spot_img
spot_img
spot_img
spot_img
spot_img
30.1 C
Belagavi
Sunday, December 3, 2023
spot_img

ಬಸವಣ್ಣನವರ ಸಮಾನತೆಯ ಕನಸು ನನಸು ಮಾಡೋಣ – ಸಚಿವೆ ಲಕ್ಷ್ಮೀ ಹೆಬ್ಬಾಳಕರ್

ಬೆಳಗಾವಿ: ವಿಶ್ವಗುರು ಬಸವಣ್ಣ 12ನೇ ಶತಮಾನದಲ್ಲಿ ಕಂಡ ಸಮಾನತೆಯ ಕನಸನ್ನು ನನಸು ಮಾಡಲು ನಾವೆಲ್ಲ ಒಟ್ಟಾಗಿ ಕೆಲಸ ಮಾಡಬೇಕಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ತಿಳಿಸಿದರು.

ಇಲ್ಲಿಯ ಬಾಳೇಕುಂದ್ರಿ ಕೆ ಎಚ್ ಗ್ರಾಮದಲ್ಲಿ ಬಸವ ಮೂರ್ತಿಯ ಪ್ರತಿಷ್ಟಾಪನೆ ಹಾಗೂ ವಿಶ್ವಗುರು ಬಸವ ಮಂಟಪದ ಉದ್ಘಾಟನೆಯಯನ್ನು ಭಾನುವಾರ ನೆರವೇರಿಸಿ ಅವರು ನೆರವೇರಿಸಿದರು.

ಜಾತೀಯತೆಯನ್ನು ಹೋಗಲಾಡಿಸಿ, ಮಹಿಳಾ ಸಮಾನತೆ ಸಾಧಿಸುವ ಮೂಲಕ ಸಮಾಜದಲ್ಲಿ ಮೇಲು ಕೀಳೆಂಬ ಭಾವವನ್ನು ಹೋಗಾಲಾಡಿಸಬೇಕೆಂದು ಬಸವಣ್ಣನವರು ಕರೆ ನೀಡಿದ್ದರು.

ಆ ದಿಸೆಯಲ್ಲಿ ಸಾಕಷ್ಟು ಕೆಲಸಗಳನ್ನೂ ಮಾಡಿದ್ದರು. ಆದರೆ ಇಂದಿಗೂ ಅವರ ಕನಸನ್ನೂ ನನಸಾಗಿಸಲು ನಮ್ಮಿಂದ ಸಾಧ್ಯವಾಗಿಲ್ಲ. ಈಗ ಲೋಕಸಭೆಯಲ್ಲಿ ಮಹಿಳೆಯರಿಗೆ ರಾಜಕೀಯ ಮೀಸಲಾತಿ ನೀಡುವ ಮಸೂದೆ ಅಂಗೀಕಾರವಾಗಿದೆ. ಅದು ಬೇಗ ಜಾರಿಯಾಗಿ ಚುನಾಯಿತ ಪ್ರತಿನಿಧಿಗಳಲ್ಲಿ ಮಹಿಳೆಯರ ಸಂಖ್ಯೆ ಹೆಚ್ಚಾಗಬೇಕು ಎಂದು ಹೆಬ್ಬಾಳಕರ್ ಹೇಳಿದರು.

ಕಾರ್ಯಕ್ರಮದಲ್ಲಿ ಕಿತ್ತೂರಿನ ರಾಜಗುರುಕಲ್ಮಠ ಮಹಾಸಂಸ್ಥಾನದ ‌ ಶ್ರೀ ಮಡಿವಾಳೇಶ್ವರ ಮಹಾಸ್ವಾಮಿಗಳು, ಕುಂಬಳಗೋಡಿನ ಶ್ರೀ ಚನ್ನಬಸವೇಶ್ವರ ಜ್ಞಾನ ಪೀಠದ ಡಾ. ಚನ್ನಬಸವಾನಂದ ಸ್ವಾಮೀಜಿ, ಬೆಳಗಾವಿಯ ಶ್ರೀ ಪ್ರಭುಲಿಂಗ ಸ್ವಾಮೀಜಿ, ಮಲ್ಲಾಪುರ ಗಾಳೇಶ್ವರ ಮಠದ ಶ್ರೀ ಚಿದಾನಂದ ಸ್ವಾಮೀಜಿ, ತಾರೀಹಾಳ ಶ್ರೀ ಅಡವೀಶ್ವರ ‌ಮಹಾಸ್ವಾಮೀಜಿ, ನಮಸಯ್ಯಾ ಹಿರೇಮಠ, ಶಿವಾನಂದ ಜಾಮದಾರ್, ವಿವಿಧ ಸಮಾಜದ ಮುಖಂಡರು, ಗ್ರಾಮದ ಹಿರಿಯರು ಉಪಸ್ಥಿತರಿದ್ದರು.

Related News

ತೆಲಂಗಾಣದಲ್ಲಿ ನಾವೆಲ್ಲರೂ ಒಗ್ಗೂಡಿ ಪಕ್ಷವನ್ನು ಗೆಲ್ಲಿಸಿದ್ದೇವೆ -ಜಮೀರ್ ಅಹ್ಮದ್ ಖಾನ್

ತೆಲಂಗಾಣದಲ್ಲಿ ನಾವೆಲ್ಲರೂ ಒಗ್ಗೂಡಿ ಪಕ್ಷವನ್ನು ಗೆಲ್ಲಿಸಿದ್ದೇವೆ. ತೆಲಂಗಾಣದಲ್ಲಿ ಕಾಂಗ್ರೆಸ್​ಗೆ ಜನರು ಆಶೀರ್ವಾದ ಮಾಡಿದ್ದಾರೆ ಎಂದು ಸಚಿವ ಜಮೀರ್ ಅಹ್ಮದ್ ಖಾನ್ ತಿಳಿಸಿದ್ದಾರೆ. 70ಕ್ಕಿಂತ ಹೆಚ್ಚು ಸ್ಥಾನಗಳನ್ನು ಗೆಲ್ಲುತ್ತೇವೆ. ಸಿದ್ದರಾಮಯ್ಯ, ಡಿಕೆ & ನಾನು ಟೀಂ...

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಮತದಾರರ ತೀರ್ಪನ್ನು ಒಪ್ಪಲೇಬೇಕು -ಎಂ.ಬಿ.ಪಾಟೀಲ್

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಮತದಾರರ ತೀರ್ಪನ್ನು ಒಪ್ಪಲೇಬೇಕು. ಗ್ಯಾರಂಟಿಗೆ ವಿರೋಧ ಮಾಡಿದವರು ಗ್ಯಾರಂಟಿ ಘೋಷಣೆ ಮಾಡಿದರು ಎಂದು ವಿಜಯಪುರದಲ್ಲಿ ಬೃಹತ್ ಕೈಗಾರಿಕೆ ಸಚಿವ ಎಂ.ಬಿ.ಪಾಟೀಲ್ ಹೇಳಿದರು. ಲೋಕಸಭೆ ಚುನಾವಣೆಯಲ್ಲಿ ನಾವು ಗೆಲ್ಲುವ ವಿಶ್ವಾಸ ಇದೆ....

Latest News

- Advertisement -
- Advertisement -
- Advertisement -
- Advertisement -