕೆ ಹಲವು ಮಾದರಿ ಕೆಲಸಗಳನ್ನು ತರುವ ಯೋಚನೆ ಇದೆ ಎಂದು ತಿಳಿಸಿದರು.

ಕ್ಷೇತ್ರದ ಜನರು ಸದಾ ನನ್ನೊಂದಿಗಿದ್ದು ಸಲಹೆ, ಸೂಚನೆ ನೀಡುತ್ತ ಬಂದಿದ್ದಾರೆ. ಹಾಗಾಗಿ ಯಾವುದೇ ಸಮಸ್ಯೆ ಇಲ್ಲದೆ, ಇಡೀ ರಾಜ್ಯದ ಗಮನ ಸೆಳೆಯುವ ರೀತಿಯಲ್ಲಿ ಕೆಲಸ ನಿರ್ವಹಿಸಲು ನನ್ನಿಂದ ಸಾಧ್ಯವಾಗುತ್ತಿದೆ. ಮೊದಲ ಬಾರಿ ಶಾಸಕಿಯಾದರೂ ಇಷ್ಟೊಂದು ದೊಡ್ಡ ಪ್ರಮಾಣದಲ್ಲಿ ಅಭಿವೃದ್ಧಿ ಮಾಡುವುದಕ್ಕೆ ಇಲ್ಲಿಯ ಜನರ ಸಹಕಾರವೇ ಕಾರಣ ಎಂದು ಲಕ್ಷ್ಮಿ ಹೆಬ್ಬಾಳಕರ್ ತಿಳಿಸಿದರು.

ಬೆಳವಟ್ಟಿ ಗ್ರಾಮದ ಸರ್ಕಾರಿ ಮರಾಠಿ ಪ್ರಾಥಮಿಕ ಶಾಲೆಯಲ್ಲಿ ನೂತನವಾಗಿ ನಿರ್ಮಾಣಗೊಂಡ ಹೆಚ್ಚುವರಿ ಕೊಠಡಿಗಳನ್ನು ಹೆಬ್ಬಾಳಕರ್ ಉದ್ಘಾಟಿಸಿದರು. ಈ ಸಮಯದಲ್ಲಿ ಗ್ರಾಮದ ಹಿರಿಯರು, ಎಸ್ ಡಿ ಎಮ್ ಸಿ ಯ ಪದಾಧಿಕಾರಿಗಳು, ಗುಂಡು ಸುತಾರ, ನಾರಾಯಣ ನಾಲವಡೆ, ಈರಪ್ಪ, ಚಟ್ನಿಕರ, ಸಾತೇರಿ ಪಾಟೀಲ, ಮಾರುತಿ ವಿಠ್ಠಲ ಪಾಟೀಲ, ಮೋನಪ್ಪ ಸುತಾರ, ಬಿ ಬಿ ದೇಸಾಯಿ, ಕ್ಷೇತ್ರ ಶಿಕ್ಷಣಾಧಿಕಾರಿ ಆರ್ ಪಿ ಜುಟ್ನವರ, ಪಿತಾಂಬರ ಪಾಟೀಲ, ಡಿ ಎನ್ ದೇಸಾಯಿ, ಮನೋಹರ ಬೆಳಗಾಂವ್ಕರ್, ಗೌಡು ಪಾಟೀಲ, ಯಲ್ಲಪ್ಪ ನಾಯ್ಕ, ಪಿಡಿಓ ಅಧಿಕಾರಿ, ಮಹಾದೇವಿ ಮೇದಾರ, ನಿಶಾ ಚಂದಿಲಕರ್, ಬಾಬುರಾವ ಪಾಟೀಲ, ಮಧುಕರ್ ನಾಲವಡೆ, ಅರ್ಜುನ, ದೀಪಾ ನಾಲವಡೆ, ಸಾರಿಕಾ ಹೊಸೂರಕರ್, ಲಕ್ಷ್ಮೀ ಪಾಟೀಲ, ಶಾಲಾ ಸಿಬ್ಬಂದಿ ವರ್ಗದವರು ಹಾಗೂ ಪಕ್ಷದ ಕಾರ್ಯಕರ್ತರು ಉಪಸ್ಥಿತರಿದ್ದರು.

