spot_img
spot_img
spot_img
spot_img
spot_img
spot_img
spot_img
spot_img
spot_img
26.1 C
Belagavi
Friday, September 22, 2023
spot_img

ರಾಜ್ಯದ ವಿವಿದೆಡೆ ಲೋಕಾಯುಕ್ತ ದಾಳಿ

ಬೆಂಗಳೂರು:  ಅತ್ತ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು(ಮೇ 31) ಬೆಳ್ಳಂಬೆಳಗ್ಗೆ ಎನ್​ಐಎ ಅಧಿಕಾರಿಗಳು ದಾಳಿ ಮಾಡಿದ್ದರೆ, ಮತ್ತೊಂದೆಡೆ ರಾಜ್ಯದ ವಿವಿದೆಡೆ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದಾರೆ.

ತುಮಕೂರಿನ ಕೆಐಎಡಿಬಿ ಅಧಿಕಾರಿ ಮನೆ ಮೇಲೆ ದಾಳಿ

ತುಮಕೂರಿನ ಕೆಐಎಡಿಬಿ ಅಧಿಕಾರಿ ನರಸಿಂಹಮೂರ್ತಿ ಮನೆ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದಾರೆ. ನಗರದ ಆರ್.ಟಿ. ನಗರದಲ್ಲಿ ಇರುವ ಮನೆ ಮೇಲೆ ಲೋಕಾಯುಕ್ತ ಡಿಎಸ್ ಪಿಗಳಾದ ಮಂಜುನಾಥ್ ಹಾಗೂ ಹರೀಶ್ ತಂಡ ದಾಳಿ ಮಾಡಿದ್ದು, ದಾಖಲೆಗಳನ್ನು ವಶಪಡಿಸಿಕೊಂಡು ಪರಿಶೀಲನೆ ನಡೆಸುತ್ತಿದೆ.

ಹಾವೇರಿ ಜಿಲ್ಲೆಯಲ್ಲಿ ಲೋಕಾಯುಕ್ತ ದಾಳಿ

ಇನ್ನು ಹಾವೇರಿ ಜಿಲ್ಲೆಯಲ್ಲೂ ಲೋಕಾಯುಕ್ತ ದಾಳಿಯಾಗಿದೆ. ಹಾವೇರಿಯ ನಿರ್ಮಿತಿ ಕೇಂದ್ರದ ಇಂಜಿನಿಯರ್ ವಾಗೀಶ್ ಶೇಟ್ಟರ್ ಮನೆ ಹಾಗೂ ಕಚೇರಿ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದಾರೆ. ರಾಣೆಬೆನ್ನೂರು ನಗರದ ನಿವಾಸ ಹಾಗೂ ಹಾವೇರಿಯ ದೇವಗರಿಯ ಜಿಲ್ಲಾಧಿಕಾರಿ ಕಚೇರಿ ಬಳಿ ಇರುವ ನಿರ್ಮಿತಿ ಕೇಂದ್ರ ಕಚೇರಿ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದು, ದಾಖಲೆಗಳನ್ನು ಪರಿಶೀಲನೆ ನಡೆಸಿದ್ದಾರೆ.

ಬೆಂಗಳೂರಿನ ಎರಡು ಕಡೆ ಲೋಕಾಯುಕ್ತ ದಾಳಿ

ಬೆಂಗಳೂರಿನ ಎರಡು ಕಡೆ ಇಂದು ಬೆಳ್ಳಂಬೆಳಗ್ಗೆ ಲೋಕಾಯುಕ್ತ ಅಧಿಕಾರಿಗಳು ಮಾಡಿದ್ದಾರೆ. ನಗರದ ಬಸವೇಶ್ವರನಗರದಲ್ಲಿರುವ ಬೆಸ್ಕಾ ಟೆಕ್ನಿಕಲ್ ಡೈರೆಕ್ಟರ್ ರಮೇಶ್ ಮನೆ ಮೇಲೆ ದಾಳಿಯಾಗಿದೆ. ಇನ್ನು ಇಂಡಸ್ಟ್ರೀಸ್ ಆಂಡ್ ಬಾಯ್ಲರ್ ಇಲಾಖೆ ಅಧಿಕಾರಿಯೊಬ್ಬರ ಮನೆ ಮೇಲೆ ಲೋಕಾಯುಕ್ತ ದಾಳಿ ಮಾಡಿದ್ದ, ಕಡತಗಳ ಪರಿಶೀಲನೆ ನಡೆಸಿದ್ದಾರೆ.

