Ad imageAd image

ನಿಮ್ಮ ಮತದಾನದ ನಿಲುವಿನಿಂದ ವಯನಾಡಿನ ಭವಿಷ್ಯಕ್ಕೆ `ಕೈ’ ಜೋಡಿಸೋಣ – ಪ್ರಿಯಾಂಕಾ ಗಾಂಧಿ

ratnakar
ನಿಮ್ಮ ಮತದಾನದ ನಿಲುವಿನಿಂದ ವಯನಾಡಿನ ಭವಿಷ್ಯಕ್ಕೆ `ಕೈ’ ಜೋಡಿಸೋಣ – ಪ್ರಿಯಾಂಕಾ ಗಾಂಧಿ
WhatsApp Group Join Now
Telegram Group Join Now

ವಯನಾಡು: ಕಾಂಗ್ರೆಸ್ ಅಭ್ಯರ್ಥಿ ಪ್ರಿಯಾಂಕಾ ಗಾಂಧಿ (Priyanka Gandhi) ಇಂದು ನಡೆಯುತ್ತಿರುವ ಮತದಾನದಲ್ಲಿ ಮತದಾರರಿಗೆ ಹಕ್ಕನ್ನು ಚಲಾಯಿಸುವಂತೆ ಕರೆನೀಡಿದ್ದಾರೆ.

ಇಂದು ದೇಶಾದ್ಯಂತ 11 ರಾಜ್ಯಗಳ 32 ವಿಧಾನಸಭಾ ಕ್ಷೇತ್ರಗಳಿಗೆ ಹಾಗೂ ಕೇರಳದ (Kerala) ವಯನಾಡ್ ಲೋಕಸಭಾ (Wayanad) ಕ್ಷೇತ್ರಕ್ಕೆ ಉಪಚುನಾವಣೆ ನಡೆಯುತ್ತಿದೆ. ಚುನಾವಣೆಯ ಹಿನ್ನೆಲೆಯಲ್ಲಿ ಮತ ಕೇಂದ್ರಕ್ಕೆ ಪ್ರಿಯಾಂಕಾ ಗಾಂಧಿ ಭೇಟಿ ನೀಡಿದರು.

ಈ ಕುರಿತು ತಮ್ಮ ಎಕ್ಸ್ ಖಾತೆಯಲ್ಲಿ ಪೋಸ್ಟ್ ಹಂಚಿಕೊಂಡ ಪ್ರಿಯಾಂಕಾ ಗಾಂಧಿ ಪ್ರೀತಿಯ ಸಹೋದರ, ಸಹೋದರಿಯರೇ ಎಲ್ಲರೂ ಮತ ಚಲಾಯಿಸಿ, ಇಂದು ಪ್ರಜಾಪ್ರಭುತ್ವದ ತೀರ್ಪಿನ ದಿನ. ಮತಗಟ್ಟೆಗೆ ಭೇಟಿ ನೀಡಿ, ನಿಮ್ಮ ಅಮೂಲ್ಯವಾದ ಹಕ್ಕನ್ನು ಚಲಾಯಿಸಿ. ನಿಮ್ಮ ಮತದಾನದ ನಿಲುವಿನಿಂದ ವಯನಾಡಿನ ಭವಿಷ್ಯಕ್ಕೆ ಕೈ ಜೋಡಿಸೋಣ. ನಿಮ್ಮ ಪ್ರೀತಿ ಮತ್ತು ಬೆಂಬಲಕ್ಕೆ ಹೃದಯಪೂರ್ವಕ ಧನ್ಯವಾದಗಳು ಎಂದು ಬರೆದುಕೊಂಡಿದ್ದಾರೆ.

ವಯನಾಡು ಲೋಕಸಭಾ ಕ್ಷೇತ್ರದ ಉಪಚುನಾವಣೆಗೆ ಇಂದು ಬೆಳಿಗ್ಗೆ 7 ಗಂಟೆಗೆ ಮತದಾನ ಆರಂಭವಾಗಿದೆ. ರಾಹುಲ್ ಗಾಂಧಿ ವಯನಾಡ್ ಹಾಗೂ ಉತ್ತರ ಪ್ರದೇಶದ ರಾಯ್‌ಬರೇಲಿ ಕ್ಷೇತ್ರದಿಂದ ಸ್ಪರ್ಧಿಸಿದ್ದರು. ಎರಡು ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದ ಬಳಿಕ ಉತ್ತರ ಪ್ರದೇಶದ ರಾಯ್‌ಬರೇಲಿ ಪ್ರದೇಶ ಉಳಿಸಿಕೊಂಡು ವಯನಾಡ್ ಕ್ಷೇತ್ರಕ್ಕೆ ರಾಜೀನಾಮೆ ನೀಡಿದ್ದರು. ಈ ಕಾರಣದಿಂದ ತೆರವುಗೊಂಡ ವಯನಾಡ್ ಕ್ಷೇತ್ರಕ್ಕೆ ಇಂದು ಉಪಚುನಾವಣೆ ನಡೆಯುತ್ತಿದೆ.

ಈ ಉಪುನಾವಣೆಯಲ್ಲಿ ಒಟ್ಟು 16 ಅಭ್ಯರ್ಥಿಗಳು ಕಣದಲ್ಲಿದ್ದಾರೆ. ಯುಡಿಎಫ್ ಮೈತ್ರಿಕೂಟದ ಅಭ್ಯರ್ಥಿಯಾಗಿ ಪ್ರಿಯಾಂಕಾ ಗಾಂಧಿ, ಎಲ್‌ಡಿಎಫ್‌ನಿಂದ ಸತ್ಯನ್ ಮೋಕರಿ ಕಣದಲ್ಲಿದ್ದಾರೆ. ಎನ್‌ಡಿಎ ಮೈತ್ರಿಕೂಡದ ಅಭ್ಯರ್ಥಿಯಾಗಿ ನವ್ಯಾ ಹರಿದಾಸ್ ಕಣಕ್ಕಿಳಿದಿದ್ದಾರೆ.

WhatsApp Group Join Now
Telegram Group Join Now
Share This Article