spot_img
spot_img
spot_img
34.1 C
Belagavi
Monday, May 29, 2023
spot_img

ಶೈಕ್ಷಣಿಕ ಜೀವನದ ಸದವಕಾಶ ಸಮರ್ಥವಾಗಿ ಬಳಸಿಕೊಳ್ಳಿ

ಬೆಳಗಾವಿ: ಶೈಕ್ಷಣಿಕ ಜೀವನದಲ್ಲಿ ಸಿಗುವ ಸದವಕಾಶಗಳನ್ನು ಸಮರ್ಥವಾಗಿ ಬಳಸಿಕೊಂಡಾಗ ಮಾತ್ರ ಜೀವನದಲ್ಲಿ ಅತ್ಯುನ್ನತ ಗುರಿ ಸಾಧಿಸಲು ಸಾಧ್ಯ ಎಂದು ಬೆಳಗಾವಿ ಗ್ರಾಮೀಣ ಕ್ಷೇತ್ರದ ಶಾಸಕಿ ಲಕ್ಷ್ಮೀ ಹೆಬ್ಬಾಳಕರ ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.

ಬೆನಕನಹಳ್ಳಿಯ ಬೆನ್‌ಸನ್ಸ್ ಇಂಟರ್ ನ್ಯಾಷನಲ್ ಅಕಾಡೆಮಿಯವರು ಹಮ್ಮಿಕೊಂಡಿದ್ದ ವಾರ್ಷಿಕ ಕ್ರೀಡಾ ದಿನ  ಕಾರ್ಯಕ್ರಮ ಉದ್ಘಾಟಿಸಿ, ಅವರು ಮಾತನಾಡಿದರು.

ಕೇವಲ ಪಠ್ಯಕ್ರಮವನ್ನು ಓದಿ ಎಲ್ಲವನ್ನೂ ಸಾಧಿಸಲಾಗದು. ಬೌದ್ಧಿಕ ಬೆಳವಣಿಗೆಗೆ ಶಾರೀರಿಕ ಸದೃಢತೆ ಕೂಡ ಅವಶ್ಯಕ. ಈ ನಿಟ್ಟಿನಲ್ಲಿ ಓದಿನೊಂದಿಗೆ ಕ್ರೀಡಾ ಚಟುವಟಿಕೆಗಳಲ್ಲಿ ಪಾಲ್ಗೊಳ್ಳುವುದು ಅವಶ್ಯಕ. ವಿದ್ಯಾರ್ಥಿಗಳು ಈ ನಿಟ್ಟಿನಲ್ಲಿ ಸ್ವಯಂಪ್ರೇರಣೆಯಿಂದ ಕ್ರೀಡೆಗಳಲ್ಲಿ ಭಾಗವಹಿಸಿ ಸಾಧನೆಯ ಶಿಖರವೇರಬೇಕು ಎಂದರು.

ಕ್ರೀಡೆಯಲ್ಲಿ ಸಾಧನೆಗೈದವರಿಗೆ ಇಂದು ಸರಕಾರ ನಾನಾ ರೀತಿಯ ಅವಕಾಶಗಳನ್ನು ನೀಡಿದೆ. ಎಷ್ಟೋ ಜನ ಕ್ರೀಡೆಯಲ್ಲಿ ಸಾಧನೆಯಿಂದಲೇ ಉದ್ಯೋಗಾವಕಾಶ, ಉನ್ನತ ಸ್ಥಾನಮಾನಗಳನ್ನು ಗಳಿಸಿದ್ದಿದೆ. ಅಂಥವರನ್ನು ಪ್ರೇರಣೆಯಾಗಿಟ್ಟುಕೊಂಡು ವಿದ್ಯಾರ್ಥಿಗಳು ಸಾಧನೆಯಲ್ಲಿ ತೊಡಗಬೇಕು ಎಂದು ಲಕ್ಷ್ಮೀ ಹೆಬ್ಬಾಳಕರ ಸಲಹೆ ನೀಡಿದರು. ಇದಕ್ಕೂ ಮುನ್ನ ಅವರು ಕ್ರೀಡಾ ಧ್ವಜಾರೋಹಣ ನೆರವೇರಿಸಿದರು.

ಈ ಸಂದರ್ಭದಲ್ಲಿ ಪ್ರಿನ್ಸಿಪಾಲ್ ಜೋಸ್ಫಿನ್ ಗುಂಟಿ, ಅಕಾಡೆಮಿಕ್ ನಿರ್ದೇಶಕಿ ರಚನಾ ಗೊರ್ಲೆ ಹಾಗೂ ಬೆನ್‌ಸನ್ಸ್ ನ ಎಲ್ಲ ಪದಾಧಿಕಾರಿಗಳು ಹಾಗೂ ಮಕ್ಕಳು ಉಪಸ್ಥಿತರಿದ್ದರು.

Related News

ಈಶಾನ್ಯ ಭಾರತದ ಮೊದಲ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿಗೆ ಚಾಲನೆ ನೀಡಿದ ಪ್ರಧಾನಿ ಮೋದಿ

ಪ್ರಧಾನಿ ಮೋದಿ ಅವರು ಈಶಾನ್ಯ ಭಾರತದ ಮೊದಲ ವಂದೇ ಭಾರತ್ ಎಕ್ಸ್ಪ್ರೆಸ್ರೈಲಿಗೆ ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಚಾಲನೆ ನೀಡಿದರು. ವಂದೇ ಭಾರತ್ ಪಶ್ಚಿಮ ಬಂಗಾಳದ ನ್ಯೂ ಜಲ್ಪೈಗುರಿ ನಿಲ್ದಾಣದಿಂದ ಅಸ್ಸಾಂನ ಗುವಾಹಟಿಗೆ ಹೊರಟಿದೆ. ಈ...

ಮಣಿಪುರದಲ್ಲಿ ಮತ್ತೆ ತಲೆ ಎತ್ತಿದ ಹಿಂಸಾಚಾರ ಪೊಲೀಸ್‌ ಸೇರಿದಂತೆ ಐವರು ಸಾವು

ಇಂಫಾಲ್‌: ಕಳೆದ ಕೆಲವು ದಿನಗಳಿಂದ ಸಹಜ ಸ್ಥಿತಿಗೆ ಮರಳುತ್ತಿದ್ದ ಮಣಿಪುರದಲ್ಲಿ ಹಿಂಸಾಚಾರ ಮತ್ತೆ ಭುಗಿಲೆದ್ದಿದೆ. ಭಾನುವಾರ ಮಣಿಪುರದಲ್ಲಿ ನಡೆದ ಹಿಂಸಾಚಾರದಲ್ಲಿ ಪೊಲೀಸ್‌ ಸೇರಿದಂತೆ ಐವರು ಸಾವನ್ನಪ್ಪಿದ್ದು, 12 ಮಂದಿ ಗಾಯಗೊಂಡಿದ್ದಾರೆ. ಇದರಿಂದಾಗಿ ಕಳೆದ ಒಂದು...

LEAVE A REPLY

Please enter your comment!
Please enter your name here

Latest News

- Advertisement -
- Advertisement -
- Advertisement -
- Advertisement -