ಬೆಳಗಾವಿ ಮತ್ತು ಬಾಗಲಕೋಟೆ ಜಿಲ್ಲೆಗಳಲ್ಲಿ ಇಂದು ಲೋಕಾಯುಕ್ತ ಅಧಿಕಾರಿಗಳು ವಿವಿಧ ಇಲಾಖೆಯ ಅಧಿಕಾರಿಗಳ ಮನೆಗಳ ಮೇಲೆ ದಾಳಿ ನಡೆಸಿದ್ದು ದಾಖಲೆಗಳನ್ನು ಪರಿಶೀಲನೆ ಮಾಡುತ್ತಿದ್ದಾರೆ.
ಬೆಳಗಾವಿಯ ರಾಮತೀರ್ಥ ನಗರದಲ್ಲಿರುವ ಹೆಸ್ಕಾಂ ಕಾರ್ಯನಿರ್ವಾಹ ಎಂಜಿನಿಯರ್ ಶೇಖರ್ ಬಹುರೂಪಿ ಮನೆಯ ಮೇಲೆ ದಾಳಿ ನಡೆಸಿರುವ ಲೋಕಾಯುಕ್ತ ಅಧಿಕಾರಿಗಳು ಅಕ್ರಮ ಆಸ್ತಿ ಹೊಂದಿರುವ ದಾಖಲೆಗಳನ್ನು ಪರಿಶೀಲನೆ ನಡೆಸಿದ್ದಾರೆ.
ಬಾಗಲಕೋಟೆಯಲ್ಲಿ ವಿವಿಧೆಡೆ ಲೋಕಾಯುಕ್ತ ಅಧಿಕಾರಿಗಳ ದಾಳಿ ನಡೆದಿದೆ. ಬಾಗಲಕೋಟೆ ಕೃಷಿ ಇಲಾಖೆ ಜಂಟಿ ನಿರ್ದೇಶಕಿ ಚೇತನಾ ಪಾಟೀಲ್ ಅವರ ವಿದ್ಯಾಗಿರಿಯ ಅಕ್ಕಿಮರಡಿ ಲೇಔಟ್ನಲ್ಲಿರುವ ಮನೆ ಮೇಲೆ ಲೋಕಾಯುಕ್ತ ದಾಳಿ ನಡೆದಿದೆ. ಚೇತನಾ ಅವರ ಮನೆಯಲ್ಲಿ ಎರಡು ಸಾಕು ಆಮೆಗಳು ಪತ್ತೆಯಾಗಿದ್ದು ಅಧಿಕಾರಿಗಳಿಗೆ ಅಚ್ಚರಿಯಾಗಿದೆ. ಇದಕ್ಕೆ ಸಂಬಂಧಿಸಿದಂತೆ ಅರಣ್ಯ ಇಲಾಖೆ ಅಧಿಕಾರಿಗಳನ್ನು ಕರಿಸಿ ಪರಿಶೀಲಿಸಲಾಗುತ್ತಿದೆ.
ವಿದ್ಯಾಗಿರಿಯ 18ನೇ ಕ್ರಾಸ್ನಲ್ಲಿರುವ ಬೀಳಗಿ ಸಹಾಯಕ ಕೃಷಿ ನಿರ್ದೇಶಕ ಕೃಷ್ಣಾ ಶಿರೂರು ಮನೆಯಲ್ಲೂ ಪರಿಶೀಲನೆ ನಡೆದಿದೆ.
ಬೆಳಗಾವಿ : 2023ನೇ ಸಾಲಿನ ಗಾಂಧಿ ಗ್ರಾಮ ಪುರಸ್ಕಾರಕ್ಕೆ ಬೆಳಗಾವಿ ಜಿಲ್ಲೆಯ 14 ಗ್ರಾಮ ಪಂಚಾಯತಿಗಳು ಆಯ್ಕೆಯಾಗಿದ್ದು ಜಿಲ್ಲಾ ಪಂಚಾಯತ್ ಕಾರ್ಯಾಲಯ ಈ ಕುರಿತು ಆದೇಶ ನೀಡಿದೆ.
ಖಾನಾಪುರ – ಬೇಕವಾಡ, ಕಿತ್ತೂರು –...
ಬೆಂಗಳೂರು: ಚಂದ್ರಯಾನ-3 ಅಭೂತಪೂರ್ವ ಯಶಸ್ಸಿನ ಬಳಿಕ ಭಾರತದ ಹೆಮ್ಮೆಯ ಬಾಹ್ಯಾಕಾಶ ಸಂಸ್ಥೆ ಇಸ್ರೋ ಇಂದು ಮತ್ತೊಂದು ಸಾಹಸಕ್ಕೆ ಮುಂದಾಗಿದ್ದು 15 ದಿನಗಳ ಹಿಂದೆ ಚಂದ್ರನಲ್ಲಿ ರಾತ್ರಿಯಾದ ಕಾರಣ ನಿದ್ರೆಗೆ ಜಾರಿಸಿದ್ದ ವಿಕ್ರಮ್ ಲ್ಯಾಂಡರ್ ಮತ್ತು...