ಚಿಕ್ಕೋಡಿ: ಬಿಜೆಪಿ – ಜೆಡಿಎಸ್ ಮೈತ್ರಿ ವಿರೋಧಿಸಿ ಆ ಪಕ್ಷಗಳ ತೊರೆಯಲು ಹಲವು ಜನ ನಿರ್ಧರಿಸಿದ್ದಾರೆಂಬ ಡಿಕೆ ಶಿವಕುಮಾರ್ ಹೇಳಿಕೆ ವಿಚಾರವಾಗಿ ಮಾತನಾಡಿದ ಕಾಂಗ್ರೆಸ್ ಶಾಸಕ ಲಕ್ಷ್ಮಣ್ ಸವದಿ, ಬಹಳಷ್ಟು ಜನ ಬಿಜೆಪಿ, ಜೆಡಿಎಸ್ ತೊರೆದು ಕಾಂಗ್ರೆಸ್ ಸೇರಲು ಆಸಕ್ತಿ ತೋರಿಸುತ್ತಿದ್ದಾರೆ ಎಂದರು.
ಅಥಣಿ ತಾಲೂಕಿನ ನಂದಗಾಂವ ಗ್ರಾಮದಲ್ಲಿ ಮಾತನಾಡಿದ ಅವರು, ಕಾಲ ಕೂಡಿ ಬರಬೇಕು, ಲೋಕಸಭೆ ಸಮೀಪಿಸಿದಾಗ ಹಾಲಿ ಶಾಸಕರು, ಮಾಜಿ ಶಾಸಕರು ಇರಬಹುದು. ಬಹಳಷ್ಟು ಜನ ಬಿಜೆಪಿ, ಜೆಡಿಎಸ್ ಬಿಟ್ಟು ಕಾಂಗ್ರೆಸ್ ಸೇರುವ ಆಸಕ್ತಿ ತೋರಿಸುತ್ತಿದ್ದಾರೆ. ಕಾಲ ಕೂಡಿ ಬಂದ ಸಂದರ್ಭದಲ್ಲಿ ಅದನ್ನ ಪ್ರಕಟ ಮಾಡುತ್ತೇವೆ ಎಂದರು.
ರಮೇಶ್ ಕತ್ತಿ ಕಾಂಗ್ರೆಸ್ ಸೇರುತ್ತಾರೆ ಎಂಬ ಬಗ್ಗೆ ರಾಜಕೀಯ ವಲಯದಲ್ಲಿ ಚರ್ಚೆ ವಿಚಾರವಾಗಿ ಮಾತನಾಡಿದ ಅವರು, ಇಲ್ಲಿಯವರೆಗೆ ಆ ಬಗ್ಗೆ ಚರ್ಚೆ ಆಗಿಲ್ಲ. ಕಾಲ ಕೂಡಿ ಬಂದಾಗ ಚರ್ಚೆ ಬಂದಾಗ ಆ ಬಗ್ಗೆ ಆಲೋಚನೆ ಮಾಡುತ್ತೇವೆ ಎಂದರು.
ತೆಲಂಗಾಣದಲ್ಲಿ ನಾವೆಲ್ಲರೂ ಒಗ್ಗೂಡಿ ಪಕ್ಷವನ್ನು ಗೆಲ್ಲಿಸಿದ್ದೇವೆ. ತೆಲಂಗಾಣದಲ್ಲಿ ಕಾಂಗ್ರೆಸ್ಗೆ ಜನರು ಆಶೀರ್ವಾದ ಮಾಡಿದ್ದಾರೆ ಎಂದು ಸಚಿವ ಜಮೀರ್ ಅಹ್ಮದ್ ಖಾನ್ ತಿಳಿಸಿದ್ದಾರೆ.
70ಕ್ಕಿಂತ ಹೆಚ್ಚು ಸ್ಥಾನಗಳನ್ನು ಗೆಲ್ಲುತ್ತೇವೆ. ಸಿದ್ದರಾಮಯ್ಯ, ಡಿಕೆ & ನಾನು ಟೀಂ...
ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಮತದಾರರ ತೀರ್ಪನ್ನು ಒಪ್ಪಲೇಬೇಕು. ಗ್ಯಾರಂಟಿಗೆ ವಿರೋಧ ಮಾಡಿದವರು ಗ್ಯಾರಂಟಿ ಘೋಷಣೆ ಮಾಡಿದರು ಎಂದು ವಿಜಯಪುರದಲ್ಲಿ ಬೃಹತ್ ಕೈಗಾರಿಕೆ ಸಚಿವ ಎಂ.ಬಿ.ಪಾಟೀಲ್ ಹೇಳಿದರು. ಲೋಕಸಭೆ ಚುನಾವಣೆಯಲ್ಲಿ ನಾವು ಗೆಲ್ಲುವ ವಿಶ್ವಾಸ ಇದೆ....