ಮಾವಿನಕಟ್ಟಿ ಗ್ರಾಮದ ಶ್ರೀ ಪಾಂಡುರಂಗ ರುಕ್ಮಾಯಿ ಮಂದಿರದ ಸ್ಲ್ಯಾಬ್ ಪೂಜೆಯನ್ನು ಲಕ್ಷ್ಮಿ ಹೆಬ್ಬಾಳಕರ್ ನೆರವೇರಿಸಿದರು. ಈ ಸಮಯದಲ್ಲಿ ಗ್ರಾಮದ ಹಿರಿಯರು, ಸ್ಥಳೀಯ ಜನಪ್ರತಿನಿಧಿಗಳು, ಗ್ರಾಮದ ಜನರು, ಮಂದಿರದ ಭಕ್ತಾಧಿಗಳು, ಟ್ರಸ್ಟ್ ಕಮೀಟಿಯವರು ಉಪಸ್ಥಿತರಿದ್ದರು.


ಕ್ಷೇತ್ರದ ಹೊನ್ನಿಹಾಳ ಗ್ರಾಮದ ಹನುಮಾನ ನಗರದ ರಸ್ತೆಗಳನ್ನು ಅಭಿವೃದ್ಧಿ ಪಡಿಸುವ ದೃಷ್ಟಿಯಿಂದ ಪಂಚಾಯತ ರಾಜ್ ಇಂಜಿನಿಯರಿಂಗ್ ಇಲಾಖೆಯ ವತಿಯಿಂದ 25 ಲಕ್ಷ ರೂ,ಗಳನ್ನು ಬಿಡುಗಡೆ ಮಾಡಿಸಿ, ಕಾಂಕ್ರೀಟ್ ರಸ್ತೆಗಳ ನಿರ್ಮಾಣದ ಕಾಮಗಾರಿಗಳಿಗೆ ಶಾಸಕಿ ಲಕ್ಷ್ಮಿ ಹೆಬ್ಬಾಳಕರ್ ಭೂಮಿ ಪೂಜೆಯನ್ನು ನೆರವೇರಿಸಿದರು.

ಈ ಸಂದರ್ಭದಲ್ಲಿ ಗ್ರಾಮದ ಹಿರಿಯರು, ಹನುಮಾನ ನಗರದ ನಿವಾಸಿಗಳು, ಮಾಜಿ ಸೈನಿಕರು,ಸ್ಥಳೀಯ ಜನಪ್ರತಿನಿಧಿಗಳು ಹಾಗೂ ಪಕ್ಷದ ಕಾರ್ಯಕರ್ತರು ಉಪಸ್ಥಿತರಿದ್ದರು.

For Breaking News Download App

Related News

ನನಗೆ ಭಾಷೆ – ಜಾತಿ ಇಲ್ಲ, ಜನರ ಪ್ರೀತಿ ಒಂದೇ : ಶಾಸಕಿ ಅಂಜಲಿ ನಿಂಬಾಳ್ಕರ್ 

ವರದಿ : ರತ್ನಾಕರ ಗೌಂಡಿ  ಬೆಳಗಾವಿ : ಖಾನಾಪುರ್ ಪಟ್ಟಣದಲ್ಲಿ ಅಂಜಲಿ ನಿಂಬಾಳ್ಕರ್ ನೇತೃತ್ವದಲ್ಲಿ ಬಿಜೆಪಿ ಮತ್ತು ಜೆಡಿಎಸ್ ಹಾಗೂ ಮಹಾರಾಷ್ಟ್ರ ಏಕೀಕರಣ ಸಮಿತಿಯ ನೂರಾರು ಕಾರ್ಯಕರ್ತರು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು. ಈ ಸಂದರ್ಭದಲ್ಲಿ 60...

ಬೆಳಗಾವಿ : ಭೀಕರ ಅಪಘಾತದಲ್ಲಿ ಎಎಸ್​ಐ ಪತ್ನಿ ಸೇರಿದಂತೆ ನಾಲ್ವರು ಸಾವು 

ಬೆಳಗಾವಿ: ಕಾರು ಮತ್ತು ಬೈಕ್​ಗೆ, ಲಾರಿ ಡಿಕ್ಕಿ ಹೊಡೆದ ಪರಿಣಾಮ ಎಎಸ್​ಐ ಪತ್ನಿ ಸೇರಿದಂತೆ ನಾಲ್ವರು ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಸವದತ್ತಿ ತಾಲೂಕಿನ ಬೂದಿಗೊಪ್ಪ ಕ್ರಾಸ್​ನಲ್ಲಿ ನಡೆದಿದೆ. ರುಕ್ಮಿಣಿ ಹಳಕಿ(48) ಅಕ್ಷತಾ ಹಳಕಿ(22), ಕಾರು...

LEAVE A REPLY

Please enter your comment!
Please enter your name here

Latest News

- Advertisement -
- Advertisement -
- Advertisement -
- Advertisement -