ಮೈಸೂರಿನಲ್ಲೂ ಲೋಕಾಯುಕ್ತ ಕಾರ್ಯಾಚರಣೆ

ಮೈಸೂರಿನ ನಿವೇದಿತಾ ನಗರ ಸಂಕ್ರಾಂತಿ ವೃತ್ತದ ಬಳಿ ಇರುವ ಮೈಸೂರು ಮಹಾನಗರ ಪಾಲಿಕೆ ಅಧಿಕಾರಿ ಮಹೇಶ್ ಕುಮಾರ್ ನಿವಾಸದ ಮೇಲೆ ದಾಳಿಯಾಗಿದೆ. ತೋಟದ ಮನೆ ಸೇರಿ ಹಲವು ಕಡೆ ಒಟ್ಟು 13 ಅಧಿಕಾರಿಗಳ ತಂಡ ಏಕಕಾಲಕ್ಕೆ ದಾಳಿ ಮಾಡಿ‌ ಕಾರ್ಯಾಚರಣೆ ನಡೆಸಿದೆ.

ಬೀದರ್ ಭೂಸೇನಾ ನಿಗಮದ ಅಧಿಕಾರಿ ಮೇಲೂ ದಾಳಿ

ಬೀದರ್ ಭೂಸೇನಾ ನಿಗಮದ ಅಧಿಕಾರಿ ಮನೆ ಮೇಲೂ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಬೀದರ್ ಹಾಗೂ ಚಿಟಗುಪ್ಪಾ ತಾಲೂಕಿನ ಮುತ್ತಂಗಿ ಗ್ರಾಮದ ಫಾರ್ಮ್ ಹೌಸ್ ಮೇಲೂ ಲೋಕಾಯುಕ್ತ ಡಿವೈಎಸ್ಪಿ ಓಲೆಕಾರ ನೇತೃತ್ವದಲ್ಲಿ ದಾಳಿ ದಾಳಿಯಾಗಿದೆ. ಬೀದರ್ ಹಾಗೂ ಚಿಟಗುಪ್ಪಾ ತಾಲೂಕಿನ ಮುತ್ತಂಗಿ ಗ್ರಾಮದ ಫಾರ್ಮ್ ಹೌಸ್ ನಲ್ಲೂ ಪರಿಶೀಲನೆ ನಡೆಸಿದ್ದಾರೆ

Related News

ಬೆಳಗಾವಿ ಜಿಲ್ಲೆಯಲ್ಲಿ 14 ಗ್ರಾ.ಪಂಗಳು ಗಾಂಧಿ ಗ್ರಾಮ ಪುರಸ್ಕಾರಕ್ಕೆ ಆಯ್ಕೆ

ಬೆಳಗಾವಿ : 2023ನೇ ಸಾಲಿನ ಗಾಂಧಿ ಗ್ರಾಮ ಪುರಸ್ಕಾರಕ್ಕೆ ಬೆಳಗಾವಿ ಜಿಲ್ಲೆಯ 14 ಗ್ರಾಮ ಪಂಚಾಯತಿಗಳು ಆಯ್ಕೆಯಾಗಿದ್ದು ಜಿಲ್ಲಾ ಪಂಚಾಯತ್ ಕಾರ್ಯಾಲಯ ಈ ಕುರಿತು ಆದೇಶ ನೀಡಿದೆ. ಖಾನಾಪುರ – ಬೇಕವಾಡ, ಕಿತ್ತೂರು –...

ಚಂದ್ರಯಾನ-3 ಮೇಲೆ ಇಸ್ರೋ ಕಣ್ಣು ಇಂದು ಎಚ್ಚೆತ್ತುಕ್ಕೊಳ್ಳುತ್ತಾ ಲ್ಯಾಂಡರ್ ಮತ್ತು ರೋವರ್

ಬೆಂಗಳೂರು: ಚಂದ್ರಯಾನ-3 ಅಭೂತಪೂರ್ವ ಯಶಸ್ಸಿನ ಬಳಿಕ ಭಾರತದ ಹೆಮ್ಮೆಯ ಬಾಹ್ಯಾಕಾಶ ಸಂಸ್ಥೆ ಇಸ್ರೋ ಇಂದು ಮತ್ತೊಂದು ಸಾಹಸಕ್ಕೆ ಮುಂದಾಗಿದ್ದು 15 ದಿನಗಳ ಹಿಂದೆ ಚಂದ್ರನಲ್ಲಿ ರಾತ್ರಿಯಾದ ಕಾರಣ ನಿದ್ರೆಗೆ ಜಾರಿಸಿದ್ದ ವಿಕ್ರಮ್ ಲ್ಯಾಂಡರ್ ಮತ್ತು...

LEAVE A REPLY

Please enter your comment!
Please enter your name here

Latest News

- Advertisement -
- Advertisement -
- Advertisement -
- Advertisement -