spot_img
spot_img
spot_img
18 C
Belagavi
Thursday, September 29, 2022
spot_img

 ವಿಷ ಸೇವಿಸಿ ಜಲಾಶಯಕ್ಕೆ ಹಾರಿದ ಪ್ರೇಮಿಗಳು

spot_img

ಕಾರವಾರ: ಪ್ರೇಮಿಗಳಿಬ್ಬರು ವಿಷ ಸೇವಿಸಿ ಮುಂಡಗೋಡದ ಬಾಚಣಕಿ ಜಲಾಶಯಕ್ಕೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದು, ಈ ಪೈಕಿ ಯುವತಿಯ ಮೃತದೇಹ ಪತ್ತೆಯಾಗಿದ್ದು, ಯುವಕನಿಗಾಗಿ ಹುಡುಕಾಟ ಮುಂದುವರೆದಿದೆ.

ಕಲಕೇರಿ ಗ್ರಾಮದ ಯುವತಿ ತನುಜಾ ಪಾಟೀಲ್​​ ಮೃತ ದೇಹ ಪತ್ತೆಯಾಗಿದೆ. ಹನುಮಾಪುರ ಗ್ರಾಮದ ಯುವಕ ಮಹೇಶ ಒಡೋಣೆ ದೇಹಕ್ಕಾಗಿ ಹುಡುಕಾಟ ಮುಂದುವರೆದಿದೆ. ಇಬ್ಬರು ಈ ಹಿಂದೆ ಅಂದಲಗಿ ಪ್ರೌಢಶಾಲೆಯಲ್ಲಿ ಕಲಿಯುತ್ತಿದ್ದಾಗ ಪರಸ್ಪರ ಪ್ರೀತಿಸುತ್ತಿದ್ದರು.

ಪ್ರೌಢಶಾಲೆಯ ವಿದ್ಯಾಭ್ಯಾಸ ಮುಗಿದ ಬಳಿಕ ಕುಟುಂಬದವರಿಗೆ ಇವರಿಬ್ಬರ ಪ್ರೀತಿಯ ವಿಷಯ ತಿಳಿದಿದ್ದರಿಂದಾಗಿ, ಯುವತಿಯನ್ನು ಒಂದು ವರ್ಷ ಶಿರಸಿ ಕಾಲೇಜಿಗೆ ಕಳುಹಿಸಿದ್ದರು.ಒಂದು ವರ್ಷ ಶಿರಸಿ ಕಾಲೇಜಿಗೆ ತೆರಳುತ್ತಿದ್ದ ಯುವತಿ ಬಳಿಕ ಮುಂಡಗೋಡ ಕಾಲೇಜಿಗೆ ಪ್ರವೇಶ ಪಡೆದಿದ್ದಳು.

ಮುಂಡಗೋಡಕ್ಕೆ ಬರುತ್ತಿದ್ದಂತೆ ಇವರಿಬ್ಬರ ನಡುವೆ ಪ್ರೀತಿ ಮುಂದುವರೆದಿತ್ತು. ಈ ವಿಷಯ ವಿದ್ಯಾರ್ಥಿನಿ ಮನೆಯವರಿಗೆ ಗೊತ್ತಾಗಿದ್ದರಿಂದ, ಇವರಿಬ್ಬರ ಪ್ರೀತಿಗೆ ತೀವ್ರ ವಿರೋಧ ವ್ಯಕ್ತವಾಗಿತ್ತು. ಅಷ್ಟೇ ಅಲ್ಲ ಮಗಳಿಗೆ ಹಾಗೂ ಯುವಕನಿಗೆ ಮನೆಯವರು ಬುದ್ಧಿ ಹೇಳಿದ್ದರು ಎನ್ನಲಾಗಿದೆ.

ಇಷ್ಟಾದರೂ ಇವರಿಬ್ಬರ ನಡುವೆ ಪ್ರೀತಿ ಮುಂದುವರೆದಿತ್ತು ಎನ್ನಲಾಗಿದೆ. ಇದರಿಂದ ಹುಡುಗನಿಗೆ ಹುಡಗಿ ಮನೆಯವರು ಎಚ್ಚರಿಕೆ ನೀಡಿದ್ದರಂತೆ.ಇದರಿಂದ ಮನನೊಂದ ಇಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗುತ್ತಿದೆ.

ಈ ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಆಗಮಿಸಿದ ಪಿಎಸ್ಐ ನಿಂಗಪ್ಪ ಜಕ್ಕಣ್ಣವರ್ ಮತ್ತು ಅವರ ತಂಡ ಇಬ್ಬರ ಮೃತದೇಹ ಹುಡುಕಾಟದಲ್ಲಿ ತೊಡಗಿಸಿಕೊಂಡಿತ್ತು.

spot_img

Related News

ಡಿ.ಕೆ.ಶಿವಕುಮಾರ್ ಮನೆ, ಕಚೇರಿ ಮೇಲೆ ಸಿಬಿಐ ದಾಳಿ

ಬೆಂಗಳೂರು: ಇಡಿ ಅಧಿಕಾರಿಗಳ ದಾಳಿಯ ಬಳಿಕ ವಿಚಾರಣೆ ಎದುರಿಸುತ್ತಿರುವ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ನಿವಾಸದ ಮೇಲೆ ಸಿಬಿಐ ಅಧಿಕಾರಿಗಳು ಇಂದು ದಾಳಿ ನಡೆಸಿದ್ದಾರೆ. ಕೇಂದ್ರ ತನಿಖಾ ದಳದ ಅಧಿಕಾರಿಗಳು ಡಿ ಕೆ ಶಿವಕುಮಾರ್...

ಮೂರು ಪಡೆಗಳ ಮುಖ್ಯಸ್ಥರಾಗಿ ಅನಿಲ್ ಚವ್ಹಾಣ್ ನೇಮಕ

ನವದೆಹಲಿ: ನಿವೃತ್ತ ಲೆಫ್ಟಿನೆಂಟ್ ಜನರಲ್ ಅನಿಲ್ ಚವ್ಹಾಣ್ ಅವರನ್ನು ನೂತನ ಸಿಡಿಎಸ್ ಆಗಿ ನೇಮಕ ಮಾಡಲಾಗಿದೆ. ಎರಡನೇ ಸಿಡಿಎಸ್ ಅನಿಲ್ ಚವ್ಹಾಣ್ ಅವರನ್ನು ಕೇಂದ್ರ ಸರ್ಕಾರ ನೇಮಕ ಮಾಡಿದೆ. ಹೆಲಿಕಾಪ್ಟರ್ ದುರಂತದಲ್ಲಿ ಬಿಪಿನ್ ರಾವತ್...

LEAVE A REPLY

Please enter your comment!
Please enter your name here

Latest News

- Advertisement -
- Advertisement -
- Advertisement -
- Advertisement -