ಧಾರವಾಡ: ಜಿಲ್ಲೆಯ ನವಲಗುಂದದ ಅಶೋಕ ಲಾಡ್ಜ್ನಲ್ಲಿ ಪ್ರೇಮಿಗಳು ಆತ್ಮಹತ್ಯೆ ಶರಣಾಗಿರುವ ಘಟನೆ ನಡೆದಿದೆ. ಕಳೆದ 3 ದಿನಗಳಿಂದ ನವಲಗುಂದದ ಅಶೋಕ ಲಾಡ್ಜ್ನಲ್ಲಿ ಉಳಿದುಕೊಂಡಿದ್ದ ಜೋಡಿ ನಿನ್ನೆ ಫ್ಯಾನ್ಗೆ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದೆ.
ಕುಮಾರ (22) ಮತ್ತು ದೀಪಾ (18) ಆತ್ಮಹತ್ಯೆ ಮಾಡಿಕೊಂಡ ಪ್ರೇಮಿಗಳು. ಧಾರವಾಡ ತಾಲೂಕಿನ ನೀರಲಕಟ್ಟಿ ಗ್ರಾಮದ ದೀಪಾ ಎತ್ತಿನಗುಡ್ಡ ಹಾಗೂ ನವಲಗುಂದ ತಾಲೂಕಿನ ಬೆಳವಟಗಿ ಗ್ರಾಮದ ಕುಮಾರ ಇಬ್ಬರು ಪ್ರೀತಿಸುತ್ತಿದ್ದರು. ಕಳೆದ ಮೂರು ದಿನಗಳ ಹಿಂದೆ ಈ ಜೋಡಿ ಪರಿಚಯಸ್ಥರೊಬ್ಬರ ಮೂಲಕ ನವಲಗುಂದದ ಅಶೋಕ ಲಾಡ್ಜ್ನಲ್ಲಿ ರೂಮ್ ಪಡೆದಿತ್ತು ಎಂದು ತಿಳಿದುಬಂದಿದೆ.
ಇನ್ನು ಈ ಪ್ರೇಮಿಗಳ ಆತ್ಮಹತ್ಯೆಗೆ ನಿಖರ ತಿಳಿದುಬಂದಿಲ್ಲ. ವಿಷಯ ತಿಳಿದು ಸ್ಥಳಕ್ಕೆ ನವಲಗುಂದ ಠಾಣೆ ಪೊಲೀಸರ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ಕೈಗೊಂಡಿದ್ದಾರೆ.