spot_img
spot_img
spot_img
18 C
Belagavi
Thursday, September 29, 2022
spot_img

ಚಿರತೆ ಸೆರೆ ಕಾರ್ಯಚರಣೆ ಚುರುಕು : ಅರಣ್ಯಾಧಿಕಾರಿಗಳು ನಿರಂತರ ಶ್ರಮ 

spot_img

ಬೆಳಗಾವಿ : ಬೆಳಗಾವಿ ನಗರ ಪ್ರದೇಶದ ಗಲ್ಫ್ ಮೈದಾನ ಮತ್ತು ಸಿಪಿಎಡ್ ಮೈದಾನದ. ಹತ್ತಿರ ಪ್ರದೇಶಗಳಲ್ಲಿ 18 ದಿನಗಳ ದಿಂದ ಜನರಲ್ಲಿ ಆತಂಕ ಮೂಡಿಸಿರುವ ಚಿರತೆ ಮತ್ತೆ ಇಂದು ಪ್ರತ್ಯಕ್ಷವಾಗಿತ್ತು.

ಹೀಗಾಗಿ ಚಿರತೆ ಸೆರೆ ಹಿಡಿಯಲು ಅರಣ್ಯ ಇಲಾಖೆ ಅಧಿಕಾರಿಗಳು ಹಾಗೂ ಪೊಲೀಸ್ ಇಲಾಖೆಯ ಅಧಿಕಾರಿಗಳು ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.

ಈ ಸಂದರ್ಭದಲ್ಲಿ ಮಾಹಿತಿ ತಿಳಿಯುತ್ತಲೇ ಉತ್ತರ ಕ್ಷೇತ್ರದ ಶಾಸಕರಾದ ಅನಿಲ್ ಬೆನಕೆ ಅವರು ಸ್ಥಳಕ್ಕೆ ಆಗಮಿಸಿ, ಚಿರತೆಯನ್ನು ಹಿಡಿಯುವ ಕಾರ್ಯಾಚರಣೆಯನ್ನು ಖುದ್ದಾಗಿ ಪರಿಶೀಲಿಸಿ ಅರಣ್ಯ ಅಧಿಕಾರಿಗಳ ಮತ್ತು ಪೊಲೀಸ್ ಇಲಾಖೆ ಅಧಿಕಾರಿಗಳ ಜೊತೆ ಸಮಾಲೋಚನೆ ನಡೆಸಿದರು.

ಈ ಕುರಿತು ಪಂಚಾಯತ್ ಸ್ವರಾಜ್ಯ ಸಮಾಚಾರ ಸುದ್ದಿ ವಾಹಿನಿ ಜೊತೆ ಮಾತನಾಡಿದ ಅವರು, ನಾವು ಈಗಾಗಲೇ ಎಲ್ಲಾ ಕ್ರಮಗಳನ್ನು ಕೈಗೊಂಡಿದ್ದೇವೆ ಮತ್ತು ಚಿರತೆ ಹಿಡಿಯುವ ತಜ್ಞರ ಜೊತೆ ಸಮಾಲೋಚನೆ ಮಾಡುತ್ತಾ ಇದ್ದೇವೆ.

18 ದಿನಗಳಿಂದ ಬೆಳಗಾವಿ ಜನತೆಗೆ ಆತಂಕ ಸೃಷ್ಟಿಸಿದ ಚಿರಿ ಅತಿ ಶೀಘ್ರದಲ್ಲಿ ನಾವು ಹಿಡಿಯುತ್ತೇವೆ ಎಂದು ತಮ್ಮ ವಿಶ್ವಾಸ ವ್ಯಕ್ತಪಡಿಸಿದರು.

ಅರಣ್ಯ ಇಲಾಖೆಯ ಹಿರಿಯ ಅಧಿಕಾರಿಗಳು ಸ್ಥಳದಲ್ಲಿ ಉಪಸ್ಥಿತರಿದ್ದು, ಚಿರತೆಯ ಚಲನವಲನಗಳ ಮೇಲೆ ನಿಗಾ ಇಟ್ಟಿದ್ದೇವೆ ಎಂದು ಬೆಳಗಾವಿ ಮುಖ್ಯ ಸಂರಕ್ಷಣಾಧಿಕಾರಿಗಳು ಮಂಜುನಾಥ್ ಚವ್ಹಾಣ್ ಪಂಚಾಯತ್ ಸ್ವರಾಜ್ ಸಮಾಚಾರ್ ಸಿದ್ಧಿವಹಿಣಿಗೆ ಮಾಹಿತಿ ನೀಡಿದರು

