ಬೆಂಗಳೂರು : ಗಡಿ ವಿವಾದದಿಂದ ರಾಜ್ಯಗಳ ನಡುವೆ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದ್ದು, ಮಹಾಪುಂಡರು ಕರ್ನಾಟಕದ ಬಸ್ ಗಳ ಮೇಲೆ ಮಸಿ ಬಳಿಯುತ್ತಿದ್ದಾರೆ. ಇತ್ತ ಕರ್ನಾಟಕದಲ್ಲಿ ಮಹಾರಾಷ್ಟ್ರ ಭಕ್ತರ ಮೇಲೆ ಹಲ್ಲೆ ಮಾಡಲಾಗಿದೆ ಎಂದು ಸುಳ್ಳು ಸುದ್ದಿ ಹರಡಿದೆ.
ಈ ಕುರಿತು ಬೆಳಗಾವಿ ಎಸ್ಪಿ ಡಾ. ಸಂಜೀವ್ ಪಾಟೀಲ್ ಸ್ಪಷ್ಟನೆ ನೀಡಿದ್ದು, ಬೆಳಗಾವಿ ಜಿಲ್ಲೆಯಲ್ಲಿ ಮಹಾರಾಷ್ಟ್ರದ ಭಕ್ತರ ಮೇಲೆ ಹಲ್ಲೆ ಆಗಿಲ್ಲ. ಈ ರೀತಿಯ ಯಾವುದೇ ಪ್ರಕರಣ ಆಗಿಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ.
ಮಹಾರಾಷ್ಟ್ರದವರ ಮೇಲೆ ಹಲ್ಲೆ ಆಗಿದೆ ಎಂದು ಸುಳ್ಳು ಸುದ್ದಿ ಹರಡಲಾಗುತ್ತಿದೆ. ಈ ರೀತಿಯ ಯಾವುದೇ ಪ್ರಕರಣ ಆಗಿಲ್ಲ. ಎರಡೂ ಕಡೆ ಯಾವುದೇ ರೀತಿಯ ಅಹಿತಕರ ಘಟನೆ ನಡೆದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.