ಮುಂಬೈ : ಗಡಿ ವಿಷಯದಲ್ಲಿ ಈಗ ಯಾವುದೇ ರಾಜಕೀಯ ಮಾಡಬಾರದು ಎಂದು ಮುಖ್ಯಮಂತ್ರಿ ಏಕನಾಥ್ ಶಿಂಧೆ ಹೇಳಿದ್ದಾರೆ. ಮಹಾರಾಷ್ಟ್ರ ವಿಧಾನಸಭೆ ಕಲಾಪದಲ್ಲಿ ಅವರು ಈ ಹೇಳಿಕೆ ನೀಡಿದ್ದಾರೆ.
ಮಹಾರಾಷ್ಟ್ರ ಮತ್ತು ಕರ್ನಾಟಕದ ನಡುವಿನ ಗಡಿ ವಿವಾದಕ್ಕೆ ಕೇಂದ್ರ ಗೃಹ ಸಚಿವರು ಇದೇ ಮೊದಲ ಬಾರಿಗೆ ಮಧ್ಯಸ್ಥಿಕೆ ವಹಿಸಿದ್ದಾರೆ. ಈ ವಿಷಯದಲ್ಲಿ ಈಗ ಯಾವುದೇ ರಾಜಕೀಯ ಬೇಡ, ಗಡಿ ನಿವಾಸಿಗಳೊಂದಿಗೆ ನಾವು ಒಟ್ಟಾಗಿ ನಿಲ್ಲಬೇಕು ಎಂದು ಮುಖ್ಯಮಂತ್ರಿ ಹೇಳಿದರು.