ಈ ಸಂದರ್ಭದಲ್ಲಿ ಗಲ್ಫ್ ಮತ್ತು ಸಿಪಿಎಡ್ ಮೈದಾನ ಪ್ರದೇಶವನ್ನು ಜನ ಸಂಚಾರಕ್ಕೆ ನಿರ್ಬಂಧಿಸಲಾಗಿದೆ. ಹೆಚ್ಚಿನ ಸಂಖ್ಯೆಯಲ್ಲಿ ಅರಣ್ಯ ಮತ್ತು ಪೊಲೀಸ್ ಸಿಬ್ಬಂದಿಯನ್ನು ಚಿರತೆ ಕಾರ್ಯಾಚರಣೆಗೆ ನಿಯೋಜಿಸಲಾಗಿದೆ ಎಂದರು.

ಆದರೆ ಈ ಕಾರ್ಯಚರಣೆ ಯಶಸ್ವಿಯಾಗಲಿಲ್ಲ ಚಿರತೆ ಎಲ್ಲರ ಕಣ್ಣೆದುರೇ ಪಾರಾಗಿತು. ಆದರೆ ಅರಣ್ಯಾಧಿಕಾರಿಗಳು ನಿರಂತರವಾಗಿ ಚಿರತೆ ಸೆರೆಗೆ ಶ್ರಮ ವಹಿಸುತ್ತಿದ್ದಾರೆ.ಈ ವೇಳೆ ಉಪಅರಣ್ಯ ಸಂರಕ್ಷಣಾಧಿಕಾರಿಗಳು ಸಂರಕ್ಷಣಾಧಿಕಾರಿಗಳು ಶಂಕರ್ ಕಲ್ಲೋಳ್ಕರ್ ಹಾಗೂ ವಲಯ ಅರಣ್ಯ ಅಧಿಕಾರಿಗಳು, ಉಪ ವಲಯ ಅರಣ್ಯ ಅಧಿಕಾರಿಗಳು, ಅರಣ್ಯ ರಕ್ಷಕರು ,ಅರಣ್ಯ ವೀಕ್ಷಕರು , ಮತ್ತು ಇಲಾಖೆ ಸಿಬ್ಬಂದಿ ವರ್ಗ ಭಾಗವಹಿಸಿದ್ದರು.

ವರದಿ : ರತ್ನಾಕರ ಗೌಂಡಿ, ಬೆಳಗಾವಿ

spot_img

Related News

ಡಿ.ಕೆ.ಶಿವಕುಮಾರ್ ಮನೆ, ಕಚೇರಿ ಮೇಲೆ ಸಿಬಿಐ ದಾಳಿ

ಬೆಂಗಳೂರು: ಇಡಿ ಅಧಿಕಾರಿಗಳ ದಾಳಿಯ ಬಳಿಕ ವಿಚಾರಣೆ ಎದುರಿಸುತ್ತಿರುವ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ನಿವಾಸದ ಮೇಲೆ ಸಿಬಿಐ ಅಧಿಕಾರಿಗಳು ಇಂದು ದಾಳಿ ನಡೆಸಿದ್ದಾರೆ. ಕೇಂದ್ರ ತನಿಖಾ ದಳದ ಅಧಿಕಾರಿಗಳು ಡಿ ಕೆ ಶಿವಕುಮಾರ್...

ಮೂರು ಪಡೆಗಳ ಮುಖ್ಯಸ್ಥರಾಗಿ ಅನಿಲ್ ಚವ್ಹಾಣ್ ನೇಮಕ

ನವದೆಹಲಿ: ನಿವೃತ್ತ ಲೆಫ್ಟಿನೆಂಟ್ ಜನರಲ್ ಅನಿಲ್ ಚವ್ಹಾಣ್ ಅವರನ್ನು ನೂತನ ಸಿಡಿಎಸ್ ಆಗಿ ನೇಮಕ ಮಾಡಲಾಗಿದೆ. ಎರಡನೇ ಸಿಡಿಎಸ್ ಅನಿಲ್ ಚವ್ಹಾಣ್ ಅವರನ್ನು ಕೇಂದ್ರ ಸರ್ಕಾರ ನೇಮಕ ಮಾಡಿದೆ. ಹೆಲಿಕಾಪ್ಟರ್ ದುರಂತದಲ್ಲಿ ಬಿಪಿನ್ ರಾವತ್...

LEAVE A REPLY

Please enter your comment!
Please enter your name here

Latest News

- Advertisement -
- Advertisement -
- Advertisement -
- Advertisement -