spot_img
spot_img
spot_img
24.8 C
Belagavi
Thursday, June 1, 2023
spot_img

ಸಚಿವ ಲಿಂಬಾವಳಿ ಹೆಸರು ಬರೆದಿಟ್ಟು ವ್ಯಕ್ತಿ ಆತ್ಮಹತ್ಯೆ 

ಬೆಂಗಳೂರು: ಸಚಿವ ಅರವಿಂದ್ ಲಿಂಬಾವಳಿ ಸೇರಿ ಆರು ಜನರ ಹೆಸರು ಬರೆದಿಟ್ಟು ತಲೆಗೆ ಗುಂಡು ಹಾರಿಸಿಕೊಂಡು ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡ ಬೆಂಗಳೂರು ದಕ್ಷಿಣ ತಾಲೂಕಿನ ನೆಟ್ಟಿಗೆರೆ ಗ್ರಾಮದ ಬಳಿ ಘಟನೆ ನಡೆದಿದೆ.

47 ವರ್ಷದ ಪ್ರದೀಪ್ ಕಾರ್ ನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಹೆಚ್‌ಎಸ್‌ಆರ್ ಲೇಔಟ್ ನಿವಾಸಿಯಾಗಿರುವ ಪ್ರದೀಪ್ , ಮಾಜಿ ಸಚಿವ ಅರವಿಂದ ಲಿಂಬಾವಳಿ ಸೇರಿದಂತೆ ಆರು ಜನರ ಹೆಸರನ್ನು ಡೆತ್ ನೋಟ್ ನಲ್ಲಿ ಉಲ್ಲೇಖಿಸಿದ್ದಾರೆ ಎನ್ನಲಾಗಿದೆ.

ಡೆತ್ ನೋಟ್ ನಲ್ಲಿ ಅವರು ಹಲವು ವಿಷಯ ಪ್ರಸ್ತಾಪಿಸಿದ್ದು, ಆರು ಜನರ ಮೇಲೆ ಕ್ರಮ ಜರುಗಿಸಿ ನನ್ನ ಸಾವಿಗೆ ನ್ಯಾಯ ಒದಗಿಸಿ ಎಂದು ಬರೆಯಲಾಗಿದೆ. ಹೆಸರುಗಳ ಮುಂದೆ ಮೊಬೈಲ್ ನಂಬರ್ ಬರೆದು ಪ್ರದೀಪ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಹಣಕಾಸಿನ ವ್ಯವಹಾರದಲ್ಲಿ ವಂಚನೆ ಹಿನ್ನೆಲೆ ಪ್ರದೀಪ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕಗ್ಗಲಿಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Related News

ಶೆಟ್ಟರ್​, ಲಕ್ಷ್ಮಣ್ ಸವದಿ ನಮ್ಮ ನಾಯಕರು ಯಾವ ಸಮಯದಲ್ಲಿ ಏನು ಮಾಡಬೇಕೆಂದು ನಮಗೆ ಗೊತ್ತಿದೆ

ಬೆಳಗಾವಿ: ಯಾವ ಸಮಯದಲ್ಲಿ ಏನು ಮಾಡಬೇಕೆಂದು ನಮಗೆ ಗೊತ್ತಿದೆ. ನಾವು ಅವರ ಜೊತೆಗೆ ಇದ್ದೇವೆ, ಇಡೀ ಪಕ್ಷ ಅವರ ಜೊತೆ ಇದೆ. ಜಗದೀಶ್​ ಶೆಟ್ಟರ್, ಲಕ್ಷ್ಮಣ ಸವದಿ ನಮ್ಮ ಪಕ್ಷದ ನಾಯಕರು ಎಂದು...

ರಾಜ್ಯದ ವಿವಿದೆಡೆ ಲೋಕಾಯುಕ್ತ ದಾಳಿ

ಬೆಂಗಳೂರು:  ಅತ್ತ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು(ಮೇ 31) ಬೆಳ್ಳಂಬೆಳಗ್ಗೆ ಎನ್​ಐಎ ಅಧಿಕಾರಿಗಳು ದಾಳಿ ಮಾಡಿದ್ದರೆ, ಮತ್ತೊಂದೆಡೆ ರಾಜ್ಯದ ವಿವಿದೆಡೆ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದಾರೆ. ತುಮಕೂರಿನ ಕೆಐಎಡಿಬಿ ಅಧಿಕಾರಿ ಮನೆ ಮೇಲೆ ದಾಳಿ ತುಮಕೂರಿನ ಕೆಐಎಡಿಬಿ...

LEAVE A REPLY

Please enter your comment!
Please enter your name here

Latest News

- Advertisement -
- Advertisement -
- Advertisement -
- Advertisement -