ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರ ಗ್ಯಾರಂಟಿಗಳ ಅಡ್ಡಪರಿಣಾಮದಿಂದ ಜನರಿಗೆ ಪಕ್ಷಪಾತವು ಅರಾಜಕತೆ ಸೃಷ್ಟಿಸಿದೆ. ಅವೈಜ್ಞಾನಿಕ, ಅರೆಬೆಂದ ‘ಶಕ್ತಿ’ ಯೋಜನೆಯ ಫಲವಾಗಿ ಇವತ್ತು ಖಾಸಗಿ ಸಂಚಾರ ವ್ಯವಸ್ಥೆ ಬುಡಮೇಲಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಟ್ವೀಟ್ ಮೂಲಕ ಕಿಡಿಕಾರಿದ್ದಾರೆ.
ಬಂದ್ ನಿಂದ ಖಾಸಗಿ ಸಾರಿಗೆ ಜಾಲ ಸಂಪೂರ್ಣ ಸ್ಥಗಿತವಾಗಿದೆ. ಶಾಲಾ ಮಕ್ಕಳು, ಸಾರ್ವಜನಿಕರು, ವಿಮಾನ ನಿಲ್ದಾಣಕ್ಕೆ ತೆರಳುವವರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಹಣ್ಣು, ತರಕಾರಿ ಸೇರಿ ಅಗತ್ಯ ವಸ್ತುಗಳ ಸಾಗಣೆಯಲ್ಲಿ ವ್ಯತ್ಯಯ ಆಗಿ ಸರ್ಕಾರದ ಪ್ರತಿಷ್ಠೆಯಿಂದ ಸಾಮಾನ್ಯ ಜನರು ಸಂಕಷ್ಟಪಡುವಂತಾಗಿದೆ ಎಂದಿದ್ದಾರೆ.
ಸರಕಾರವು ಖಾಸಗಿ ಸಾರಿಗೆ ಒಕ್ಕೂಟದವರ ಬೇಡಿಕೆಗಳನ್ನು ಪ್ರತಿಷ್ಠೆ ಪಕ್ಕಕ್ಕಿಟ್ಟು ಮಾನವೀಯತೆಯಿಂದ ಪರಿಶೀಲಿಸಬೇಕು. ಅವರ ಬೇಡಿಕೆಗಳು ಈಡೇರಿಸಲಾಗದ ಅಸಾಧ್ಯ ಡಿಮ್ಯಾಂಡ್ ಗಳೇನೂ ಅಲ್ಲ. ಅವರಿಗೂ ಕುಟುಂಬಗಳಿವೆ, ತಂದೆತಾಯಿ, ಮಕ್ಕಳು ಇರುತ್ತಾರೆ ಎನ್ನುವುದನ್ನು ಸರಕಾರ ಮರೆಯಬಾರದು ಎಂದಿದ್ದಾರೆ.